ಜೈಪುರ: ಭಾರತ ಕ್ರಿಕೆಟ್ ತಂಡದ ನೂತನ ಕೋಚ್ ರಾಹುಲ್ ದ್ರಾವಿಡ್ ಅವರ ಕೋಚಿಂಗ್ ಶೈಲಿಯ ಬಗ್ಗೆ ಈಗಲೇ ಏನೂ ಹೇಳಲಾಗದು ಎಂದು ಟೀಂ ಇಂಡಿಯಾ ಸ್ಪಿನ್ನರ್ ಆರ್.ಅಶ್ವಿನ್ ಪ್ರತಿಕ್ರಿಯಿಸಿದ್ದಾರೆ.
ನ್ಯೂಜಿಲೆಂಡ್ ವಿರುದ್ಧದ ಟ್ವೆಂಟಿ-20 ಕ್ರಿಕೆಟ್ ಸರಣಿಯೊಂದಿಗೆ ಮುಖ್ಯ ಕೋಚ್ ಆಗಿ ದ್ರಾವಿಡ್ ಅವಧಿ ಆರಂಭಗೊಂಡಿದೆ.
ಈ ಕುರಿತು ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅಶ್ವಿನ್, ‘ದ್ರಾವಿಡ್ ಕೋಚಿಂಗ್ ಬಗ್ಗೆ ಈಗಲೇ ಏನೂ ಹೇಳಲಾಗದು. ಆದರೆ ಅವರು 19ರ ವಯೋಮಿತಿಯ ಒಳಗಿನ ತಂಡವನ್ನು ಚೆನ್ನಾಗಿ ಕಟ್ಟಿದ್ದಾರೆ. ಅವರು ಅವಕಾಶವನ್ನು ಎಂದಿಗೂ ಬಿಟ್ಟು ಬಿಡುವುದಿಲ್ಲ. ಸೂಕ್ತ ತಯಾರಿ ಮತ್ತು ಪ್ರಕ್ರಿಯೆಗಳ ಬಗ್ಗೆ ಹೆಚ್ಚು ಕಾಳಜಿ ವಹಿಸುತ್ತಾರೆ. ಇದರಿಂದ ನಾವು ಟೀಂ ಇಂಡಿಯಾ ಡ್ರೆಸ್ಸಿಂಗ್ ರೂಮ್ನಲ್ಲಿ ಸಂತೋಷವನ್ನು ಕಾಣಬಹುದು’ ಎಂದು ಹೇಳಿದ್ದಾರೆ.
ದ್ರಾವಿಡ್ ಮುಖ್ಯ ಕೋಚ್ ಆಗಿ, ರೋಹಿತ್ ಶರ್ಮಾ ನಾಯಕರಾಗಿ ನ್ಯೂಜಿಲೆಂಡ್ ವಿರುದ್ಧದ ಮೊದಲ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ತಂಡವು ಬುಧವಾರ 5 ವಿಕೆಟ್ಗಳ ಭರ್ಜರಿ ಗೆಲುವು ದಾಖಲಿಸಿತ್ತು. ಅಶ್ವಿನ್ ಅವರು ಅತ್ಯುತ್ತಮ ಬೌಲಿಂಗ್ ದಾಳಿ ನಡೆಸಿದ್ದರು. 4 ಓವರ್ಗಳಲ್ಲಿ ಕೇವಲ 23 ರನ್ ನೀಡಿ 2 ವಿಕೆಟ್ ಗಳಿಸಿ, ನ್ಯೂಜಿಲೆಂಡ್ ಬೃಹತ್ ಮೊತ್ತ ಪೇರಿಸದಂತೆ ತಡೆಯುವಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದರು.
ಇತ್ತೀಚೆಗೆ ಮುಕ್ತಾಯಗೊಂಡ ಟ್ವೆಂಟಿ–20 ವಿಶ್ವಕಪ್ ಸರಣಿ ಮೂಲಕ ಅಶ್ವಿನ್ ಅವರು ತಂಡಕ್ಕೆ ಕಮ್ಬ್ಯಾಕ್ ಮಾಡಿದ್ದಾರೆ. ಇದೀಗ ನ್ಯೂಜಿಲೆಂಡ್ ವಿರುದ್ಧದ ಸರಣಿಯಲ್ಲೂ ಶ್ರೇಷ್ಠ ನಿರ್ವಹಣೆ ತೋರುತ್ತಿದ್ದಾರೆ.
ಇನ್ನಷ್ಟು ಸುದ್ದಿಗಳು…
ICC: ಭಾರತೀಯ ಕ್ರಿಕೆಟ್ ಮಂಡಳಿ ಅಧ್ಯಕ್ಷತೆಯ ಜೊತೆಗೆ ಮತ್ತೊಂದು ದೊಡ್ಡ ಪದವಿಯನ್ನೂ ಅಲಂಕರಿಸಲಿರುವ ಸೌರವ್ ಗಂಗೂಲಿ
India win big: ಟಿ20 ಸರಣಿಯಲ್ಲಿ ಭಾರತ ಮೊದಲ ಪಂದ್ಯದಲ್ಲಿ ಭರ್ಜರಿ ಗೆಲುವು
ಟೀಂ ಇಂಡಿಯಾದಲ್ಲಿ ಹೊಸ ಸಂಸ್ಕೃತಿ ಹುಟ್ಟುಹಾಕಲಿದ್ದಾರೆ ದ್ರಾವಿಡ್ ಎಂದ ರಾಹುಲ್: ಏನದು?
Discussion about this post