ಚಿಕ್ಕಮಗಳೂರು : ನಕ್ಸಲ್ ಚಟುವಟಿಕೆಗಳಲ್ಲಿ ಭಾಗಿಯಾಗಿ ಇಬ್ಬರು ವ್ಯಕ್ತಿಗಳು ತಲೆಮರೆಸಿಕೊಂಡಿದ್ದು ಅವರ ಸುಳಿವು ನೀಡಿದ್ದಲ್ಲಿ ತಲಾ ಹತ್ತು ಲಕ್ಷ ರೂಪಾಯಿ ನಗದು ಬಹುಮಾನ ನೀಡುವುದಾಗಿ ರಾಷ್ಟ್ರೀಯ ತನಿಖಾ ಸಂಸ್ಥೆಯು ಘೋಷಣೆ ಮಾಡಿದೆ.
ರಾಯಚೂರು ಜಿಲ್ಲೆಯ ಅರೋಲಿ ಗ್ರಾಮದ ಕುಡುಡಿ ಮುಖ್ಯ ರಸ್ತೆಯ ದೂತರ ಮಠದ ಅಂಬೇಡ್ಕರ್ ಕಾಲನಿಯ ನಿವಾಸಿಯಾಗಿದ್ದ ಮಹೇಶ್ ಅಲಿಯಾಸ್ ಜಯಣ್ಣ ಅಲಿಯಾಸ್ ಜಾನ್ ಅಲಿಯಾಸ್ ಮಾರಪ್ಪ ಎಂಬುವವನು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುತ್ಲೂರು ನಿವಾಸಿ ಸುಂದರಿ ಅಲಿಯಾಸ್ ಗೀತಾ ಅಲಿಯಾಸ್ ಸಿಂಧು ಎಂಬ ಇಬ್ಬರು ನಕ್ಸಲ್ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದವರು ತಲೆಮರೆಸಿ ಕೊಂಡಿದ್ದಾರೆ. ಇವರು ಪಶ್ಚಿಮಘಟ್ಟಗಳಲ್ಲಿ ನಡೆದ ನಕ್ಸಲ್ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದರು ಎನ್ನಲಾಗಿದೆ.
ಈ ಹಿಂದಿನ ದಿನಗಳಲ್ಲಿ ನಕ್ಸಲ್ ಚಟುವಟಿಕೆಗಳು ಹೆಚ್ಚಾಗಿ ಕಂಡು ಬರುತ್ತಿದ್ದ ಪಶ್ಚಿಮಘಟ್ಟದ ಅರಣ್ಯ ಪ್ರದೇಶಗಳಲ್ಲಿ ಕ್ರಮೇಣ ನಕ್ಸಲರ ಚಲನವಲನಗಳು ಕಡಿಮೆಯಾಗುತ್ತಾ ಬಂದಿದೆ, ಪ್ರಸ್ತುತ ರಾಷ್ಟ್ರೀಯ ತನಿಖಾ ಸಂಸ್ಥೆಯ ವಿಶೇಷ ನ್ಯಾಯಾಲಯವು ಇಬ್ಬರು ನಕ್ಸಲರ ಮೇಲೆ ಬಂಧನ ವಾರೆಂಟ್ ಜಾರಿಗೊಳಿಸಿದ್ದು, ಸುಳಿವು ನೀಡಿದವರಿಗೆ ತಲಾ ಹತ್ತುಲಕ್ಷ ರೂಪಾಯಿಗಳನ್ನು ನೀಡುವುದಾಗಿ ರಾಷ್ಟ್ರೀಯ ತನಿಖಾ ಸಂಸ್ಥೆಯು ಘೋಷಣೆ ಮಾಡಿದೆ ನಗದು ಬಹುಮಾನ ಘೋಷಣೆ ಮಾಡಿದೆ.
ಆರೋಪಿಗಳ ಸುಳಿವು ನೀಡುವವರು ನ್ಯಾಷನಲ್ ಇನ್ವೆಸ್ಟಿಗೇಷನ್ ಏಜೆನ್ಸಿ ಹೌಸ್ ನಂಬರ್ ೨೮/೪೪೩ ಗಿರಿನಗರ ಕಡವಂತರ ಕೊಚ್ಚಿ ಕೇರಳ – ೬೮೨೦೨೦. ಮೊಬೈಲ್ ಸಂಖ್ಯೆ : ೯೪೭೭೭೧೫೨೯೪. ಈ ವಿಳಾಸವನ್ನು ಸಂಪರ್ಕಿಬಹುದಾಗಿದೆ, ಮಾಹಿತಿ ನೀಡಿದವರ ಹೆಸರು ಹಾಗೂ ವಿಳಾಸವನ್ನು ಗೌಪ್ಯವಾಗಿ ಇಡುವುದಾಗಿ ಸಂಸ್ಥೆಯು ತಿಳಿಸಿದೆ.

























Discussion about this post