ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಇನ್ನೂ ಎರಡು ದಿನ ಮಳೆಯಾಗುವ ಸಾಧ್ಯತೆ ಇದೆ. ಮೆಜೆಸ್ಟಿಕ್, ಕೆ.ಆರ್.ಮಾರ್ಕೆಟ್, ಮಲ್ಲೇಶ್ವರಂ, ಶಾಂತಿನಗರ, ಬಸವನಗುಡಿ, ಬನಶಂಕರಿ ಸೇರಿದಂತೆ ಹಲವೆಡೆ ಮಳೆಯಾಗುತ್ತಿದ್ದು, ಮೋಡಕವಿದ ವಾತಾವರಣವಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ರಾಜ್ಯದಲ್ಲಿ ಇಂದು, ನಾಳೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
Heavy rain

























Discussion about this post