ಮಂಗಳೂರು: ಕಳೆದ ಎರಡು ದಿನಗಳ ಹಿಂದೆ ಮಂಗಳೂರು ನಗರದ ಕೋಡಿಕಲ್ ಬಳಿಯ ನಾಗಬನದ ನಾಗಬಿಂಬವನ್ನು ಗುಡಿಯಿಂದ ಹೊರ ಬಿಸಾಡಿದ ಘಟನೆ ನಡೆದಿದ್ದು, ಶಾಸಕ ಡಾ.ಭರತ್ ಶೆಟ್ಟಿ ವೈ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇಂತಹ ಮೂರನೇ ಪ್ರಕರಣ ಸಾಮಾಜಿಕ ಜಾಲತಾಣದ ಮೂಲಕ ವೈರಲ್ ಆಗುತ್ತಿದ್ದಂತೆ ವಿಶ್ವ ಹಿಂದೂ ಪರಿಷತ್- ಬಜರಂಗದಳ ಹಾಗೂ ಸ್ಥಳೀಯ ಭಕ್ತರು ಸಹ ಸ್ಥಳದಲ್ಲಿ ದಿಢೀರ್ ಪ್ರತಿಭಟನೆ ನಡೆಸಿ ಅಪರಾಧಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿದರು.
ಮಂಗಳೂರು ಉತ್ತರ ಕ್ಷೇತ್ರದಲ್ಲಿ ಇದು ಮೂರನೇ ಪ್ರಕರಣವಾಗಿದ್ದು, ವಿಶೇಷ ತಂಡ ರಚಿಸಿ ಪ್ರಕರಣ ಭೇದಿಸುವಂತೆ ಶಾಸಕರು ಪೊಲೀಸ್ ಅಧಿಕಾರಿಗಳಿಗೆ ಶಾಸಕ ಡಾ.ಭರತ್ ಶೆಟ್ಟಿ ವೈ ಸೂಚಿಸಿದರು. ಭವಿಷ್ಯದಲ್ಲಿ ಇಂತಹ ಯಾವುದೇ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸುವಂತೆ ಪೊಲೀಸ್ ಅಧಿಕಾರಿಗಳಿಗೆ ಶಾಸಕರೂ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಶರಣ್ ಪಂಪ್ವೆಲ್, ಕಿರಣ್ಕುಮಾರ್ ಕೋಡಿಕಲ್, ಮನೋಜ್ ಕುಮಾರ್ ಉಪಸ್ಥಿತರಿದ್ದರು.
ಮಂಗಳೂರು ಪೊಲೀಸ್ ಆಯುಕ್ತ ಶಶಿಕುಮಾರ್, ಡಿಸಿಪಿ ಹರಿರಾಂ ಶಂಕರ್ ಸ್ಥಳಕ್ಕೆ ಭೇಟಿ ನೀಡಿ ಸೂಕ್ತ ಕ್ರಮ ಜರಗಿಸುವ ಭರವಸೆ ನೀಡಿದರು.
ಇದನ್ನೂ ಓದಿ: ಅಪ್ಪು ನಿಧನದ ಸುದ್ದಿಯನ್ನು ನಂಬಲೇ ಆಗಲಿಲ್ಲ..ಮಂಗ್ಲಿ ಅಶ್ರುತರ್ಪಣ
Discussion about this post