ಚಿಕ್ಕಮಗಳೂರು : ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‌ಗೆ ನಡೆಯುವ ಚುನಾವಣೆಯಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ನಿಗಾ ವಹಿಸಲು ಚುನಾವಣಾ ಆಯೋಗದ ವೀಕ್ಷಕ ಮನೋಜ್ ಜೈನ್ ಅವರು ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ವಿಧಾನ ಪರಿಷತ್ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು ಚುನಾವಣಾ ಆಯೋಗದ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಜಿಲ್ಲೆಯಲ್ಲಿ ನಿಷ್ಪಕ್ಷಪಾತ ಚುನಾವಣೆ ನಡೆಯುವಂತೆ ಅಧಿಕಾರಿಗಳು ಗಮನಹರಿಸಬೇಕು ಎಂದು ಸೂಚಿಸಿದರು.
ಕೆಳ ಹಂತದ ಸಿಬ್ಬಂದಿಗಳ ಚುನಾವಣಾ ಕರ್ತವ್ಯದ ಮೇಲೆ ಅಧಿಕಾರಿಗಳು ಗಮನಹರಿಸಬೇಕು. ಸ್ಥಳೀಯವಾಗಿ ಎದುರಾಗುವ ಸಮಸ್ಯೆಗಳನ್ನು ತಕ್ಷಣವೇ ಪರಿಹರಿಸಬೇಕು. ಅಧಿಕಾರಿಗಳು ತಮ್ಮ ಚುನಾವಣಾ ಅಧಿಕಾರವನ್ನು ಪರಿಣಾಮಕಾರಿಯಾಗಿ ನಿಭಾಯಿಸಬೇಕು. ಇದರಿಂದ ಚುನಾವಣಾ ಪ್ರಕ್ರಿಯೆಯು ಸುಗಮವಾಗಿ ನಡೆಯಲು ಅನುಕೂಲವಾಗಲಿದೆ ಎಂದು ಅವರು ತಿಳಿಸಿದರು.
ಜಿಲ್ಲಾಧಿಕಾರಿ ಕೆ.ಎನ್. ರಮೇಶ್ ಮಾತನಾಡಿ, ವಿಧಾನ ಪರಿಷತ್ ಚುನಾವಣೆಗೆ ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಮತಗಟ್ಟೆ, ಸಿಬ್ಬಂದಿ ನಿಯೋಜನೆ, ವಾಹನ ಮತ್ತಿತರ ವ್ಯವಸ್ಥೆಯನ್ನು ಈಗಾಗಲೇ ಸಿದ್ಧತೆ ಮಾಡಲಾಗಿದೆ. ಜತೆಗೆ ಸಿಬ್ಬಂದಿಗಳಿಗೆ ಅಗತ್ಯ ತರಬೇತಿ ನೀಡಲಾಗುತ್ತದೆ ಎಂದರು.
ಅಭ್ಯರ್ಥಿಗಳ ಚುನಾವಣಾ ಪ್ರಚಾರ ಕಾರ್ಯವನ್ನು ವೀಡಿಯೋ ಮಾಡಲಾಗುತ್ತದೆ. ಅಕ್ರಮ ಮದ್ಯ ಮಾರಾಟ ತಡೆಗೆ ತಂಡ ರಚಿಸಲಾಗಿದೆ ಎಂದು ತಿಳಿಸಿದರು. ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎಚ್.ಅಕ್ಷಯ್, ಅಪರ ಜಿಲ್ಲಾಧಿಕಾರಿ ಬಿ.ಆರ್. ರೂಪಾ, ಸೇರಿದಂತೆ ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.
Congress: ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಧಿಕೃತ 17 ಮಂದಿ ಅಭ್ಯರ್ಥಿಗಳ ಪಟ್ಟಿ ರಿಲೀಸ್
MLC Election : ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಯಾಗಿ ಗಾಯತ್ರಿ ಶಾಂತೇಗೌಡ ನಾಮಪತ್ರ ಸಲ್ಲಿಕೆ

























Discussion about this post