ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾದರೆ ಶಾಲಾಕಾಲೇಜುಗಳನ್ನು ಮುಚ್ಚಲು ತೀರ್ಮಾನಿಸುತ್ತೇವೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಇಂದು ಶಿಕ್ಷಣ ಇಲಾಖೆಯ ಅಧಿಕಾರಿಗಳ ಜೊತೆ ಸಭೆ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಕೆಲವು ವಸತಿ ಶಾಲೆಗಳಲ್ಲಿ ಕಾರೋನ ಕೆಲವು ಮಕ್ಕಳಲ್ಲಿ ಕಾಣಿಸಿಕೊಂಡಿರುವುದು ಈಗ ಆತಂಕದ ವಿಷಯವಾಗಿದೆ ಎಂದರು.
ಕೋವಿಡ್ ಸೋಂಕು ಪ್ರಕರಣಗಳು ಹೆಚ್ಚಾದರೆ ಶಾಲಾ ಕಾಲೇಜುಗಳನ್ನು ಬಂದ್ ಮಾಡುತ್ತೇವೆ. ಈಗಾಗಲೇ ನಾನು ಶಿಕ್ಷಣ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿರುವುದಾಗಿ ತಿಳಿಸಿ, ನವೋದಯ, ವಸತಿ, ಬಾಲಕಿಯರ ವಸತಿ ಶಾಲೆಗಳು, ಕಾಲೇಜುಗಳಲ್ಲಿ ಸೋಂಕು ಕಾಣಿಸಿಕೊಂಡಿರುವುದು ಸ್ವಲ್ಪ ಆತಂಕ ತಂದಿದೆ ಎಂದರು.
ಸರ್ಕಾರದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡುತ್ತಿರುವುದಾಗಿ ಅವರು ಮಾಹಿತಿ ನೀಡಿ, ಈಗಾಗಲೇ ಜಿಲ್ಲಾಧಿಕಾರಿಗಳು, ಸಮಾಜ ಕಲ್ಯಾಣ ಇಲಾಖೆ, ಕಂದಾಯ ಅಧಿಕಾರಿಗಳು , ಶಿಕ್ಷಣ ಇಲಾಖೆ ಅಧಿಕಾರಿಗಳು ಸೇರಿದಂತೆ ಮತ್ತಿತರರು ಖುದ್ದು ಶಾಲೆ ಮತ್ತು ವಸತಿ ನಿಲಯಗಳಿಗೆ ಭೇಟಿ ನೀಡಬೇಕೆಂದು ಸೂಚಿಸಿದ್ದೇನೆ ಎಂದು ತಿಳಿಸಿದರು.
School-college bandh if number of COVID cases increases

























Discussion about this post