ನವದೆಹಲಿ: ಮುಂಬರುವ ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಟೀಂ ಇಂಡಿಯಾ ಆಡಳಿತ ಮಂಡಳಿಯು ಪ್ರತಿಭಾವಂತ ಆಟಗಾರ ಶುಭಮನ್ ಗಿಲ್ ಅವರನ್ನು ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್ ಕಳುಹಿಸುವ ಸಾಧ್ಯತೆ ಇದೆ. ವಿರಾಟ್ ಕೊಹ್ಲಿಯಂತಹ ಆಟಗಾರರ ಅನುಪಸ್ಥಿತಿಯಲ್ಲಿ ಅವರು ಸಮರ್ಥವಾಗಿ ಮಧ್ಯಮ ಕ್ರಮಾಂಕವನ್ನು ನಿಭಾಯಿಸಲಿದ್ದಾರೆಯೇ ಎಂಬುದು ಇದರಿಂದ ಸ್ಪಷ್ಟವಾಗಲಿದೆ ಎಂದು ಮೂಲಗಳು ತಿಳಿಸಿವೆ.
ಯುವ ಆಟಗಾರ ಅಜಿಂಕ್ಯಾ ರೆಹಾನೆ ಅವರು ಈ ಟೆಸ್ಟ್ ಸರಣಿಯಲ್ಲಿ ಭಾರತ ತಂಡದ ನಾಯಕತ್ವ ವಹಿಸಲಿದ್ದಾರೆ. ಕಾನ್ಪುರದಲ್ಲಿ ಸರಣಿಯ ಮೊದಲ ಟೆಸ್ಟ್ ಪಂದ್ಯ ನವೆಂಬರ್ 25ರಂದು ಆರಂಭವಾಗಲಿದೆ.
ಅನುಭವಿ ಆರಂಭಿಕ ಆಟಗಾರ ರೋಹಿತ್ ಶರ್ಮಾ ಕೂಡ ಟೆಸ್ಟ್ ಸರಣಿಯಿಂದ ಹೊರಗುಳಿಯಲಿದ್ದು, ವಿಶ್ರಾಂತಿ ಪಡೆಯಲಿದ್ದಾರೆ. ಇದು ಯುವ ಆಟಗಾರರಿಗೆ ತಮ್ಮ ಸಾಮರ್ಥ್ಯವನ್ನು ಪಣಕ್ಕಿಡಲು ಸಿಕ್ಕಿದ ಸೂಕ್ತ ಅವಕಾಶ ಎಂದೇ ಕ್ರಿಕೆಟ್ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ. ಒಂದು ವೇಳೆ ಶುಭಮನ್ ಗಿಲ್ ಅವರು ಮಧ್ಯಮ ಕ್ರಮಾಂಕದಲ್ಲಿ ಯಶಸ್ವಿಯಾದಲ್ಲಿ ಮುಂದಿನ ದಕ್ಷಿಣ ಆಫ್ರಿಕಾ ಪ್ರವಾಸದ ವೇಳೆ ತಂಡಕ್ಕೆ ಹೆಚ್ಚು ನೆರವಾಗಲಿದೆ. ಆ ವೇಳೆಗೆ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಕೂಡ ತಂಡವನ್ನು ಸೇರಿಕೊಳ್ಳಲಿದ್ದಾರೆ.
ಇದನ್ನೂ ಓದಿ: ಐಪಿಎಲ್ 2022: ಚೆನ್ನೈಯಲ್ಲಿ ವಿದಾಯ ಪಂದ್ಯ ಆಡುವ ಬಯಕೆ ವ್ಯಕ್ತಪಡಿಸಿದ ಎಂ.ಎಸ್.ಧೋನಿ
ಕನ್ನಡಿಗ ಕೆ.ಎಲ್. ರಾಹುಲ್ ಈಗಾಗಲೇ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ತಮ್ಮ ಸಾಮರ್ಥ್ಯ ಸಾಬೀತು ಪಡಿಸಿದ್ದು ನ್ಯೂಜಿಲೆಂಡ್ ವಿರುದ್ಧದ ಸರಣಿಯಲ್ಲಿಯೂ ಉತ್ತಮ ಪ್ರದರ್ಶನ ನೀಡುವ ಭರವಸೆ ಇದೆ. ರಾಹುಲ್ ಅವರು ಮಯಂಕ್ ಅಗರ್ವಾಲ್ ಜೊತೆ ಆರಂಭಿಕರಾಗಿ ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ.
ಗಿಲ್ ಅವರನ್ನು ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್ಗೆ ಕಳುಹಿಸುವುದು ಉತ್ತಮ ಯೋಜನೆ ಎಂದು ಟೀಂ ಇಂಡಿಯಾದ ಮಾಜಿ ಆಯ್ಕೆಗಾರ ಜತಿನ್ ಪರಂಜಪೆ ಹೇಳಿದ್ದಾರೆ.
ಶುಭಮನ್ ಮನವರನ್ನು ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್ಗೆ ಕಳುಹಿಸುವುದರಿಂದ ಭಾರತ ತಂಡಕ್ಕೆ ಒಳಿತಾಗಲಿದೆ ಎಂದು ಅವರು ಹೇಳಿದ್ದಾರೆ.
ರಾಹುಲ್ ದ್ರಾವಿಡ್ ಅವರು ಮುಖ್ಯ ಕೋಚ್ ಆಗಿ ಜವಾಬ್ದಾರಿ ವಹಿಸಿಕೊಂಡ ಬಳಿಕ ನ್ಯೂಜಿಲೆಂಡ್ ವಿರುದ್ಧದ ಮೊದಲ ಟ್ವೆಂಟಿ-20 ಸರಣಿಯನ್ನು 3 – 0 ಅಂತರದಿಂದ ಕ್ಲೀನ್ಸ್ವೀಪ್ ಮಾಡಿರುವ ಭಾರತ ತಂಡವು, ಅನುಭವಿ ಆಟಗಾರರ ಅನುಪಸ್ಥಿತಿಯಲ್ಲಿ ಟೆಸ್ಟ್ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡುವ ಆಶಾವಾದದಿಂದ ಇದೆ.
ಇನ್ನಷ್ಟು ಸುದ್ದಿ…
ವಿರಾಮದ ವೇಳೆ ವಿರಾಟ್ ಸೆಲ್ಫೀ: ಅನುಷ್ಕಾರನ್ನು ‘ಮೈ ರಾಕ್’ ಎಂದ ಕಿಂಗ್ ಕೊಹ್ಲಿ
ಟ್ವೆಂಟಿ-20 ಕ್ರಿಕೆಟ್ನಲ್ಲಿ ಅತಿಹೆಚ್ಚು ರನ್: ವಿರಾಟ್ ಕೊಹ್ಲಿಯ ಹಿಂದಿಕ್ಕಿದ ಮಾರ್ಟಿನ್ ಗಪ್ಟಿಲ್
ನಾಯಕ ರೋಹಿತ್, ರಾಹುಲ್ ಅಬ್ಬರದ ಬ್ಯಾಟಿಂಗ್: ನ್ಯೂಜಿಲೆಂಡ್ ವಿರುದ್ಧ ಟ್ವೆಂಟಿ-20 ಸರಣಿ ಗೆದ್ದ ಭಾರತ
Discussion about this post