ಬೆಂಗಳೂರು: ಇತ್ತಿಚೆಗೆ ಮತಾಂತರದ ಸುದ್ದಿಗಳು ಹೆಚ್ಚುತ್ತಿವೆ. ಮಾತ್ರವಲ್ಲದೆ ವಿವಿಧ ಆಸೆ ಆಮಿಷ ಸೇರಿದಂತೆ ಹಲವು ಕಾರಣಗಳಿಂದ ಜನರನ್ನು ಒತ್ತಾಯಪೂರ್ವಕವಾಗಿ ಮತಾಂತರ ಮಾಡುತ್ತಿರುವ ಬಗ್ಗೆ ವರದಿಯಾಗಿದೆ.
ಈ ವರದಿಗಳ ಬೆನ್ನಲ್ಲೆ ಇದೀಗ ಸರ್ಕಾರ ಸೂಕ್ತ ಕ್ರಮವೊಂದನ್ನು ಕೈಗೊಳ್ಳಲು ಮುಂದಾಗಿದೆ. ಹೌದು ಬಲವಂತ, ಆಮಿಷ ಅಥವಾ ವಂಚಿಸಿ ಮತಾಂತರ ಮಾಡುವವರಿಗೆ ಕನಿಷ್ಠ1ರಿಂದ ಗರಿಷ್ಠ 10 ವರ್ಷಗಳ ಶಿಕ್ಷೆ ಮತ್ತು ದಂಡ ಸೇರಿದಂತೆ ಹಲವು ಕಠಿಣ ಕ್ರಮಗಳಿರುವ ಮತಾಂತರ ನಿಷೇದ ಕಾಯ್ದೆ ಜಾರಿಗೆ ತರಲು ಸರ್ಕಾರ ಮುಂದಾಗಿದ್ದು, ಕರಡು ಮಸೂದೆ ಸಿದ್ಧಪಡಿಸಿದೆ.
ದೇಶದ ಬೇರೆ ಬೇರೆ ರಾಜ್ಯಗಳಲ್ಲಿ ಜಾರಿಯಲ್ಲಿರುವ ಮತಾಂತರ ನಿಷೇಧ ಕಾಯ್ದೆಯನ್ನು ಅಧ್ಯಯನ ಮಾಡಿ, ರಾಜ್ಯದ ಪರಿಸ್ಥಿತಿಗೆ ಅನುಗುಣವಾಗಿ ಕರಡು ಮಸೂದೆ ಸಿದ್ಧಪಡಿಸಲಾಗಿದ್ದು, ಕಾನೂನು ತಜ್ಞರು ಮಸೂದೆ ಮಂಡನೆಗೆ ಮುನ್ನ ಎಲ್ಲ ಆಯಾಮಗಳಿಂದ ಪರಿಶೀಲಿಸುತ್ತಿದ್ದಾರೆ. ಬಲವಂತ, ಆಮಿಷ ಅಥವಾ ವಂಚಿಸಿ ಮತಾಂತರ ಮಾಡುವರಿಗೆ ಜೈಲುಪಾಲಾಗುವ ದಿನಗಳು ಸಮೀಪಿಸುತ್ತಿವೆ ಎಂದರೆ ತಪ್ಪಾಗಲಾರದು.
Prohibition of Conversion Act
ಇದನ್ನೂ ಓದಿ: ನಿಮ್ಮಲ್ಲಿ “ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ” ಗುರುತಿನ ಚೀಟಿ ಇದೆಯೇ ??
ಇದನ್ನೂ ಓದಿ: Free bus pass for workers ಸಿಗಲಿದೆಯೇ ರಾಜ್ಯದಾದ್ಯಂತ ಕಾರ್ಮಿಕರಿಗೆ ಉಚಿತ ಬಸ್ಸು ಪಾಸ್..?
ಇದನ್ನೂ ಓದಿ: ಸೈಬರ್ ಸುರಕ್ಷಿತ ಕರ್ನಾಟಕ ಅಭಿಯಾನಕ್ಕೆ ಚಾಲನೆ

























Discussion about this post