• Home
  • About Us
  • Contact Us
  • Terms of Use
  • Privacy Policy
Saturday, April 4, 2026
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಚಿಕ್ಕಮಗಳೂರು

Police Martyrs’ Day: ಪೊಲೀಸರ ಕರ್ತವ್ಯ ನಿಷ್ಟೆಯಿಂದ ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ನೆಲೆಸಿದೆ

ಒಂದನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಧೀಶರಾದ ಪುಷ್ಪಾಂಜಲಿ

Shri News Desk by Shri News Desk
Oct 21, 2021, 04:04 pm IST
in ಚಿಕ್ಕಮಗಳೂರು
Share on FacebookShare on TwitterTelegram

ಚಿಕ್ಕಮಗಳೂರು : ಪೊಲೀಸರ ಕರ್ತವ್ಯ ನಿಷ್ಠೆಯಿಂದ ಸಮಾಜದಲ್ಲಿ ಪ್ರತಿಯೊಬ್ಬರೂ ಶಾಂತಿಯುತ ಮತ್ತು ನೆಮ್ಮದಿ ಜೀವನ ನಡೆಸಲು ಸಾಧ್ಯವಾಗಿದೆ ಎಂದು ಒಂದನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಧೀಶರಾದ ಪುಷ್ಪಾಂಜಲಿ ಹೇಳಿದರು.

ನಗರದ ರಾಮನಹಳ್ಳಿಯ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಹುತಾತ್ಮ ಸ್ಮಾರಕ ಆವರಣದಲ್ಲಿ ಜಿಲ್ಲಾ ಪೊಲೀಸ್ ವತಿಯಿಂದ ಏರ್ಪಡಿಸಿದ್ದ ಪೊಲೀಸ್ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಹುತಾತ್ಮ ಪೊಲೀಸರನ್ನು ಸ್ಮರಿಸಿ ಪುಷ್ಪಗುಚ್ಛದ ಗೌರವ ನಮನ ಸಲ್ಲಿಸಿ ಅವರು ಮಾತನಾಡಿದರು.

ಪೊಲೀಸರ ತ್ಯಾಗ, ಪ್ರಾಮಾಣಿಕ ಸೇವಾ ಮನೋಭಾವ ಶ್ರೇಷ್ಠವಾದುದು. ಕೊರೋನಾ ಲಾಕ್ ಡೌನ್ ಸಂದರ್ಭದಲ್ಲಿ ಕುಟುಂಬ, ಮಕ್ಕಳೆನ್ನದೇ ಜನರ ಸೇವೆಗಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಜನಸಾಮಾನ್ಯರ ಆಸ್ತಿಪಾಸ್ತಿ ಸುಭದ್ರವಾಗಿರಲು ಕಾರಣ ಪೊಲೀಸರು. ಜನಸಾಮಾನ್ಯರು ಅವರನ್ನು ಗೌರವಿಸಿ, ಅಗತ್ಯ ಸೇವೆಗಳನ್ನು ಪಡೆದುಕೊಳ್ಳುವಂತೆ ಸಲಹೆ ನೀಡಿದರು

ಪೊಲೀಸರು ಎಂಥ ಕಠಿಣ ಪ್ರಕರಣವನ್ನೂ ಭೇದಿಸುತ್ತಾರೆ. ಸಮಾಜದಲ್ಲಿ ಶಾಂತಿ ನೆಲೆಸಲು ಕಾರಣರಾಗಿರುವ ಪೊಲೀಸರನ್ನು ರಾಷ್ಟಲಾಂಛನದಲ್ಲಿರುವ ಕಣ್ಣಿಗೆ ಕಾಣಿಸದ ನಾಲ್ಕನೇ ಸಿಂಹಕ್ಕೆ ಹೋಲಿಸಲಾಗುತ್ತದೆ. ಶ್ರೇಷ್ಟವಾದ ವೃತ್ತಿಗಳಲ್ಲಿ ಪೊಲೀಸ್ ವೃತ್ತಿ ಕೂಡ ಒಂದು, ಪೊಲೀಸ್ ವ್ಯವಸ್ಥೆ ಇಲ್ಲದ ಸಮಾಜವನ್ನು ಊಹಿಸಲು ಅಸಾಧ್ಯ ಎಂದರು.

ದೇಶಕ್ಕಾಗಿ ಅನೇಕ ಯೋಧರು, ಪೊಲೀಸರು ತಮ್ಮ ಪ್ರಾಣತ್ಯಾಗ ಮಾಡಿದ್ದು ಅವರನ್ನು ಸ್ಮರಿಸುವ ಸಲುವಾಗಿ ಅಕ್ಟೋಬರ್ ೨೧ ನ್ನು ಹುತಾತ್ಮರ ದಿನವನ್ನಾಗಿ ಆಚರಿಸಲಾಗುತ್ತಿದೆ ಎಂದು ಸ್ಮರಣೆ ಮಾಡಿದರು.

ಜಿಲ್ಲಾಧಿಕಾರಿ ಕೆ.ಎನ್. ರಮೇಶ್ ಮಾತನಾಡಿ ದೇಶದಲ್ಲಿ ಆಂತರಿಕ ಶತ್ರುಗಳು ಹಾಗೂ ದೇಶ ವಿರೋಧಿ ಕೃತ್ಯಗಳನ್ನೆಸಗುವ ದುಷ್ಟರ ವಿರುದ್ಧ ಧೀರತನದಿಂದ ಹೋರಾಡಿ ಪ್ರಾಣ ಸಮರ್ಪಿಸಿದ ಪೊಲೀಸ್ ಯೋಧರಿಗೆ ಶ್ರದ್ಧಾಂಜಲಿ ಅರ್ಪಿಸುವುದರ ಮೂಲಕ ಈ ದಿನ ಪೊಲೀಸ್ ಹುತಾತ್ಮರ ದಿನವನ್ನಾಗಿ ಆಚರಿಸುತ್ತಿದ್ದೇವೆ. ವಿಪತ್ತು ನಿರ್ವಹಣೆ, ಕೋವಿಡ್ ಸಂದರ್ಭ, ಭಯಾನಕ ಅಪರಾಧ, ಆಂತರಿಕ ಭದ್ರತೆ ಕಾಪಾಡುವಲ್ಲಿ ಪೊಲೀಸರ ನಿರಂತರ ನಿಸ್ವಾರ್ಥ ಸೇವೆ ಶ್ಲಾಘನೀಯ ಎಂದರು.

ಕೋವಿಡ್ ಸಂದರ್ಭದ ಕರ್ತವ್ಯ ಪಾಲನೆ ವೇಳೆ ರಾಜ್ಯದಲಿ ೪೧ ಮಂದಿ ಪೊಲೀಸರು ಮರಣಹೊಂದಿದ್ದಾರೆ. ಜಿಲ್ಲೆಯಲ್ಲಿ ಶಕುಂತಲಾ ಎಂಬುವವರು ಸಾವನ್ನಪಿರುವ ಬಗ್ಗೆ ಸ್ಮರಿಸಿದರು.

ಕರ್ತವ್ಯ ನಿಷ್ಠೆ ಮೂಲಕ ದೇಶಸೇವೆಗಾಗಿ ತಮ್ಮ ಪ್ರಾಣ ತ್ಯಾಗ ಮಾಡಿದ ವೀರ ಸೇನಾನಿಗಳನ್ನು ಸ್ಮರಿಸುವ ಸುದಿನವಾಗಿದೆ. ಕರ್ತವ್ಯ ಪಾಲನೆಯಲ್ಲಿ ಹುತಾತ್ಮರಾದ ಪೊಲೀಸರ ಆತ್ಮಕ್ಕೆ ಶಾಂತಿ ಸಿಗಲಿ ಮತ್ತು ಅವರ ಕುಟುಂಬದವರಿಗೆ ಆಯುಷ್ಯ, ಆರೋಗ್ಯ ನೀಡಲೆಂದು ಆಶಿಸಿದ ಅವರು. ಹುತಾತ್ಮರ ಕುಟುಂಬ ಅಥವಾ ಪೊಲೀಸ್ ಸಿಬ್ಬಂದಿಗಳು ಸಮಸ್ಯೆಗಳನ್ನು ಜಿಲ್ಲಾಡಳಿತದೊಂದಿಗೆ ಮುಕ್ತವಾಗಿ ಹಂಚಿ ಕೊಂಡಲ್ಲಿ, ಸ್ಪಂದಿಸಿ ಪರಿಹರಿಸುವುದಾಗಿ ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಹೆಚ್.ಅಕ್ಷಯ್ ಮಾತನಾಡಿ ಪೊಲೀಸ್ ಹುತಾತ್ಮರ ದಿನ ಸರ್ವೋತ್ತಮ ತ್ಯಾಗ ಬಲಿದಾನದ ಹೆಮ್ಮೆಯ ದಿನ. ಮತ್ತೊಂದೆಡೆ ಭಾವನಾತ್ಮಕ ದಿನವೂ ಹೌದು, ಲಡಾಕ್ ಗಡಿಯಲ್ಲಿ ೧೯೫೯ರಲ್ಲಿ ಹುತಾತ್ಮರಾದ ಪೊಲೀಸರು ಹಾಗೂ ದೇಶದ ವಿವಿಧೆಡೆ ಕರ್ತವ್ಯ ನಿರತ ಪೊಲೀಸರು ದೇಶಕ್ಕಾಗಿ ಪ್ರಾಣತೆತ್ತ ನೆನಪಿಗಾಗಿ ಪ್ರತಿ ವರ್ಷ ಅಕ್ಟೋಬರ್ ೨೧ ರಂದು ಪೊಲೀಸ್ ಹುತಾತ್ಮ ದಿನಾಚರಣೆಯನ್ನು ದೇಶದಾದ್ಯಂತ ಆಚರಿಸಲಾಗುತ್ತಿದೆ ಎಂದರು.

ದೇಶ ರಕ್ಷಕರು ತಮ್ಮ ಕರ್ತವ್ಯದಲ್ಲಿ ತೊಡಗಿ ಕಾನೂನು ಮತ್ತು ಸುವ್ಯವಸ್ಥೆ ಪಾಲನೆ, ನಾಗರಿಕ ಆಸ್ತಿ, ಪಾಸ್ತಿ ರಕ್ಷಣೆ, ಅಪರಾಧ ತಡೆ ಮತ್ತು ಹಲವು ಕರ್ತವ್ಯ ಪಾಲನೆಗಳಲ್ಲಿ ಸದಾ ನಿರತರಾಗಿ ಸಮಾಜದ ಸುರಕ್ಷತೆಗಾಗಿ ಪ್ರಾಣ ತ್ಯಾಗ ಮಾಡಿದ್ದಾರೆ. ಇಂತಹ ಸಂದರ್ಭದಲ್ಲಿ ಅವರ ನೆನಪು ಮಾಡಿಕೊಳ್ಳುವುದು ನಮ್ಮ ಆದ್ಯ ಕರ್ತವ್ಯ ಎಂದು ಹೇಳಿದರು.

ದೇಶದಲ್ಲಿ ಈ ವರ್ಷ ೩೭೭ ಪೊಲೀಸರು ಕರ್ತವ್ಯ ಸೇವೆಯ ವೇಳೆ ಮರಣ ಹೊಂದಿದ್ದು, ರಾಜ್ಯದ ೧೬ ಮಂದಿ ಪೊಲೀಸರು ಹುತಾತ್ಮರಾಗಿದ್ದಾರೆ. ದೇಶರಕ್ಷಣೆ ಜೊತೆಗೆ ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಮೂಲಕ ಒತ್ತಡದ ನಡುವೆಯೂ ಪೊಲೀಸರು ತಮ್ಮ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಕೋವಿಡ್ ಕರ್ತವ್ಯ, ಪ್ರಕೃತಿ ವಿಕೋಪ, ಉಗ್ರರ ದಾಳಿ, ಗಣ್ಯರಿಗೆ ಬಂದೋಬಸ್ತ್ ಸೇರಿದಂತೆ ಸಮಾಜದ ಸುವ್ಯವಸ್ಥೆಗೆ ಶ್ರಮಿಸುತ್ತಿದ್ದಾರೆ ಅವರ ಸೇವೆಗೆ ಸಾರ್ವಜನಿಕರು ಸಹಕರಿಸಬೇಕಿದೆ ಎಂದು ಕೇಳಿಕೊಂಡರು.

ಪೊಲೀಸ್ ಹುತಾತ್ಮರ ಗೌರವ ಸೂಚಕವಾಗಿ ಪರೇಡ್ ಕಮಾಂಡರ್ ನೇತೃತ್ವದಲ್ಲಿ ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸಿದ ನಂತರ ಮೌನಾಚರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಶೃಂಗೇರಿ ಶಾಸಕ ಟಿ.ಡಿ. ರಾಜೇಗೌಡ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು, ಚಿಕ್ಕಮಗಳೂರು ವೃತ್ತದ ಅರಣ್ಯ ಸಂರಕ್ಷಣಾಧಿಕಾರಿ ಡಾ. ಸುನೀಲ್ ಪನ್ವಾರ್, ಹೆಚ್ಚುವರಿ ಪೊಲೀಸ್ ಅಧೀಕ್ಷಕಿ ಶೃತಿ, ಹಿರಿಯ ಸಿವಿಲ್ ನ್ಯಾಯಾಧೀಶ ಸೋಮ, ಸೇರಿದಂತೆ ಮತ್ತಿತರರು ಇದ್ದರು

e-paper: e Paper – October 21, 2021

Tags: Police Martyrs' Day
ShareSendTweetShare
Join us on:

Related Posts

5 ವರ್ಷದ ಹಿಂದೆ ನಾಪತ್ತೆಯಾಗಿದ್ದ ತಾಯಿಯನ್ನು ಭೇಟಿಯಾದ ಮಕ್ಕಳು

5 ವರ್ಷದ ಹಿಂದೆ ನಾಪತ್ತೆಯಾಗಿದ್ದ ತಾಯಿಯನ್ನು ಭೇಟಿಯಾದ ಮಕ್ಕಳು

Driver dies: ಟ್ರಾಕ್ಟರ್ ಮಗುಚಿ ಬಿದ್ದು ಚಾಲಕ ಸಾವು

Driver dies: ಟ್ರಾಕ್ಟರ್ ಮಗುಚಿ ಬಿದ್ದು ಚಾಲಕ ಸಾವು

God’s service comforts the mind: ದೇವರ ಸೇವೆಯಿಂದ ಮನಸ್ಸಿಗೆ ನೆಮ್ಮದಿ

God’s service comforts the mind: ದೇವರ ಸೇವೆಯಿಂದ ಮನಸ್ಸಿಗೆ ನೆಮ್ಮದಿ

ರಾಜ್ಯದಲ್ಲಿ 832 ಮಂದಿಗೆ ಕೊರೋನಾ ಪಾಸಿಟಿವ್ , 8 ಸೋಂಕಿತರು ಸಾವು

Corona crosses 1000 mark: ರಾಜ್ಯದಲ್ಲಿ 1000 ಗಡಿ ದಾಟಿದ ಕೊರೋನಾ

Zilla Kannada Sahitya Parishad: ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳ ನೇಮಕ

Zilla Kannada Sahitya Parishad: ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳ ನೇಮಕ

Train Traffic: ಚಿಕ್ಕಮಗಳೂರು-ಬೆಂಗಳೂರು ರೈಲು ಸಂಚಾರ ಪುನರಾರಂಭಕ್ಕೆ ಕೇಂದ್ರ ಸಚಿವರ ಸೂಚನೆ

Train Traffic: ಚಿಕ್ಕಮಗಳೂರು-ಬೆಂಗಳೂರು ರೈಲು ಸಂಚಾರ ಪುನರಾರಂಭಕ್ಕೆ ಕೇಂದ್ರ ಸಚಿವರ ಸೂಚನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಇದು ಜಗನ್ನಾಥನ ಪವಾಡ: ಈ ದೇವಸ್ಥಾನದ ಅನ್ನ ಪ್ರಸಾದದ ಬಗ್ಗೆ ಕೇಳಿದ್ರೆ ಆಶ್ಚರ್ಯ ಪಡ್ತೀರಿ

Spiritual: ಇದು ಜಗನ್ನಾಥನ ಪವಾಡ: ಈ ದೇವಸ್ಥಾನದ ಅನ್ನ ಪ್ರಸಾದದ ಬಗ್ಗೆ ಕೇಳಿದ್ರೆ ಆಶ್ಚರ್ಯ ಪಡ್ತೀರಿ

Special Story: ಹಲವರ ನೆಚ್ಚಿನ ಕ್ರಾಕ್ಸ್ ಚಪ್ಪಲಿಯ ಡಿಸೈನ್ ಮತ್ತು ಲೋಗೋ ಹಿಂದಿನ ರಹಸ್ಯ ನಿಮಗೆ ಗೊತ್ತಾ..?

Special Story: ಹಲವರ ನೆಚ್ಚಿನ ಕ್ರಾಕ್ಸ್ ಚಪ್ಪಲಿಯ ಡಿಸೈನ್ ಮತ್ತು ಲೋಗೋ ಹಿಂದಿನ ರಹಸ್ಯ ನಿಮಗೆ ಗೊತ್ತಾ..?

Special Story: ನಾವು ತಿನ್ನುವ ಸಮೋಸಾ ನಮ್ಮ ದೇಶದ್ದಲ್ಲವೇ ಅಲ್ಲ.. ಹಾಗಾದ್ರೆ ಯಾವ ದೇಶದ್ದು..?

Special Story: ನಾವು ತಿನ್ನುವ ಸಮೋಸಾ ನಮ್ಮ ದೇಶದ್ದಲ್ಲವೇ ಅಲ್ಲ.. ಹಾಗಾದ್ರೆ ಯಾವ ದೇಶದ್ದು..?

Spiritual: ಮಕ್ಕಳಿಗೆ ಸಂಸ್ಕಾರ ಹೇಳಿಕೊಡುವುದು ಎಷ್ಟು ಮುಖ್ಯ..?: ಪರ್ತಗಾಳಿ ಮಠದ ಶ್ರೀಗಳಿಂದ ವಚನಾಮೃತ

Spiritual: ಮಕ್ಕಳಿಗೆ ಸಂಸ್ಕಾರ ಹೇಳಿಕೊಡುವುದು ಎಷ್ಟು ಮುಖ್ಯ..?: ಪರ್ತಗಾಳಿ ಮಠದ ಶ್ರೀಗಳಿಂದ ವಚನಾಮೃತ

News: ಕೋರಿಯನ್ ಲವ್ ಗೇಮ್ ಅಂದ್ರೇನು..? ಯಾಕೆ ಇದು ಇಷ್ಟು ಡೇಂಜರ್..?

News: ಕೋರಿಯನ್ ಲವ್ ಗೇಮ್ ಅಂದ್ರೇನು..? ಯಾಕೆ ಇದು ಇಷ್ಟು ಡೇಂಜರ್..?

ಮಹಿಳಾ ಉದ್ಯೋಗಿಗಳಿಗೆ ಅಫ್ಘಾನಿಸ್ತಾನ ದೇಶದ ಸಚಿವಾಲಯದೊಳಗೆ ನಿಷೇಧ

ಹೊಸ ರೂಲ್ಸ್ ತಂದ ತಾಲಿಬಾನ್: ಮೂಳೆ ಮುರಿದು, ರಕ್ತ ಚಿಮ್ಮುವವರೆಗೂ ಪತ್ನಿಗೆ ಹೊಡೆಯಬಹುದಂತೆ

Recipe: ಬಟಾಣಿ ಕಟ್ಲೇಟ್ ರೆಸಿಪಿ (Matar Katlet)

Recipe: ಬಟಾಣಿ ಕಟ್ಲೇಟ್ ರೆಸಿಪಿ (Matar Katlet)

Recipe: ಪಾಲಕ್ ಪಾವ್ ಭಾಜಿ ರೆಸಿಪಿ (Palak Pavbhaji)

Recipe: ಪಾಲಕ್ ಪಾವ್ ಭಾಜಿ ರೆಸಿಪಿ (Palak Pavbhaji)

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In