ಬೆಂಗಳೂರು: ಇಂದಿನಿಂದ ನಾಲ್ಕು ದಿನದವರೆಗೆ ಕರಾವಳಿ, ಮಲೆನಾಡು ಸೇರಿದಂತೆ ಇತರ ಭಾಗಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ, ಮಲೆನಾಡು, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಹಲವು ಭಾಗಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಜಿಲ್ಲೆಗಳಲ್ಲಿ ನ. 1 ರಿಂದ ನ.4 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ನವೆಂಬರ್ 4 ರಂದು ಮಂಡ್ಯ, ಚಿಕ್ಕಬಳ್ಳಾಪುರ, ಮೈಸೂರು, ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ರಾಮನಗರ ಜಿಲ್ಲೆಗಳಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
Discussion about this post