ಬೆಂಗಳೂರು: ರಾಜ್ಯದಲ್ಲಿ ಇಂದು ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ನವೆಂಬರ್ 7ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ, ಉತ್ತರಕನ್ನಡ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಮಳೆ ಸಾಧ್ಯತೆಯಿದೆ. ನವೆಂಬರ್ 7ರ ನಂತರ ಮಳೆ ಪ್ರಮಾಣ ಕಡಿಮೆಯಾಗಲಿದೆ.
ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿಯಲ್ಲಿ ನವೆಂಬರ್ 7ರವರೆಗೂ ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ಕೊಪ್ಪಳದಲ್ಲಿ ಮುಂದಿನ ಎರಡು ದಿನ ಮಳೆಯಾಗಲಿದೆ. ಕಲಬುರಗಿ, ರಾಯಚೂರು, ವಿಜಯಪುರ ಹಾಗು ಯಾದಗಿರಿಯಲ್ಲಿ ಮಳೆ ಪ್ರಮಾಣ ಕಡಿಮೆ ಇರಲಿದೆ.
ದ.ಒಳನಾಡಿನ ಜಿಲ್ಲೆಗಳ ಕೆಲವೆಡೆ ಗುಡುಗುಸಹಿತ ಮಳೆಯಾಗುವ ಸಾಧ್ಯತೆ ಇರುವುದರಿಂದ ಭಾನುವಾರದವರೆಗೂ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಹಾಗು ತುಮಕೂರು ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ನೀಡಲಾಗಿದೆ.
ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣವಿದ್ದು, ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇದನ್ನೂ ಓದಿ:Covacin: ಕೊನೆಗೂ ಕೋವ್ಯಾಕ್ಸಿನ್ ಲಸಿಕೆ ತುರ್ತು ಬಳಕೆಗೆ WHO ಅನುಮತಿ
ಇದನ್ನೂ ಓದಿ:e Paper – November 4, 2021
Heavy thunderstorms likely in the state

























Discussion about this post