ಚಿಕ್ಕಮಗಳೂರು: ನಾನು ದೇಶಭಕ್ತಿ ಸಂಘಟನೆ ಆರ್‌ಎಸ್‌ಎಸ್‌ನ ಸ್ವಯಂ ಸೇವಕ. ಕೊತ್ವಾಲ್ ರಾಮಚಂದ್ರನ ಚೇಲಾ ಅಲ್ಲ. ಕೊತ್ವಾಲ್ ರಾಮಚಂದ್ರನ ಚೇಲಾಗಳು ಆದವರಿಗೆ ಉಳಿದವರು ಹಾಗೇ ಕಾಣುತ್ತಾರೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಹೇಳಿದ್ದಾರೆ.
ದತ್ತಪೀಠದಲ್ಲಿ ಭಾನುವಾರ ಮಾಧ್ಯಮಗಳೊಂದಿಗೆ ಮಾತನಾಡಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಲೂಟಿ ರವಿ ಹೇಳಿಕೆಗೆ ಪ್ರತಿಕ್ರೀಯಿಸಿ ಅವರು, ನಾನು ಶಾಸಕನಾದ ಮೇಲೆ ನನ್ನ ಆಸ್ತಿಯಲ್ಲಿ ಹೆಚ್ಚಳ ಆಗಿಲ್ಲ. ಅಕ್ರಮ ಸಂಪತ್ತು ಮಾಡ್ಕೊಂಡು ಜೈಲು-ಬೇಲು ಕಂಡವರು ಇನ್ನೊಬ್ಬರ ಬಗ್ಗೆ ಆರೋಪ ಮಾಡಿದ್ದುಮ ನಾನು ದತ್ತಪೀಠ-ಜನಪರ ಹೋರಾಟ ಮಾಡಿ ಜೈಲಿಗೆ ಹೋಗಿದ್ದೇನೆ ಎಂದರು.
ಹಣ ಲೂಟಿ ಮಾಡಿ, ಇನ್ನೊಬ್ಬರ ಆಸ್ತಿ ಲೂಟಿ ಮಾಡಿ ಜೈಲಿಗೆ ಹೋಗಿಲ್ಲ. ಅಕ್ರಮ ಸಂಪತ್ತು ಗಳಿಸಿ ಜೈಲಿಗೆ ಹೋಗಿರುವ, ಬೇಲ್‌ನಲ್ಲಿರುವ ಯಾವುದೇ ಕುಖ್ಯಾತಿ ನನಗಿಲ್ಲ ಎಂದು ಡಿಕೆಶಿ ವಿರುದ್ಧ ವಾಗ್ದಾಳಿ ನಡೆಸಿದ್ದರು. ಕೋಟಿ ರವಿ ಎಂದು ನನ್ನ ಬಗ್ಗೆ ಟೀಕೆ ಮಾಡಿದರೆ ನಾನು ಕೋಟಿ ಜನರ ಹೃದಯದಲ್ಲಿ ಸ್ಥಾನ ಪಡೆದ ರವಿ ಎಂದು ಅಂದುಕೊಳ್ಳುತ್ತೇನೆ. ೨೦೦೪ರ ನಂತರ ಶಾಸಕನಾದ ಮೇಲೆ ಅಂದಿನಿಂದ ಇಂದಿನವರೆಗೆ ನನ್ನ ಆಸ್ತಿ ಹೆಚ್ಚಳವಾಗಿಲ್ಲ. ನಾನು ಜನಪರ ಕೆಲಸಗಳನ್ನು ಮಾಡುತ್ತ ಬರುತ್ತಿದ್ದೇನೆ ಎಂದು ತಿರುಗೇಟು ನೀಡಿದರು.
I am not Kotwal Ramachandra’s Chela

























Discussion about this post