ಚಿಕ್ಕಮಗಳೂರು: ನೂತನ ಗೃಹ ಖಾತೆ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಆರಗ ಜ್ಞಾನೇಂದ್ರ ಅವರು ಇಂದು ಮಲೆನಾಡು ಭಾಗದಲ್ಲಿ ಮಳೆಹಾನಿ ಪ್ರದೇಶಗಳಿಗೆ ಪ್ರವಾಸ ನಡೆಸಿದರು.
ಎನ್‌ಆರ್ ಪುರ ತಾಲೂಕಿನ ಕಡಹಿನಬೈಲು ಗ್ರಾಮದಲ್ಲಿ ಮಳೆಯಿಂದ ಹಾನಿಗೊಳಗಾದ ರಸ್ತೆ ಸೇತುವೆ ಪ್ರದೇಶಗಳನ್ನು ಪರಿಶೀಲನೆ ನಡೆಸಿದರು. ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕ ಟಿ.ಡಿ ರಾಜೇಗೌಡ ಮಾಜಿ ಸಚಿವ ಡಿ.ಎನ್ ಜೀವರಾಜ್, ಚಿಜಿಲ್ಲಾಧಿಕಾರಿ ಕೆ.ಎನ್ ರಮೇಶ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂಎಸ್ ಅಕ್ಷಯ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಜಿ ಪ್ರಭು, ಉಪವಿಭಾಗಧಿಕಾರಿ ಎಚ್‌ಎಲ್ ನಾಗರಾಜ್ ಸೇರಿದಂತೆ ಅನೇಕ ಅಧಿಕಾರಿಗಳು ಉಪಸ್ಥಿತರಿದ್ದರು.
ನೂತನ ಸಚಿವರನ್ನು ಮುಖ್ಯ ಮಂತ್ರಿಗಳ ಮಾಜಿ ರಾಜಕೀಯ ಕಾರ್ಯದರ್ಶಿ ಡಿ.ಎನ್. ಜೀವರಾಜ್ ಹೂಗುಚ್ಚ ಗಳನ್ನು ನೀಡಿ ಅಭಿನಂದಿಸಿದರು. ಸ್ಥಳೀಯ ಶಾಸಕ ಟಿ ಡಿ ರಾಜೇಗೌಡ ಆತ್ಮೀಯವಾಗಿ ಬರಮಾಡಿಕೊಂಡರು

























Discussion about this post