ದೆಹಲಿ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನ.29ರಿಂದ ಸಂಸತ್ತಿನ ಚಳಿಗಾಲದ ಅಧಿವೇಶನ ಆರಂಭವಾಗಲಿದೆ ಎಂದು ರಾಜಕೀಯ ವ್ಯವಹಾರಗಳ ಸಂಪುಟ ಸಮಿತಿ ತಿಳಿಸಿದೆ.
ಕಳೆದ ಒಂದೂವರೆ ವರ್ಷದ ಹಿಂದೆ ನಡೆದ ಅಧಿವೇಶನದಂತೆ ಈ ಬಾರಿಯೂ ಎರಡೂ ಸದನಗಳು ಕೋವಿಡ್ ಮಾರ್ಗಸೂಚಿಗಳಿಗೆ ಅನುಗುಣವಾಗಿ ನಡೆಯಲಿವೆ. ಕಳೆದ ವರ್ಷ ಕೋವಿಡ್ ನಿಂದ ಚಳಿಗಾಲದ ಅಧಿವೇಶನ ನಡೆಯಲಿಲ್ಲ.
ಸಂಸದೀಯ ವ್ಯವಹಾರಗಳ ಸಂಪುಟ ಸಮಿತಿ ಸಭೆಯಲ್ಲಿ ಚಳಿಗಾಲದ ಅಧಿವೇಶನದ ದಿನಾಂಕ ನಿಗದಿ ಮಾಡಲಾಗಿದ್ದು, ನವೆಂಬರ್ 29 ರಿಂದ ಡಿಸೆಂಬರ್ 23ರವರೆಗೆ 25 ದಿನಗಳ ಕಾಲ ಅಧಿವೇಶನ ನಡೆಯಲಿದೆ. ಪ್ರತಿ ಸದನದಲ್ಲಿ ಸುಮಾರು 20 ಸಭೆಗಳು ನಡೆಯಲಿವೆ.
ಲೋಕಸಭೆ ಹಾಗೂ ರಾಜ್ಯಸಭಾ ಕಲಾಪಗಳು ಒಂದೇ ಸಮಯದಲ್ಲಿ ನಡೆಯಲಿದ್ದು, ಎಲ್ಲಾ ಸದಸ್ಯರು ಕೋವಿಡ್ ನಿಯಮಗಳನ್ನು ಪಾಲಿಸಬೇಕೆಂದು ತಿಳಿಸಲಾಗಿದೆ.
ಇದನ್ನೂ ಓದಿ: ಭೋಪಾಲ್ ಆಸ್ಪತ್ರೆಯಲ್ಲಿ ಅಗ್ನಿ ಅವಘಡಕ್ಕೆ ನಾಲ್ಕು ಶಿಶುಗಳ ಮರಣ
ಇದನ್ನೂ ಓದಿ: Ashwagandha: ಹಾಲಿನೊಂದಿಗೆ ಅಶ್ವಗಂಧ – ಆರೋಗ್ಯಕರ ಲಾಭಗಳು
Parliament Session

























Discussion about this post