ಬೆಂಗಳೂರು: ರಾಜ್ಯದಲ್ಲಿ ಸುರಿದ ಭಾರೀ ಮಳೆಯಿಂದಾಗಿ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ. ಕೈಗೆ ಬರಬೇಕಿದ್ದ ಫಸಲು ಕಣ್ಣ ಮುಂದೆಯೇ ನೆಲಕಚ್ಚುತ್ತಿರುವುದು ನೋಡಿ ರೈತರಿಗೆ ದಿಕ್ಕು ತೋಚದಂತಾಗಿದೆ.
ಈ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿಯವರು ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಕರೆ ಮಾಡಿ ಮಳೆಹಾನಿ ವಿವರಗಳನ್ನು ಪಡೆದಿದ್ದಾರೆ.
ಸಿಎಂ ಬೊಮ್ಮಾಯಿ ಅವರಿಂದ ಪ್ರಧಾನಿಯವರು ರಾಜ್ಯದಲ್ಲಿ ಸುರಿದ ಮಳೆಯಿಂದ ಉಂಟಾದ ಬೆಳೆ ಹಾನಿ ಹಾಗೂ ಪ್ರವಾಹ ಪರಿಸ್ಥಿತಿಯ ಬಗ್ಗೆ ಚರ್ಚಿಸಿದ್ದು, ಬೊಮ್ಮಾಯಿ ಅವರು ಸರ್ಕಾರ ಕೈಗೊಂಡಿರುವ ಪರಿಹಾರ ಮತ್ತು ರಕ್ಷಣಾ ಕ್ರಮಗಳ ಬಗ್ಗೆ ಪ್ರಧಾನಿಯವರಿಗೆ ವಿವರಿಸಿದ್ದಾರೆ ಎನ್ನಲಾಗಿದೆ.
ಬೆಳೆ ನಷ್ಟ ಮತ್ತು ಜೀವಹಾನಿಯ ಬಗ್ಗೆ ಮೋದಿಯವರು ತೀವ್ರ ಕಳವಳ ವ್ಯಕ್ತಪಡಿಸಿದ್ದು, ಪರಿಹಾರ ಸೇರಿ ಎಲ್ಲಾ ರೀತಿಯ ತುರ್ತು ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ ಮತ್ತು ಅಗತ್ಯವಿರುವ ಎಲ್ಲ ಸಹಕಾರ ಮತ್ತು ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದು ಸಿಎಂ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ.

























Discussion about this post