ಬೆಂಗಳೂರು : ರಾಜ್ಯದಲ್ಲಿ ಡಿಸೆಂಬರ್ ೧೦ರಂದು ವಿಧಾನ ಪರಿಷತ್ನ 25 ಸ್ಥಾನಗಳಿಗೆ ಚುನಾವಣೆ ( MLC Election ) ನಡೆಯಲಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಡಿಸೆಂಬರ್ 8 ರಿಂದ ಡಿಸೆಂಬರ್ 10 ರ ವರೆಗೆ ಮೂರು ದಿನಗಳ ಮದ್ಯ ಮಾರಾಟಕ್ಕೆ (Liquor Shops bund ) ಬ್ರೇಕ್ ಬಿದ್ದಿದೆ. ರಾಜ್ಯದಲ್ಲಿನ ಬಾರ್, ಪಬ್, ವೈನ್ ಸ್ಟೋರ್ಗಳು ( Bar wines shop bund )ಬಂದ್ ಆಗಲಿವೆ.
ಡಿಸೆಂಬರ್ 10 ರಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆಯ ವರೆಗೆ ರಾಜ್ಯದಾದ್ಯಂತ ಚುನಾವಣೆ ನಡೆಯಲಿದೆ. ಅಲ್ಲದೇ ಡಿಸೆಂಬರ್ 14 ರಂದು ಚುನಾವಣಾ ಫಲಿತಾಂಶ ಹೊರ ಬೀಳಲಿದೆ. ಈ ಹಿನ್ನೆಲೆಯಲ್ಲಿ ಚುನಾವಣೆಗಾಗಿ ರಾಜ್ಯ ಚುನಾವಣಾ ಆಯೋಗ ಸಿದ್ದತೆಗಳನ್ನು ಮಾಡಿಕೊಂಡಿದೆ.
ಈ ಹಿನ್ನೆಲೆಯಲ್ಲಿ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳು ಮದ್ಯ ಮಾರಾಟಕ್ಕೆ ನಿಷೇಧ ಹೇರಿ ಈಗಾಗಲೇ ಆದೇಶ ಹೊರಡಿಸಿದ್ದಾರೆ. ಹೀಗಾಗಿ ಡಿಸೆಂಬರ್ 7 ರಿಂದ ಡಿಸೆಂಬರ್ 10 ರ ಮಧ್ಯರಾತ್ರಿ ಯವರೆಗೆ ಮದ್ಯ ಮಾರಾಟ ಸಂಪೂರ್ಣವಾಗಿ ಬಂದ್ ಆಗಲಿದೆ.
ರಾಜ್ಯದಲ್ಲಿ ಮೂರು ದಿನಗಳ ಕಾಲ ಮದ್ಯ ನಿಷೇಧ ಮಾಡಿರುವುದು ಮದ್ಯ ಮಾರಾಟಗಾರರಿಗೆ ಶಾಕ್ ಕೊಟ್ಟಂತಾಗಿದೆ. ಮೂರು ದಿನಗಳ ಬಾಲ ಎಣ್ಣೆ ಮಾರಾಟಕ್ಕೆ ಅನುಮತಿ ನಿರಾಕರಿಸಿರುವ ಹಿನ್ನೆಲೆಯಲ್ಲಿ ಬಾರೀ ನಷ್ಟ ಉಂಟಾಗಲಿದೆ ಎಂದು ಮದ್ಯ ಮಾರಾಟಗಾರರು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

























Discussion about this post