ಕೊರೋನಾ ಸೋಂಕಿತ ಡೇಂಜರ್ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕದ ಹೆಸರೂ ಇದ್ದು, ಮುಂದಿನ ದಿನಗಳಲ್ಲಿ ಸೋಂಕು ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜಿಲ್ಲಾಧಿಕಾರಿಗಳ ಜತೆ ಸಭೆ ನಡೆಸಿದರು.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ರಾಜ್ಯದ ಜನತೆಗೆ ಹೊಸ ವರ್ಷದ ಶುಭಾಶಯಗಳು, ರಾಜ್ಯ ಎಲ್ಲಾ ಸವಾಲುಗಳನ್ನು ಸಮರ್ಥವಾಗಿ ನಿಭಾಯಿಸುವಂಯಾಗಲಿ. ಜನರ ಬದುಕು ಉತ್ತಮಗೊಳ್ಳಲಿ ಎಂದರು.
ಇಂದು ನಡೆದ ಜಿಲ್ಲಾಧಿಕಾರಿಗಳ ಸಭೆಯಲ್ಲಿ ಜಿಲ್ಲಾಮಟ್ಟದ ಹಲವು ಯೋಜನೆ ಹಾಗೂ ವಿಚಾರಗಳ ಅನುಷ್ಠಾನದ ಕುರಿತು ಚರ್ಚೆ ನಡೆಸಲಾಯಿತು. ಇನ್ನು ದೇಶದಲ್ಲಿ ಒಮಿಕ್ರಾನ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಅಪಾಯಕಾರಿ ಹಂತದಲ್ಲಿರುವ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕ ಕೂಡ ಒಂದಾಗಿದೆ. ಮುಂದಿನ ದಿನಗಳಲ್ಲಿ ನಮ್ಮ ರಾಜ್ಯದಲ್ಲಿರುವ ಆರೋಗ್ಯ ಮೂಲಸೌಕರ್ಯಗಳನ್ನು ಗಮನದಲ್ಲಿಟ್ಟುಕೊಂಡು ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.
ಈಗಾಗಲೇ ರಾಜ್ಯದಲ್ಲಿ ಆಕ್ಸಿಜನ್, ಬೆಡ್, ಮೂಲ ಸೌಕರ್ಯಗಳನ್ನು ಹೆಚ್ಚಳ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಕೊರೋನಾ ಸೋಂಕನ್ನು ಎದುರಿಸಲು ಸೂಕ್ತ ಪೂರ್ವ ತಯಾರಿ ಮಾಡಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.
Omikron panic
Discussion about this post