ಬೆಂಗಳೂರು: ಭಾನುವಾರದಂದು ನಡೆದ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರರೋಗ ವಿಜ್ಞಾನ ಸಂಸ್ಥೆಯ (ನಿಮ್ಹಾನ್ಸ್) ಸಂಸ್ಥೆಯ 25ನೇ ಘಟಿಕೋತ್ಸವದಲ್ಲಿ ಕನ್ನಡವನ್ನು 3ನೇ ಸ್ಥಾನಕ್ಕೆ ತಳ್ಳಿ ಅವಮಾನ ಮಾಡಲಾಗಿದೆಯೆಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ತಮ್ಮ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಘಟಿಕೋತ್ಸವ ಫಲಕದಲ್ಲಿ ಹಿಂದಿ ಮತ್ತು ಇಂಗ್ಲಿಷ್ ಭಾಷೆಗಳ ನಂತರದ ಸ್ಥಾನದಲ್ಲಿ ಕನ್ನಡ ಇದ್ದುದೇ ಅವರ ಅಸಮಾಧಾನಕ್ಕಾಗಿ ಕಾರಣವಾಗಿದೆ.
ತಮ್ಮ ಈ ಅಸಮಾಧಾನವನ್ನು ಸೋಮವಾರ ಸರಣಿ ಟ್ವೀಟ್‌ಗಳ ಮೂಲಕ ವ್ಯಕ್ತಪಡಿಸಿದ ಅವರು “ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಒಬ್ಬ ಸಚಿವರು, ಹಾಗೂ ಇಬ್ಬರು ಸಂಸದರಿದ್ದ ವೇದಿಕೆಯಲ್ಲಿ ಕನ್ನಡವನ್ನು 3ನೇ ಸ್ಥಾನಕ್ಕೆ ತಳ್ಳಿರುವುದು ಅಕ್ಷಮ್ಯ ಎಂದು ತಮ್ಮ ಆಕ್ರೋಶ ಹೊರಹಾಕಿದ್ದಾರೆ.
ಅವರ ಟ್ವೀಟ್‌ನ ಪೂರ್ಣ ಪಾಠ ಹೀಗಿದೆ;
“ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರರೋಗ ವಿಜ್ಞಾನ ಸಂಸ್ಥೆಯ (ನಿಮ್ಹಾನ್ಸ್) 25ನೇ ಘಟಿಕೋತ್ಸವದಲ್ಲಿ ಹಿಂದಿಗೆ ಅಗ್ರಸ್ಥಾನ! ಇಂಗ್ಲೀಷ್‌ಗೆ ದ್ವಿತೀಯ ಸ್ಥಾನ! ಕನ್ನಡಕ್ಕೆ ಮೂರನೇ ಸ್ಥಾನ!! ಅಯ್ಯೋ.. ಕನ್ನಡ ಕಟುಕರ ಕೈಯ್ಯಲ್ಲಿ ಸಿಕ್ಕಿಕೊಂಡಿದೆ ಎನ್ನುವುದಕ್ಕೆ ಇದಕ್ಕಿಂತ ನಿದರ್ಶನ ಇನ್ನೊಂದಿಲ್ಲ.”
ವೇದಿಕೆಯ ಮೇಲೆ ರಾಜ್ಯದ ಮುಖ್ಯಮಂತ್ರಿ, ಒಬ್ಬ ಸಚಿವರು, ಇಬ್ಬರು ಸಂಸದರು ಇದ್ದರು. ಸಾವಿರಾರು ವರ್ಷಗಳ ಘನ ಇತಿಹಾಸವುಳ್ಳ ಅಭಿಜಾತ ಭಾಷೆ ಕನ್ನಡವನ್ನು 3ನೇ ಸ್ಥಾನಕ್ಕಿಳಿಸಿದ್ದ ಆ ವೇದಿಕೆಯ ಮೇಲೆ ಕೂರಲು ಅವರಿಗೆ ಮನಃಸಾಕ್ಷಿಯಾದರೂ ಹೇಗೆ ಬಂತು? ಈ ಮೂವರ ಕನ್ನಡಾಭಿಮಾನ ಶೂನ್ಯತೆಗೆ ನನ್ನ ಧಿಕ್ಕಾರ.
ರಾಷ್ಟ್ರೀಯ ಪಕ್ಷಗಳ ದಾದಾಗಿರಿ ದಿನೇದಿನೇ ಹೆಚ್ಚುತ್ತಿದೆ. ನಮ್ಮ ನಾಡು-ನುಡಿಯ ಮೇಲೆ ದಿಲ್ಲಿ ರಾಜಕಾರಣ ನಡೆಸುತ್ತಿರುವ ಆಕ್ರಮಣ ಸ್ವಾತಂತ್ರ್ಯಕ್ಕೂ ಮುನ್ನ ವಿದೇಶಿ ಆಕ್ರಮಣಕಾರರು ನಡೆಸಿದ ದಾಳಿಗಿಂತ ಹೇಯವಾಗಿದೆ.
ದೇಶ ಮೊದಲು ಎಂದು ಕೂಗುವ ನಾಲಿಗೆಗಳಿಗೆ ಕರ್ನಾಟಕದಲ್ಲಿ ಕನ್ನಡವೇ ಮೊದಲು ಎಂದು ಹೇಳಲು ಏನಾಗಿದೆ? ಕನ್ನಡವನ್ನು ಕರ್ನಾಟದಿಂದಲೇ ಮೂಲೋತ್ಪಾಟನೆ ಮಾಡಬೇಕು ಎಂಬುದು ಬಿಜೆಪಿಯ ಹಿಡನ್ ಅಜೆಂಡಾವೇ?
ಕನ್ನಡಕ್ಕೆ ಆಗುತ್ತಿರುವ ಅನ್ಯಾಯಗಳು ಒಂದೆರಡಲ್ಲ. ಕೇಂದ್ರ ಪರೀಕ್ಷೆಯಲ್ಲಿ ಅನ್ಯಾಯ, ನೇಮಕಾತಿಯಲ್ಲಿ ನಮ್ಮವರ ಕಡೆಗಣನೆ. ರಾಜಕಾರಣದಲ್ಲೂ ಕನ್ನಡಿಗರಿಗೆ ಪಂಗನಾಮ. ಒಕ್ಕೂಟ ವ್ಯವಸ್ಥೆಯಲ್ಲಿ ಪರಕೀಯರಂತೆ ಎರಡನೇ ದರ್ಜೆ ಪ್ರಜೆಗಳಾಗಿ ನಾವು ಕೊಳೆಯಬೇಕಾ? ಸ್ವಾಭಿಮಾನಿ ಕನ್ನಡಿರೆಲ್ಲರೂ ಸಿಡಿದೇಳೋಣ. ಕರ್ನಾಟಕದಲ್ಲಿ ಕನ್ನಡವೇ ಮೊದಲು” ಎಂದು ಕುಮಾರಸ್ವಾಮಿ ಅವರು ಟ್ವೀಟ್‌ನಲ್ಲಿ ಹೇಳಿದ್ದಾರೆ.
ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರರೋಗ ವಿಜ್ಞಾನ ಸಂಸ್ಥೆ (ನಿಮ್ಹಾನ್ಸ್) 25ನೇ ಘಟಿಕೋತ್ಸವದಲ್ಲಿ ಹಿಂದಿಗೆ ಅಗ್ರಸ್ಥಾನ! ಇಂಗ್ಲೀಷ್ʼಗೆ ದ್ವಿತೀಯ ಸ್ಥಾನ! ಕನ್ನಡಕ್ಕೆ ಮೂರನೇ ಸ್ಥಾನ!! ಅಯ್ಯೋ.. ಕನ್ನಡ ಕಟುಕರ ಕೈಯ್ಯಲ್ಲಿ ಸಿಕ್ಕಿಕೊಂಡಿದೆ ಎನ್ನುವುದಕ್ಕೆ ಇದಕ್ಕಿಂತ ನಿದರ್ಶನ ಇನ್ನೊಂದಿಲ್ಲ.1/6 pic.twitter.com/QxdU1ThDq3
— H D Kumaraswamy (@hd_kumaraswamy) October 11, 2021
JDS Leader HD Kumaraswamy reacts strongly about the 3rd place given to Kannada at NIMHANS Convocation
ಇದನ್ನೂ ಓದಿ: Politics: ಮನಗೂಳಿ ವ್ಯಕ್ತಿತ್ವಕ್ಕೆ ಮಸಿ ಬಳಿಯದಿರಿ: ಡಿಕೆ ಶಿವಕುಮಾರ್ ಹೇಳಿಕೆಗೆ ಎಚ್‌ಡಿ ಕುಮಾರಸ್ವಾಮಿ ಆಕ್ಷೇಪ
ಇದನ್ನೂ ಓದಿ: Weather Update: ರಾಜ್ಯದ ಬಹುತೇಕ ಕಡೆಗಳಲ್ಲಿ ಮಂಗಳವಾರದ ಬೆಳಗಿನವರೆಗೂ ಮಳೆಯ ಮುನ್ಸೂಚನೆ
Discussion about this post