ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಕ್ರಿಕೆಟ್ ಟೂರ್ನಿಯ 2022ರ ಮೆಗಾ ಹರಾಜು ಬೆಂಗಳೂರಿನಲ್ಲಿ ನಡೆಯುವ ಸಾಧ್ಯತೆ ಇದೆ. ಫೆಬ್ರುವರಿ 6–7 ಅಥವಾ 7–8ರಂದು ನಡೆಯುವ ಸಾಧ್ಯತೆ ಇದೆ ಎಂದು ಐಪಿಎಲ್ ಆಡಳಿತ ಮಂಡಳಿಯ ಮೂಲಗಳು ತಿಳಿಸಿವೆ.
ಮೆಗಾ ಹರಾಜು ಪ್ರಕ್ರಿಯೆಯನ್ನು ಹೈದರಾಬಾದ್‌ನಲ್ಲಿ ನಡೆಸುವುದೇ ಅಥವಾ ಬೆಂಗಳೂರಿನಲ್ಲಿ ಆಯೋಜಿಸುವುದೇ ಎಂಬ ಬಗ್ಗೆ ಇನ್ನೂ ಚರ್ಚೆ ನಡೆಯುತ್ತಿದೆ ಎನ್ನಲಾಗಿದೆ.
ಹೆಚ್ಚಿನ ಫ್ರಾಂಚೈಸಿಗಳು ಈಗಿನ ಮಾದರಿಯ ಹರಾಜು ಪ್ರಕ್ರಿಯೆಯನ್ನು ಕೈಬಿಡಬೇಕೆಂದು ಒತ್ತಾಯಿಸುತ್ತಿವೆ. ಹೀಗಾಗಿ ಈ ವರ್ಷದ್ದೇ ಕೊನೆಯ ಹರಾಜು ಆಗಿರುವ ಸಾಧ್ಯತೆಯೂ ಇದೆ ಎಂದು ಹೇಳಲಾಗುತ್ತಿದೆ.
ಇದನ್ನೂ ಓದಿ: Cricket: ರಾಹುಲ್ ದ್ರಾವಿಡ್ ವಿರಾಟ್ ಕೊಹ್ಲಿಯನ್ನು ಮತ್ತೊಮ್ಮೆ ಯಶಸ್ಸಿನ ಹಾದಿಗೆ ತರಬಲ್ಲರು: ಸಬಾ ಕರೀಮ್
ಕೋವಿಡ್–19 ಸ್ಥಿತಿ ವಿಪರೀತ ಎನ್ನುಷ್ಟರ ಮಟ್ಟಿಗೆ ತೀವ್ರಗೊಳ್ಳದಿದ್ದರೆ ಭಾರತದಲ್ಲೇ ಹರಾಜು ಪ್ರಕ್ರಿಯೆ ನಡೆಸಲಾಗುವುದು. ಫೆಬ್ರುವರಿ 7 ಹಾಗೂ 8ರಂದು ಬೆಂಗಳೂರಿನಲ್ಲಿ ನಡೆಸುವ ಬಗ್ಗೆ ಚಿಂತನೆ ನಡೆಸಲಾಗಿದೆ. ಸಿದ್ಧತೆಗಳು ನಡೆಯುತ್ತಿವೆ ಎಂದು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ಅಧಿಕಾರಿಯೊಬ್ಬರೂ ತಿಳಿಸಿದ್ದಾರೆ.
ಹರಾಜು ಪ್ರಕ್ರಿಯೆ ಯುಎಇಯಲ್ಲಿ ನಡೆಯಲಿದೆ ಎಂಬ ವದಂತಿ ಇತ್ತೀಚೆಗೆ ಹಬ್ಬಿತ್ತು. ಇದನ್ನು ಬಿಸಿಸಿಐ ನಿರಾಕರಿಸಿದೆ.
ಆದರೆ ದೇಶದಲ್ಲಿ ಹೆಚ್ಚುತ್ತಿರುವ ಒಮಿಕ್ರಾನ್ (ಕೊರೊನಾ ವೈರಸ್‌ನ ಹೊಸ ರೂಪಾಂತರ) ಪ್ರಕರಣಗಳು ಕಳವಳಕ್ಕೆ ಕಾರಣವಾಗಿದೆ. ಎಲ್ಲ ಪರಿಸ್ಥಿತಿಗಳನ್ನು ಗಮನದಲ್ಲಿಟ್ಟುಕೊಂಡು ಅಂತಿಮ ತೀರ್ಮಾನಕ್ಕೆ ಬರಲಾಗುತ್ತದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.
ಇದನ್ನೂ ಓದಿ: Cricket: 2018-20ರ ಅವಧಿಯಲ್ಲಿ ಕ್ರಿಕೆಟ್‌ನಿಂದ ನಿವೃತ್ತಿ ಹೊಂದುವ ಬಗ್ಗೆ ಗಂಭೀರವಾಗಿ ಆಲೋಚಿಸಿದ್ದೆ: ಅಶ್ವಿನ್
Discussion about this post