Political News: ರಾಜ್ಯದಲ್ಲಿ ಈಗಾಗಲೇ ಕಲರ್ ಬಳಸಿ ಮಾಡುವ ಗೋಬಿ ಮಂಚೂರಿ, ಕಾಟನ್ ಕ್ಯಾಂಡಿಯನ್ನು ಬ್ಯಾನ್ ಮಾಡಲಾಗಿದೆ. ಯಾವುದಾದರೂ ಹೊಟೇಲ್‌ನಲ್ಲಿ ಕಲರ್ ಬಳಸಿದ ಗೋಬಿ ಮತ್ತು ಕಾಟನ್ ಕ್ಯಾಂಡಿ ತಯಾರಿಸಿದ್ದಲ್ಲಿ, ಅಂಥ ಹೊಟೇಲ್‌ಗಳನ್ನು ಮುಚ್ಚಿಸಿ, ಅವರಿಗೆ ಕಠಿಣ ಶಿಕ್ಷೆ ನೀಡಲಾಗುವುದು ಎಂದು ಸರ್ಕಾರ ಎಚ್ಚರಿಕೆ ನೀಡಿದೆ. ಇದೀಗ ಹೆಣ್ಣು ಮಕ್ಕಳ ಫೇವರಿಟ್ ತಿನಿಸಾಗಿರುವ ಪಾನೀಪುರಿ ಬಗ್ಗೆ, ಆರೋಗ್ಯ ಸಚಿವರಾಾದ ದಿನೇಶ್ ಗುಂಡೂರಾವ್ ಹೇಳಿಕೆ ನೀಡಿದ್ದಾರೆ.
ಕಾಟನ್ ಕ್ಯಾಂಡಿ, ಗೋಬಿ ಹಾಗು ಕಬಾಬ್ ತಯಾರಿಕೆಯಲ್ಲಿ ಕೃತಕ ಬಣ್ಣಗಳ ಬಳಕೆಯನ್ನು ನಿಷೇಧಿಸಿರುವಂತೆಯೇ ರಾಜ್ಯದಲ್ಲಿ ಮಾರಾಟವಾಗುತ್ತಿರುವ #Panipuri ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿದೆ. ಪಾನಿಪುರಿಯ ಹಲವು ಮಾದರಿಗಳೂ ಸಹ ಆಹಾರ ಸುರಕ್ಷತೆಯ ಪರೀಕ್ಷೆಯಲ್ಲಿ ವಿಫಲವಾಗಿದ್ದು ಇವುಗಳಲ್ಲಿ #Cancer ಕಾರಕ ಅಂಶಗಳಿರುವುದು ಪತ್ತೆಯಾಗಿದೆ.
ಈ ಕುರಿತು ಹೆಚ್ಚಿನ ವಿಶ್ಲೇಷಣೆ ನಡೆಸಲಾಗುತ್ತಿದ್ದು ಪರೀಕ್ಷಾ ವರದಿ ಬಂದ ಬಳಿಕ ಆರೋಗ್ಯ ಇಲಾಖೆಯು (@DHFWKA
) ಸೂಕ್ತ ಕ್ರಮ ಕೈಗೊಳ್ಳಲಿದೆ. ಇದೇ ಸಮಯದಲ್ಲಿ ಸಾರ್ವಜನಿಕರು ತಮ್ಮ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು ಮತ್ತು ನಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರುವ ಆಹಾರ ಪದಾರ್ಥಗಳ ಸೇವನೆಯಿಂದ ದೂರವಿರಬೇಕು. ಸ್ವಚ್ಛತೆ ಮತ್ತು ಶುಚಿತ್ವಕ್ಕೆ ಹೆಚ್ಚಿನ ಮಹತ್ವ ಕೊಡಬೇಕು ಎಂದು ಸಚಿವರು ಹೇಳಿದ್ದಾರೆ.
ಕಾಟನ್ ಕ್ಯಾಂಡಿ, ಗೋಬಿ ಮಂಚೂರಿಗಳಲ್ಲಿ ಮಾರಕ ಕೃತಕ ಬಣ್ಣಗಳ ಬಳಕೆ ನಿಷೇಧ ಬೆನ್ನಲ್ಲೇ ಇದೀಗ ರಾಜ್ಯಾದ್ಯಂತ ವೆಜ್ ಕಬಾಬ್, ಫಿಶ್, ಚಿಕನ್ ಕಬಾಬ್ ತಯಾರಿಕೆಯಲ್ಲಿ ಕೃತಕ ಬಣ್ಣ ಬಳಕೆ ನಿಷೇಧಿಸಲಾಗಿದೆ. ನಾಡಿನ ಜನರ ಆರೋಗ್ಯ ರಕ್ಷಣೆಗಾಗಿ ಪಣ ತೊಟ್ಟಿರುವ ನಮ್ಮ ಆರೋಗ್ಯ ಇಲಾಖೆ ಹಲವು ಯೋಜನೆಗಳು, ಕಾರ್ಯಕ್ರಮಗಳನ್ನು ಜಾರಿಗೊಳಿಸುತ್ತಲೇ ಬಂದಿದೆ. ಆಹಾರ ತಯಾರಿಕೆ ಹಾಗು ಮಾರಾಟದಲ್ಲಿ ಜನರಿಗೆ ಅನಾರೋಗ್ಯ ಉಂಟುಮಾಡುವ ಎಲ್ಲ ಕೃತಕ ಬಣ್ಣಗಳ ಬಳಕೆಯನ್ನು ತಡೆಗಟ್ಟಲು ನಮ್ಮ ಆರೋಗ್ಯ ಇಲಾಖೆಯು ಕಟಿಬದ್ಧವಾಗಿದೆ. ಗುಣಮಟ್ಟದ ಆಹಾರ ಅಭ್ಯಾಸ ರೂಡಿಸಿಕೊಳ್ಳೋಣ ಎಲ್ಲರೂ ಆರೋಗ್ಯವಂತರಾಗೋಣ ಎಂದು ಸಚಿವರು ಹೇಳಿದ್ದಾರೆ..
ವೆಜ್/ಚಿಕನ್/ಫಿಶ್ ಕಬಾಬ್ ತಯಾರಿಕೆಯಲ್ಲಿ ಕೃತಕ ಬಣ್ಣಗಳ ಬಳಕೆ ಮಾಡಲಾಗುತ್ತಿರುವುದು ಪ್ರಯೋಗಾಲಯಗಳ ಮೂಲಕ ನಡೆಸಲಾದ ಪರೀಕ್ಷೆಯಿಂದ ದೃಢಪಟ್ಟಿದೆ. ಈ ಕೃತಕ ಬಣ್ಣಗಳು ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ವೆಜ್/ಚಿಕನ್/ಫಿಶ್ ಕಬಾಬ್ ತಯಾರಿಕೆ ವೇಳೆ ಕೃತಕ ಬಣ್ಣ ಬಳಕೆಯನ್ನು ನಿಷೇಧಿಸಿ ಆದೇಶ ಹೊರಡಿಸಲಾಗಿದೆ.
ನಿಷೇಧದ ಆದೇಶ ಉಲ್ಲಂಘನೆಯ ಪ್ರಕರಣಗಳು ಕಂಡುಬಂದಲ್ಲಿ ಅಂತಹವರ ವಿರುದ್ಧ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ-2006 ರ ಅನ್ವಯ 7 ವರ್ಷಗಳಿಂದ ಜೀವಾವಧಿ ವರೆಗೆ ಜೈಲುಶಿಕ್ಷೆ ಹಾಗು 10 ಲಕ್ಷದವರೆಗೆ ದಂಡ ವಿಧಿಸಲು ಅವಕಾಶವಿದೆ. ರಾಜ್ಯದ ಎಲ್ಲಾ ಕಬಾಬ್ ತಯಾರಿಸುವ ಮತ್ತು ಮಾರಾಟ ಮಾಡುವ ಆಹಾರ ಉದ್ದಿಮೆದಾರರು ಈ ಆದೇಶವನ್ನು ತತಕ್ಷಣದಿಂದಲೇ ಪಾಲಿಸಲು ಸೂಚಿಸಲಾಗಿದೆ.
ನಮ್ಮ ಆರೋಗ್ಯದ ಗುಟ್ಟು ನಮ್ಮ ಆಹಾರ ಅಭ್ಯಾಸಗಳಲ್ಲಿದೆ. ಉತ್ತಮ ಆರೋಗ್ಯಕ್ಕಾಗಿ ಇಂತಹ ಅಪಾಯಕಾರಿ ವಸ್ತುಗಳಿಂದ ತಯಾರಿಸಲಾದ ಆಹಾರ ಪದಾರ್ಥಗಳ ಸೇವನೆಯಿಂದ ದೂರವಿರೋಣ. ನಮ್ಮ ಆರೋಗ್ಯದ ರಕ್ಷಣೆ ಮಾಡೋಣ ಎಂದು ಆರೋಗ್ಯ ಸಚಿವರು ಕರೆ ನೀಡಿದ್ದಾರೆ.
ಕಾಟನ್ ಕ್ಯಾಂಡಿ, ಗೋಬಿ ಹಾಗು ಕಬಾಬ್ ತಯಾರಿಕೆಯಲ್ಲಿ ಕೃತಕ ಬಣ್ಣಗಳ ಬಳಕೆಯನ್ನು ನಿಷೇಧಿಸಿರುವಂತೆಯೇ ರಾಜ್ಯದಲ್ಲಿ ಮಾರಾಟವಾಗುತ್ತಿರುವ #Panipuri ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿದೆ. ಪಾನಿಪುರಿಯ ಹಲವು ಮಾದರಿಗಳೂ ಸಹ ಆಹಾರ ಸುರಕ್ಷತೆಯ ಪರೀಕ್ಷೆಯಲ್ಲಿ ವಿಫಲವಾಗಿದ್ದು ಇವುಗಳಲ್ಲಿ #Cancer ಕಾರಕ ಅಂಶಗಳಿರುವುದು…
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) June 29, 2024
Discussion about this post