• Home
  • About Us
  • Contact Us
  • Terms of Use
  • Privacy Policy
Tuesday, June 17, 2025
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜಕೀಯ

ದೇವಸ್ಥಾನಗಳು ಈಗಲೂ ಸ್ವತಂತ್ರವಾಗಿಯೆ ಇವೆ: ವಿಪಕ್ಷ ನಾಯಕ ಸಿದ್ದರಾಮಯ್ಯ

ಸರ್ಕಾರ ದೇವಸ್ಥಾನಗಳ ಮೇಲಿನ ಹಿಡಿತವನ್ನು ತಪ್ಪಿಸುವುದೆಂದರೆ ಜನ ಸಮುದಾಯಗಳಿಗೆ ಇರುವ ಅಧಿಕಾರವನ್ನು ತಪ್ಪಿಸುವುದೆಂದು ಅರ್ಥ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ.

Shri News Desk by Shri News Desk
Jan 2, 2022, 08:25 pm IST
in ರಾಜಕೀಯ
Siddaramaiah

ಸಿದ್ದರಾಮಯ್ಯ

Share on FacebookShare on TwitterTelegram

ಬೆಂಗಳೂರು: ಸರ್ಕಾರವು ರಾಜ್ಯದ ದೇವಸ್ಥಾನಗಳನ್ನು ಸ್ವತಂತ್ರಗೊಳಿಸುವುದಾಗಿ, ಸ್ವಾಯತ್ತಗೊಳಿಸುವುದಾಗಿ ಹೇಳುತ್ತಿದೆ. ದೇವಸ್ಥಾನಗಳು ಈಗಲೂ ಸ್ವತಂತ್ರವಾಗಿಯೆ ಇವೆ. ಸರ್ಕಾರ ಅನೇಕ ದೇವಸ್ಥಾನಗಳಿಗೆ ನೆರವು ನೀಡುವುದರ ಮೂಲಕ ಅವುಗಳನ್ನು ಪೊರೆಯುತ್ತಿದೆ. ಮುಜರಾಯಿ ಇಲಾಖೆಯ ವಾರ್ಷಿಕ ಬಜೆಟ್ಟು ಸುಮಾರು ೩೫೦ ಕೋಟಿಗಳಷ್ಟಿದೆ. ಸರ್ಕಾರವೇ ದೇವಸ್ಥಾನಗಳನ್ನು ನಡೆಸುವುದೆಂದರೆ ಸಮಾಜದ ಕಟ್ಟ ಕಡೆಯ ಮನುಷ್ಯರಿಗೂ ಅವುಗಳ ಮೇಲೆ ಹಕ್ಕುಗಳು ಇವೆಯೆಂದು ಅರ್ಥ. ಸರ್ಕಾರ ದೇವಸ್ಥಾನಗಳ ಮೇಲಿನ ಹಿಡಿತವನ್ನು ತಪ್ಪಿಸುವುದೆಂದರೆ ಜನ ಸಮುದಾಯಗಳಿಗೆ ಇರುವ ಅಧಿಕಾರವನ್ನು ತಪ್ಪಿಸುವುದೆಂದು ಅರ್ಥ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ.

ಈಗ ಸರ್ಕಾರ ಮಾಡ ಹೊರಟಿರುವುದೇನೆಂದರೆ ನಾಡಿನ ಐದೂವರೆ ಕೋಟಿ ಕನ್ನಡಿಗ ಹಿಂದೂಗಳ ಅಧಿಕಾರವನ್ನು ತಪ್ಪಿಸಿ ಕೇವಲ ಶೇ.ಎರಡರಷ್ಟು ಜನರ ಕೈಗೆ ಕೊಡಲು ಮುಂದಾಗಿರುವುದು. ಸರ್ಕಾರದ ಈ ನಿರ್ಧಾರದಿಂದ ಶೇ. ೮೦ ರಷ್ಟು ಜನ ಮತ್ತೆ ಊಳಿಗಮಾನ್ಯ ಸಮಾಜದ ಕ್ರೌರ್ಯವನ್ನು ಅನುಭವಿಸಬೇಕೆಂದು ಸರ್ಕಾರ ತೀರ್ಮಾನಿಸಿದಂತೆ ಕಾಣುತ್ತಿದೆ. ಬಸವಣ್ಣನವರ ನೇತೃತ್ವದ ಶರಣ ಚಳುವಳಿಯನ್ನು ದಮನ ಮಾಡಿದ ಪುರೋಹಿತಶಾಹಿ ಶಕ್ತಿಗಳೆ ಇಂದು ತಮ್ಮ ಬಿಜೆಪಿ ಪಕ್ಷದಲ್ಲಿರುವ ಶೂದ್ರ ರಾಜಕಾರಣಿಗಳನ್ನು ಬಳಸಿಕೊಂಡು ದೇವಸ್ಥಾನಗಳನ್ನು ತಮ್ಮ ವಶಕ್ಕೆ ತೆಗೆದುಕೊಂಡು ಐದೂವರೆ ಕೋಟಿ ಕನ್ನಡಿಗ ಹಿಂದೂಗಳನ್ನು ಧಾರ್ಮಿಕ ಗುಲಾಮಗಿರಿಯ ಕಡೆಗೆ ತಳ್ಳಲು ಪ್ರಯತ್ನಿಸುತ್ತಿವೆ. ಈ ಪುರೋಹಿತ ಶಾಹಿ ವರ್ಗ ಸ್ವಾಯತ್ತತೆಯ ಹೆಸರಲ್ಲಿ ಎಲ್ಲ ದೇವಸ್ಥಾನಗಳನ್ನು ವಶಪಡಿಸಿಕೊಳ್ಳುವುದಿಲ್ಲ. ಲಕ್ಷಾಂತರ, ಕೋಟ್ಯಾಂತರ ಆದಾಯವಿರುವ ದೇವಸ್ಥಾನಗಳನ್ನು ತಾವು ತೆಗೆದುಕೊಂಡು ಆದಾಯವಿಲ್ಲದ ಕೆಲವು ದೇವಸ್ಥಾನಗಳನ್ನು ಉಳಿದವರಿಗೆ ಬಿಟ್ಟುಕೊಡಬಹುದು. ಆದರೆ ಸರ್ಕಾರದ ಹಿಡಿತ ತಪ್ಪಿದ ಕೂಡಲೆ ಮನುವಾದಿ ನಿಯಮಗಳನ್ನು ಸಮಾಜದ ಮೇಲೆ ಹೇರಿಕೆ ಮಾಡಲು ಪ್ರಾರಂಭಿಸುತ್ತಾರೆ. ಈ ವಿಚಾರಗಳನ್ನು ಹೇಳಿದ ಕೂಡಲೆ ಸಂಘ ಪರಿವಾರದವರು ಇನ್ನಿಲ್ಲದಂತೆ ತೊಳಲಾಡುತ್ತಾರೆ. ತಾವು ಮಾತನಾಡಲಾರದೆ ತಮ್ಮ ಪಕ್ಷದಲ್ಲಿರುವ ಶೂದ್ರಾದಿ ದಲಿತ ನಾಯಕರನ್ನು ಛೂ ಬಿಟ್ಟು ಬಾಯಿಗೆ ಬಂದಂತೆ ಮಾತನಾಡಲು ಸೂಚಿಸುತ್ತಾರೆ. ಈ ಧಾರ್ಮಿಕ ಅನ್ಯಾಯಗಳ ವಿರುದ್ಧ, ಶೋಷಣೆಯ ನೀತಿಗಳ ವಿರುದ್ಧ ಮಾತನಾಡಿದರೆ, ಸಾಮಾಜಿಕ ನ್ಯಾಯ, ಸಂವಿಧಾನದ ಆಶಯಗಳ ಬಗ್ಗೆ ಪ್ರಸ್ತಾಪಿಸಿದ ಕೂಡಲೆ ಹಾಗೆ ಪ್ರಸ್ತಾಪಿಸಿದವರನ್ನು ಹಿಂದೂ ವಿರೋಧ, ಪಾಕಿಸ್ತಾನ, ಮುಸ್ಲಿಂ, ಕ್ರಿಶ್ಚಿಯನ್ ಮುಂತಾದ ವಿಷಯಗಳನ್ನು ಮಾತನಾಡಿ ಜನರನ್ನು ದಾರಿ ತಪ್ಪಿಸಲು ಪ್ರಯತ್ನಿಸುತ್ತಾರೆ ಎಂದು ಅವರು ಆರೋಪಿಸಿದ್ದಾರೆ.

ಇದು ಮನುವಾದಿಗಳ ಪುರಾತನ ಅಜೆಂಡ. ಹಾಗಾಗಿ ಜನರು ಇವರ ದುಷ್ಟ ಹುನ್ನಾರಗಳನ್ನು ಅರ್ಥ ಮಾಡಿಕೊಳ್ಳಬೇಕು. ಧರ್ಮ, ದೇವರು, ದೇವಸ್ಥಾನ, ಮಸೀದಿ, ಚರ್ಚುಗಳ ವಿಷಯದಲ್ಲಿ ರಾಜಕೀಯ ಮಾಡಿಕೊಂಡು ದೇಶವನ್ನು ಅದಾನಿ, ಅಂಬಾನಿ ಮುಂತಾದ ಬಂಡವಾಳಿಗರಿಗೆ ಒತ್ತೆ ಇಡುತ್ತಿರುವ ಬಿಜೆಪಿಯು ಆರಂಭದಿಂದಲೂ ಸುಳ್ಳುಗಳ ಫ್ಯಾಕ್ಟರಿ ಇಟ್ಟುಕೊಂಡು ಸುಳ್ಳುಗಳನ್ನೆ ಉತ್ಪಾದಿಸಿ ಜನರಿಗೆ ಮಾರಿ ರಾಜಕಾರಣ ಮಾಡುತ್ತಿದ್ದಾರೆ. ಅಂಥ ಹಲವು ಸುಳ್ಳುಗಳಲ್ಲಿ, ದೇವಸ್ಥಾನಗಳ ಹಣವನ್ನು ಮುಸ್ಲಿಂ ಮತ್ತು ಕ್ರಿಶ್ಚಿಯನ್ನರ ಧಾರ್ಮಿಕ ಸ್ಥಳಗಳ ಅಭಿವೃದ್ಧಿಗೆ ಖರ್ಚು ಮಾಡಲಾಗುತ್ತಿದೆ ಎಂಬುದೂ ಒಂದು. ಆದರೆ ವಾಸ್ತವವಾಗಿ ದೇವಸ್ಥಾನಗಳ ಒಂದೇ ಒಂದು ರೂಪಾಯಿ ಹಣವನ್ನೂ ಮಸೀದಿಗಾಗಲಿ, ಚರ್ಚುಗಳಿಗಾಗಲಿ ಬಳಸಿಲ್ಲವೆಂದು ಇಲಾಖೆ ಉತ್ತರ ನೀಡಿದೆ. ಇಲಾಖೆಯ ಉತ್ತರ ಈ ರೀತಿ ಇದೆ, “ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಅಧಿನಿಯಮ-೧೯೯೭ ಮತ್ತು ನಿಯಮಗಳು-೨೦೦೨ ರಡಿ ಸದರಿ ಅನುದಾನಗಳನ್ನು ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿಗೆ ಒಳಪಡುವ ಯಾವುದೇ ದೇವಾಲಯದ ಆದಾಯದಿಂದ / ನಿಧಿಯಿಂದ ಬಿಡುಗಡೆ/ ಮಂಜೂರು ಮಾಡುತ್ತಿರುವುದಿಲ್ಲ” ಎಂದು ಹೇಳಲಾಗಿದೆ. ಆದರೂ ಬಿಜೆಪಿಯ ಕೆಲವು ಸುಳ್ಳಿನ ಉತ್ಪಾದಕರು ಅಪಪ್ರಚಾರ ಮಾಡುತ್ತಲೆ ಇದ್ದಾರೆ. ದೇವರ ಹೆಸರಿನಲ್ಲಿ ಸುಳ್ಳು ಹೇಳುವ, ಅಪಚಾರ ಎಸಗುವ ಈ ಜನ ಎಷ್ಟು ಕೆಟ್ಟವರು, ಅಮಾನವೀಯ ವ್ಯಕ್ತಿಗಳು ಎಂಬುದಕ್ಕೆ ಇದು ಸಾಕ್ಷಿ. ಹಾಗಿದ್ದರೆ ಹಿಂದೂ ಮತ್ತು ಹಿಂದೂಯೇತರ ಧಾರ್ಮಿಕ ಸಂಸ್ಥೆಗಳಿಗೆ ಸರ್ಕಾರ ವರ್ಷಾಸನ ಮತ್ತು ತಸ್ತೀಕ್ ನೀಡುತ್ತಿಲ್ಲವೆ? ಖಂಡಿತ ನೀಡುತ್ತಿದೆ. ಅದರೆ ಅದು ದೇವಸ್ಥಾನಗಳ ಆದಾಯವಲ್ಲ. ಅದು ಸರ್ಕಾರದ ಹಣ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪತ್ರಿಕಾ ಹೇಳಿಕೆಯಲ್ಲಿ ತಮ್ಮ ವಾದ ಮಂಡಿಸಿದ್ದಾರೆ.

ಇದನ್ನೂ ಓದಿ: ಜನವರಿ 30ರ ಒಳಗಾಗಿ ದೇವಸ್ಥಾನಗಳ ಆಡಿಟ್‌ ರಿಪೋರ್ಟ್‌ ಸಲ್ಲಿಸಿ: ದೇವಸ್ಥಾನದ ಅಧಿಕಾರಿಗಳಿಗೆ ಸಚಿವೆ ಶಶಿಕಲಾ ಜೊಲ್ಲೆ ತಾಕೀತು

Tags: SiddaramaiahTempleTOP NEWS
ShareSendTweetShare
Join us on:

Related Posts

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

ದೇವೇಗೌಡರ ಬಗ್ಗೆ ಮಾತನಾಡುವ ಮುನ್ನ ನಾಲಿಗೆಯ ಸ್ವಾಸ್ಥ್ಯ ಪರೀಕ್ಷಿಸಿಕೊಳ್ಳಿ: ನಿಖಿಲ್ ಕುಮಾರ್

ದೇವೇಗೌಡರ ಬಗ್ಗೆ ಮಾತನಾಡುವ ಮುನ್ನ ನಾಲಿಗೆಯ ಸ್ವಾಸ್ಥ್ಯ ಪರೀಕ್ಷಿಸಿಕೊಳ್ಳಿ: ನಿಖಿಲ್ ಕುಮಾರ್

Kolar News: ನನ್ನ ಜೀವಕ್ಕೇನಾದರೂ ಅಪಾಯವಾದರೆ, ಅದಕ್ಕೆ ರಮೇಶ್ ಕುಮಾರ್ ಕಾರಣ: ಶಾಕಿಂಗ್ ಹೇಳಿಕೆ

Kolar News: ನನ್ನ ಜೀವಕ್ಕೇನಾದರೂ ಅಪಾಯವಾದರೆ, ಅದಕ್ಕೆ ರಮೇಶ್ ಕುಮಾರ್ ಕಾರಣ: ಶಾಕಿಂಗ್ ಹೇಳಿಕೆ

Suhas Shetty Case: ಕೃತ್ಯದಲ್ಲಿ ಪೋಲೀಸ್ ಪೇದೆ ಕೈವಾಡ ಶಂಕೆ: ಪ್ರಕರಣದ ಬಗ್ಗೆ ಯತ್ನಾಳ್ ಸಾಲು ಸಾಲು ಪ್ರಶ್ನೆ

Political News: ವಿಜಯೇಂದ್ರ ಮಾಡಿಸಿದ ಸರ್ವೆ ಬಗ್ಗೆ ವ್ಯಂಗ್ಯವಾಡಿದ ಬಸನಗೌಡ ಪಾಟೀಲ್ ಯತ್ನಾಳ್

ನೆಹರೂರವರು ತಮ್ಮ ಕುಟುಂಬದ ಆಸ್ತಿಯನ್ನು ದೇಶಕ್ಕೆ ಒಪ್ಪಿಸಿದ್ದರು: ಸಿಎಂ ಸಿದ್ದರಾಮಯ್ಯ

ನೆಹರೂರವರು ತಮ್ಮ ಕುಟುಂಬದ ಆಸ್ತಿಯನ್ನು ದೇಶಕ್ಕೆ ಒಪ್ಪಿಸಿದ್ದರು: ಸಿಎಂ ಸಿದ್ದರಾಮಯ್ಯ

ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಬಿಜೆಪಿಯಿಂದ ಶಿವರಾಮ್ ಹೆಬ್ಬಾರ್, ಎಸ್‌.ಟಿ.ಸೋಮಶೇಖರ್ ಉಚ್ಛಾಟನೆ

ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಬಿಜೆಪಿಯಿಂದ ಶಿವರಾಮ್ ಹೆಬ್ಬಾರ್, ಎಸ್‌.ಟಿ.ಸೋಮಶೇಖರ್ ಉಚ್ಛಾಟನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Recipe: ಚಪಾತಿಗೆ ಸಖತ್ ಕಾಂಬಿನೇಷನ್ ಈ ಕೊಂಕಣಿ ಶೈಲಿಯ ಬದ್ನೇಕಾಯಿ ಸುಕ್ಕೆ

Gravy Recipe: ಚಪಾತಿಗೆ ಮ್ಯಾಚ್ ಆಗುವ 6 ವೆರೈಟಿ ಗ್ರೇವಿ ರೆಸಿಪಿ

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Two killed: ಬೈಕ್‌ಗೆ ಮಹೀಂದ್ರಾ ಪಿಕಪ್ ಡಿಕ್ಕಿ ಇಬ್ಬರು ಸಾವು

Spiritual: ಅಕಾಲಿಕ ಮರಣ ಬರಲು ಕಾರಣವೇ ಇದು ನೋಡಿ

ಅಂಗಡಿ ಮಾಲೀಕರೇ ಇಂಥವರ ವರ್ತನೆ ಗಮನಿಸಿ: ಇಲ್ಲವಾದ್ದಲ್ಲಿ ಬಾಗಿಲು ಮುಚ್ಚುವ ಪರಿಸ್ಥಿತಿ ಬರಬಹುದು..!

Money Mantra: ದುಡ್ಡು ಖರ್ಚು ಮಾಡಲೇಬೇಕು ಎಂದಲ್ಲಿ ಹೀಗೆ ಖರ್ಚು ಮಾಡಿ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಸಧೃಡ, ಉದ್ದ ಕೂದಲಿಗಾಗಿ ಇದನ್ನು ಬಳಸಿ: ಕೆಲವೇ ದಿನಗಳಲ್ಲಿ ಫಲಿತಾಂಶ ಪಡೆಯಿರಿ

Spiritual: ಯಾವ ದಿನ ಕೂದಲು ಕತ್ತರಿಸಬಾರದು..? ಹೀಗೆ ಮಾಡಿದರೆ ಏನಾಗುತ್ತದೆ..?

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

  • Home
  • About Us
  • Contact Us
  • Terms of Use
  • Privacy Policy

© 2025 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2025 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In