777 ಚಾರ್ಲಿ ಚಿತ್ರ ಸೆಟ್ಟೇರಿ ಶೂಟಿಂಗ್ ಮುಗಿಸಿದೆ. ಟೀಸರ್, ಪೋಸ್ಟರ್ ಮತ್ತು ಹಾಡುಗಳನ್ನು ಬಿಡುಗಡೆ ಮಾಡಲಾಗಿದ್ದು ಅಭಿಮಾನಿಗಳು 777 ಚಾರ್ಲಿಯನ್ನು ಚಿತ್ರಪರದೆಯ ಮೇಲೆ ನೋಡಲು ಕಾತುರದಿಂದ ಕಾಯುತ್ತಿದ್ದಾರೆ. ಆದರೆ ಚಿತ್ರದ ಅಂತಿಮ ಹಂತದ ಕೆಲಸಗಳು ವಿಳಂಬವಾಗಿದ್ದು ಚಿತ್ರ ತೆರೆಕಾಣಲು ಇನ್ನೂ ತಡವಾಗಿದೆ ಸ್ವತಃ ರಕ್ಷಿತ್ ಶೆಟ್ಟಿ ಅವರೇ ಘೋಷಿಸಿದ್ದಾರೆ. ಈಮುನ್ನ ಡಿಸೆಂಬರ್ 31ರಂದು 777 ಚಾರ್ಲಿ ಚಿತ್ರಮಂದಿರದಲ್ಲಿ ಸಿನಿಮಾವನ್ನು ನೋಡಬಹುದು ಎನ್ನಲಾಗಿತ್ತು.
ರಕ್ಷಿತ್ ಶೆಟ್ಟಿ ಅವರೇ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ತಾಜಾ ಮಾಹಿತಿಯೊಂದನ್ನು ಹಂಚಿಕೊಂಡಿದ್ದು, ‘777 ಚಾರ್ಲಿಯ ಈ ಸುದೀರ್ಘ ಪಯಣದಲ್ಲಿ ನೀವು ನಮಗೆ ತೋರಿರುವ ಪ್ರೀತಿ ಹಾಗು ಬೆಂಬಲಕ್ಕೆ ನಾವು ಆಭಾರಿ. ನಾವು ಈ ಮೂಲಕ ತಿಳಿಸ ಬಯಸುವುದೇನೆಂದರೆ, ನಮ್ಮ ಚಿತ್ರದ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿದೆ. ಈ ಮೊದಲು ನಿಗದಿಪಡಿಸಲಾಗಿದ್ದ ದಿನಾಂಕವಾದ 31 ಡಿಸೆಂಬರ್ 2021 ರಂದು ಚಿತ್ರವನ್ನು ಬಿಡುಗಡೆ ಮಾಡುತ್ತಿಲ್ಲ. ಕೆಲವು ವಿಳಂಬಗಳು ಹೊಸದೊಂದು ಅಧ್ಯಾಯಕ್ಕೆ ನಾಂದಿಯಾಗುತ್ತದೆ. ಅತೀ ಶೀಘ್ರದಲ್ಲಿ ಹೊಸ ಪ್ರಕಟಣೆಯೊಂದಿಗೆ ನಿಮ್ಮ ಮುಂದೆ ಬರಲಿದ್ದೇವೆ. ಅಲ್ಲಿಯವರೆಗೂ, ಹರಸಿ.. ಹಾರೈಸಿ’ ಎಂದು ಘೋಷಿಸಿದ್ದಾರೆ.
ಇದನ್ನೂ ಓದಿ: ಗೇಮಿಂಗ್ ಪ್ರಿಯರಿಗೆ ಶುಭಸುದ್ದಿ ನೀಡಿದ ಗೂಗಲ್ ಪ್ಲೇ ಸ್ಟೋರ್
(Rakshit Shetty 777 Charlie not release in December 31)
Discussion about this post