ಚಿಕ್ಕಮಗಳೂರು : ಯುವಕನೋರ್ವನನ್ನು ಹಾಡಹಗಲೇ ಮಾರಕಾಸ್ತ್ರಗಳಿಂದ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿರುವ ಘಟನೆ ತಾಲ್ಲೂಕಿನ ಮತ್ತಾವರ ಸಮೀಪದ ನಡೆದಿದೆ.
ಹತ್ಯೆಗೊಳಗಾದ ಯುವಕನನ್ನು ಶಾಂತೇಗೌಡರ ಪುತ್ರ ಪ್ರಕೃತ್(29) ಎಂದು ಗುರುತಿಸಲಾಗಿದೆ. ಕಾಫಿ ತೋಟಕ್ಕೆ ಹೋಗಿ ಹಣ್ಣಿನೊಂದಿಗೆ ಬೈಕಿನಲ್ಲಿ ಹಿಂದಿರುಗುತ್ತಿದ್ದ ಸಂದರ್ಭದಲ್ಲಿ ಈ ಹತ್ಯೆ ನಡೆದಿದ್ದು ಸ್ಥಳೀಯರಲ್ಲಿ ಭೀತಿ ಹುಟ್ಟಿಸಿದೆ.
ಯುವಕನನ್ನು ಮಾರಕ ಆಯುಧಗಳಿಂದ ಬರ್ಬರವಾಗಿ ಕೊಚ್ಚಿ ರುಂಡ, ಮುಂಡಗಳನ್ನು ಬೇರ್ಪಡಿಸಲಾಗಿದೆ. ಘಟನೆ ಸುದ್ದಿ ತಿಳಿಯುತ್ತಿದ್ದಂತೆ ನೋಡಲು ಭಾರೀ ಸಂಖ್ಯೆಯಲ್ಲಿ ಜನ ಆಗಮಿಸಿದ್ದರು.
ದೀಪಾವಳಿ ಹಬ್ಬದ ದಿನವೇ ಇಂತಹ ಘಟನೆ ನಡೆದಿದ್ದು ಕುಟುಂಬದಲ್ಲಿ ದಿಗ್ಬ್ರಮೆ ಮೂಡಿಸಿದೆ. ಘಟನೆಗೆ ವ್ಯಕ್ತಿಗತ ಮದುವೆ ವಿಷಯದ ವೈಷಮ್ಯ ಕಾರಣ ಇರಬಹುದು ಎಂದು ಶಂಕಿಸಲಾಗಿದ್ದು, ಘಟನೆ ಸಂಬಂಧ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಹೆಚ್.ಅಕ್ಷಯ್, ಗ್ರಾಮಾಂತರ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

























Discussion about this post