Sports News: 18 ವರ್ಷದಲ್ಲಿ ಇದೇ ಪ್ರಪ್ರಥಮ ಬಾರಿಗೆ ಐಪಿಎಲ್ ಪಂದ್ಯದಲ್ಲಿ ಆರ್‌ಸಿಬಿ ಗೆಲುವು ಸಾಧಿಸಿದ್ದು, ಇತಿಹಾಸ ನಿರ್ಮಿಸಿದೆ. ಈ ಮೂಲಕ ಕನ್ನಡಿಗರ ಇಷ್”ು ವರ್ಷದ ಕಾತರಿಕೆಗೆ ಅಂತ್ಯ ಹಾಡಿದ್ದು, ಈ ಸಲ ಕಪ್ ನಮ್ಮದು ಅನ್ನೋ ಅವಕಾಶ ಕನ್ನಡಿಗರಿಗೆ ಸಿಕ್ಕಿದೆ.
ಗುಜರಾತ್‌ನ ಅಹಮದಾಬಾದ್ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಐಪಿಎಲ್ ಫಿನಾಲೆ ಪಂದ್ಯ ನಡೆದಿದ್ದು, ಪಂಜಾಬ್ ವಿರುದ್ಧ ರಾಯಲ್ ಚಾಲೆಂಜರ್ಸ್ ಪಂದ್ಯವಾಡಿ ಗೆಲುವು ಸಾಧಿಸಿದ್ದಾರೆ. ಗೆಲುವಿನ ಸುಳಿವು ಸಿಗುತ್ತಿದ್ದಂತೆ Virat Kohli ಭಾವುಕರಾಗಿದ್ದು, ಮ್ಯಾಚ್ ನೋಡಲು ಬಂದಿದ್ದ ಆರ್‌ಸಿಬಿ ಮಾಜಿ Captain ಎಬಿಡಿ, Viratರನ್ನು ತಬ್ಬಿ ಅಭಿನಂದಿಸಿದ್ದಾರೆ. ಈ ದೃಶ್ಯ ನೋಡಿ, ಅಭಿಮಾನಿಗಳು ಕೂಡ ಭಾವುಕರಾಗಿದ್ದಾರೆ.
ಇನ್ನು ಆರ್‌ಸಿಬಿಗೆ ಕನ್ನಡಿಗರು ಅಭಿನಂದನೆಗಳ ಮಹಾಪೂರವನ್ನೇ ಹರಿಸಿದ್ದು, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ವಿಜಯೇಂದ್ರ, ನಿಖಿಲ್ ಕುಮಾರ್, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸೇರಿ ಹಲವು ರಾಜಕೀಯ ಗಣ್ಯರು ಅಭಿನಂದನೆ ಸಲ್ಲಿಸಿದ್ದಾರೆ.
Rrrrrrrrr…. Cccccccc…. Bbbbbbbbb…. ಐಪಿಎಲ್ ಫೈನಲ್ ಪಂದ್ಯದಲ್ಲಿ ಪಂಜಾಬ್ ತಂಡವನ್ನು ಬಗ್ಗುಬಡಿದು ಕಪ್ ಮುಡಿಗೇರಿಸಿಕೊಂಡ ಆರ್‌ಸಿಬಿ ತಂಡಕ್ಕೆ ಅಭಿನಂದನೆಗಳು. ಇಡೀ ಪಂದ್ಯಾವಳಿಯಲ್ಲಿ ಒಂದು ತಂಡವಾಗಿ ಸಂಘಟಿತ ಪ್ರದರ್ಶನ ನೀಡುವ ಮೂಲಕ ಕೋಟ್ಯಂತರ ಅಭಿಮಾನಿಗಳ ಕನಸನ್ನು ಈ ದಿನ ಆರ್‌ಸಿಬಿಯ ಹುಡುಗರು ನನಸಾಗಿಸಿದ್ದಾರೆ. ಆರ್‌ಸಿಬಿಯ ಈ ವಿಜಯದಲ್ಲಿ ವಿರಾಟ್ ಕೋಹ್ಲಿಯ 18 ವರ್ಷಗಳ ಕಾಲದ ತಪಸ್ಸಿದೆ, ನಿಷ್ಠೆ, ಬದ್ಧತೆಯಿದೆ. ಬೌಲಿಂಗ್, ಬ್ಯಾಟಿಂಗ್, ಫೀಲ್ಡಿಂಗ್ ಹೀಗೆ ಎಲ್ಲಾ ವಿಭಾಗದಲ್ಲೂ ಆರ್‌ಸಿಬಿ ಪ್ರತಿ ಆಟಗಾರರು ಚಾಂಪಿಯನ್ ಪ್ರದರ್ಶನ ನೀಡಿದ್ದಾರೆ ಎನ್ನುವುದರಲ್ಲಿ ಅನುಮಾನವೇ ಇಲ್ಲ. ಇದು ಇತಿಹಾಸ ಸೃಷ್ಟಿಸಿದ ದಿನ.. ಕೊನೆಯದಾಗಿ, ಈ ಸಲ ಕಪ್ ನಮ್ದೆ ಎಂದು ಸಿಎಂ ಸಿದ್ದರಾಮಯ್ಯ Tweet ಮಾಡಿದ್ದಾರೆ.
Rrrrrrrrr…. Cccccccc…. Bbbbbbbbb….
ಐಪಿಎಲ್ ಫೈನಲ್ ಪಂದ್ಯದಲ್ಲಿ ಪಂಜಾಬ್ ತಂಡವನ್ನು ಬಗ್ಗುಬಡಿದು ಕಪ್ ಮುಡಿಗೇರಿಸಿಕೊಂಡ ಆರ್‌ಸಿಬಿ ತಂಡಕ್ಕೆ ಅಭಿನಂದನೆಗಳು. ಇಡೀ ಪಂದ್ಯಾವಳಿಯಲ್ಲಿ ಒಂದು ತಂಡವಾಗಿ ಸಂಘಟಿತ ಪ್ರದರ್ಶನ ನೀಡುವ ಮೂಲಕ ಕೋಟ್ಯಂತರ ಅಭಿಮಾನಿಗಳ ಕನಸನ್ನು ಈ ದಿನ ಆರ್‌ಸಿಬಿಯ ಹುಡುಗರು ನನಸಾಗಿಸಿದ್ದಾರೆ.
ಆರ್‌ಸಿಬಿಯ ಈ… pic.twitter.com/dYG4OHVNVN
— Siddaramaiah (@siddaramaiah) June 3, 2025
ಈ ಸಲ ಕಪ್ ನಮ್ದು @IPL2025 ಟೂರ್ನಿಯಲ್ಲಿ ಐತಿಹಾಸಿಕ ದ್ವಿಗಿಜಯ ಸಾಧಿಸಿದ @RCBTweets
ಬೆಂಗಳೂರು ತಂಡಕ್ಕೆ ಹೃತ್ಪೂರ್ವಕ ಅಭಿನಂದನೆಗಳು. ಆರೂವರೆ ಕೋಟಿ ಕನ್ನಡಿಗರ ಕನಸನ್ನು ನನಸು ಮಾಡಿದ ಪಟಿದಾರ್ ಪಡೆಯ ಶ್ರೇಷ್ಠ ಕ್ರಿಕೆಟ್ ಕನ್ನಡಿಗರು ಮಾತ್ರವಲ್ಲದೆ ಇಡೀ ಜಗತ್ತಿನ ಕ್ರಿಕೆಟ್ ಪ್ರೇಮಿಗಳ ಮನಸೂರೆಗೊಂಡಿದೆ. ಕರ್ನಾಟಕದ ಕ್ರಿಕೆಟ್ ಇತಿಹಾಸದಲ್ಲಿಯೇ ಈ ಗೆಲುವು ಮಹೋನ್ನತ ಮೈಲುಗಲ್ಲು ಎಂಬುದು ನನ್ನ ಅಭಿಪ್ರಾಯ. ಮುಖ್ಯವಾಗಿ 18 ವರ್ಷಗಳಷ್ಟು ಸುದೀರ್ಘ ಕಾಲ ತಂಡ ಶ್ರೇಯಸ್ಸಿಗಾಗಿ ತಮ್ಮನ್ನು ಸಮರ್ಪಣೆ ಮಾಡಿಕೊಂಡ ಹಿರಿಯ ಆಟಗಾರ ಶ್ರೀ @imVkohli ಅವರನ್ನು ಅಭಿನಂದಿಸುತ್ತೇನೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕೂಡ ವಿಶ್ ಮಾಡಿದ್ದಾರೆ..

























Discussion about this post