ಶಿವಮೊಗ್ಗ: ಅಂಗನವಾಡಿಗಳನ್ನು ಎರಡು ದಿನಕ್ಕೊಮ್ಮೆ ನಡೆಸಲು ಸೂಚಿಸಲಾಗಿದೆ. ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಇರುವ ಎಲ್‌ಕೆಜಿ-ಯುಕೆಜಿಯನ್ನು ಹಂತ ಹಂತವಾಗಿ ಆರಂಭಿಸಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದರು.
ನಗರದ ಹೊರವಲಯದ ಮಲವಗೊಪ್ಪ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ 1ರಿಂದ 5ನೇ ತರಗತಿ ಮಕ್ಕಳನ್ನು ಸ್ವಾಗತಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಸ್ತುತ ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭದ ಬಗ್ಗೆ ಆಲೋಚನೆ ಮಾಡಿಲ್ಲ. ಸರ್ಕಾರಿ ಶಾಲೆಗಳಲ್ಲಿ ಆ ವ್ಯವಸ್ಥೆ ಇನ್ನೂ ಜಾರಿಗೊಂಡಿಲ್ಲ ಎಂದರು.
ಈಗಷ್ಟೇ 1ರಿಂದ 5ನೇ ರಗತಿ ಶಾಲೆಗಳು ಆರಂಭಗೊಂಡಿವೆ. ಹಾಗಾಗಿ ಪಠ್ಯ ಕಡಿತಗೊಳಿಸುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ. ಅವಶ್ಯಕತೆ ಬಿದ್ದರೆ ಮುಂದಿನ ದಿನಗಳಲ್ಲಿ ಆ ಬಗ್ಗೆ ಆಲೋಚಿಸಲಾಗುವುದು. ಡಿಸೆಂಬರ್‌ನಲ್ಲಿ ಮತ್ತೊಮ್ಮೆ ಸಭೆ ನಡೆಸಿ ಪರೀಕ್ಷೆಗೆ ಪಠ್ಯ ಕಡಿತಗೊಳಿಸುವ ಬಗ್ಗೆ ಚರ್ಚೆ ನಡೆಸಲಾಗುವುದು ಎಂದರು.
ಇದನ್ನೂ ಓದಿ: e Paper – October 26, 2021
ಇದನ್ನೂ ಓದಿ: Vaccine: ಲಸಿಕೆಯಿಂದ ಮಾತ್ರ ಕೊರೋನಾ ನಿಯಂತ್ರಣ ಸಾಧ್ಯ

























Discussion about this post