ದಾವಣಗೆರೆ: ಕಾಂಗ್ರೆಸ್‌ನಲ್ಲಿ ಡಿಕೆಶಿ, ಸಿದ್ದರಾಮಯ್ಯ ಬಳಿಕ ಸಿಎಂ ರೇಸ್‌ನಲ್ಲಿ ನಾನೂ ಇದ್ದೇನೆ ಎಂದು ಶಾಮನೂರು ಶಿವಶಂಕರಪ್ಪ ಬಹಿರಂಗವಾಗಿ ಹೇಳಿಕೆ ನೀಡಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ನಾನೇ ಸಿಎಂ ಆಗುತ್ತೇನೆ, ಎಂಎಲ್‌ಎ ಚುನಾವಣೆಯಲ್ಲಿ ನಾನು ಪ್ರಬಲವಾಗಿ ಸಿಎಂ ಸ್ಥಾನ ಕೇಳುತ್ತೇನೆ ಎಂದು ಸ್ಪೋಟಕ ಹೇಳಿಕೆ ನೀಡಿದ್ದಾರೆ
ಇನ್ನು ನಮಗೆ ಯಾರ ಬೆಂಬಲವೂ ಬೇಡ, ಎಂಎಲ್‌ಸಿ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಭಾರಿಸುತ್ತೆ, ಎಲ್ಲಾ ಕಡೆ ಕಾಂಗ್ರೆಸ್‌ಗೆ ಒಳ್ಳೆಯ ಅಲೆ ಇದೆ. ಎಂಎಲ್‌ಸಿ ಚುನಾವಣೆ ಗೆಲ್ಲುತ್ತೇವೆ, ಮುಂದೆ ಎಂಎಲ್‌ಎ ಚುನಾವಣೆಯನ್ನು ಗೆಲ್ಲುತ್ತೇವೆ, 140 ಸ್ಥಾನ ಗೆದ್ದು ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ, ಅಂದು ನಾನು ಕೂಡ ಸಿಎಂ ಸ್ಥಾನದ ಆಕಾಂಕ್ಷಿಯಾಗಿರುತ್ತೇನೆ ಎಂದಿದ್ದಾರೆ.
ಡಿಕೆಶಿ, ಸಿದ್ದರಾಮಯ್ಯರಂತೆ ನಾನು ಸಿಎಂ ಸ್ಥಾನ ಕೇಳೆ ಕೇಳುತ್ತೇನೆ, ಕೊನೆಯಲ್ಲಿ ಹೈಕಮಾಂಡ್ ತೀರ್ಮಾನ ಮಾಡುತ್ತೆ ಎಂದು ಶಾಮನೂರು ಶಿವಶಂಕರಪ್ಪ ಹೇಳಿಕೆ ನೀಡುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.
I am also in the CM race

























Discussion about this post