ಬೆಂಗಳೂರು: ಹೆಲಿಕಾಪ್ಟರ್ ದುರಂತದಲ್ಲಿ ಮೃತಪಟ್ಟ ಸಿಡಿಎಸ್ ಬಿಪಿನ್ ರಾವತ್ ಸಾವಿನ ಬಗ್ಗೆ ಫೇಸ್ ಬುಕ್ ನಲ್ಲಿ ಆಕ್ಷೇಪಾರ್ಹ ಪೋಸ್ಟ್ ಹಾಕಿದ್ದ ಮೈಸೂರು ಮೂಲದ ವ್ಯಕ್ತಿಯನ್ನು ಪೋಲಿಸರು ಬಂಧಿಸಿದ್ದಾರೆ.
ಮೈಸೂರು ಮೂಲದ ಟಿ.ಕೆ.ವಸಂತ್ ಕುಮಾರ್ (40) ಬಂಧಿತ ವ್ಯಕ್ತಿ.
ಈತ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಲ್ಯಾಬ್ ನಲ್ಲಿ ಟೆಕ್ನಿಷಿಯನ್ ಆಗಿ ಕೆಲಸ ಮಾಡುತ್ತಿದ್ದಾನೆ. ವಸಂತ್ ಕುಮಾರ್ ನನ್ನು ಬಂಧಿಸಿದ ಬೆಂಗಳೂರಿನ ವಿಧಾನಸೌಧ ಪೋಲಿಸರು ಈತನ ಮೇಲೆ ಐಪಿಸಿ ಸೆಕ್ಷನ್ 505 ಎಫ್ ಐಆರ್ ದಾಖಲಿಸಿ ಬಂಧಿಸಿದ್ದಾರೆ.
ಇವನ್ನಲ್ಲದೆ ಕಾರ್ಕಳದ ಒಬ್ಬ ಹಾಗೂ ಬೆಂಗಳೂರಿನ ಮತ್ತೊಬ್ಬ ಕೂಡ ಇದೇ ರೀತಿ ಫೇಸ್ ಬುಕ್ ನಲ್ಲಿ ಆಕ್ಷೇಪಾರ್ಹ ಪೋಸ್ಟ್ ಹಾಕಿದ್ದು, ಇನ್ನು ಇವರ ಬಗ್ಗೆ ಸಂಪೂರ್ಣ ಮಾಹಿತಿ ಸಿಕ್ಕಿಲ್ಲ ಎಂದು ಮಂಗಳೂರು ಪೋಲಿಸ್ ಕಮಿಷನರ್ ಶಶಿಕುಮಾರ್ ತಿಳಿಸಿದ್ದಾರೆ.
ಹೀಗೆ ವಿಕೃತಿ ಮೆರೆಯುವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಡಿಜಿಪಿಗೆ ಕಟ್ಟು ನಿಟ್ಟಿನ ಸೂಚನೆ ನೀಡಿದ್ದರು. ಇದರ ಆಧಾರದ ಮೇಲೆ ಪೋಲಿಸರು ಕ್ರಮ ಕೈಗೊಂಡಿದ್ದಾರೆ.
Man arrested

























Discussion about this post