ಬೆಳಗಾವಿ: ರಾಜ್ಯದಲ್ಲಿರುವ ಸಣ್ಣ ಕಾಫಿ ಬೆಳೆಗಾರರು ಹಾಗೂ ಕಾಫಿ ತೋಟಗಳ ಕಾರ್ಮಿಕರು ಹಾಗೂ ಅವರ ಕುಟುಂಬಗಳಿಗೆ ಆರೋಗ್ಯ ವಿಮೆ ಜಾರಿಗೊಳಿಸಲು ಕುರಿತಂತೆ ಕೇಂದ್ರ ನೆರವು ಪಡೆದು ಅನುಷ್ಠಾನಕ್ಕೆ ಕ್ರಮ ಕೈಗೊಳ್ಳುವುದಾಗಿ ತೋಟಗಾರಿಕೆ ಹಾಗೂ ಯೋಜನೆ ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರಾದ ಮುನಿರತ್ನ ಅವರು ವಿಧಾನ ಪರಿಷತ್‌ಗೆ ತಿಳಿಸಿದರು.
ಸದಸ್ಯೆ ವೀಣಾ ಅಚ್ಚಯ್ಯ ಅವರ ಪ್ರಶ್ನೆಗೆ ಉತ್ತರಿಸಿದ ಅವರು ಕಾಫಿ ಮಂಡಳಿ ವತಿಯಿಂದ ಸಣ್ಣ ಕಾಫಿ ಬೆಳೆಗಾರರು ಹಾಗೂ ಕಾರ್ಮಿಕರಿಗೆ ಆರೋಗ್ಯ ವಿಮಾ ಯೋಜನೆ ಜಾರಿಗೊಳಿಸುವ ಪ್ರಸ್ತಾವ ಸರ್ಕಾರ ಮುಂದಿಲ್ಲ. ಆದಾಗ್ಯೂ ಪ್ಲಾಂಟೇಷನ್ ಕಾರ್ಮಿಕ ಕಾಯ್ದೆ ೧೯೫೧ರ ಅವಕಾಶಗಳ ವ್ಯಾಪ್ತಿಗೆ ಒಳಪಟ್ಟಿದ್ದು ಸದರಿ ಕಾಯ್ದೆಯಲ್ಲಿರುವ ವೈದ್ಯಕೀಯ ಸೌಲಭ್ಯಗಳನ್ನು ನೀಡಲಾಗುತ್ತಿದೆ ಎಂದರು.
Health insurance for coffee plantation workers

























Discussion about this post