ಚಿಕ್ಕಮಗಳೂರು: ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಸಪ್ತಾಹದ ಧ್ವಜ ಚೀಟಿಗಳನ್ನು ಮಂಗಳವಾರ ಜಿಲ್ಲಾಧಿಕಾರಿ ಕೆ.ಎನ್. ರಮೇಶ್ ತಮ್ಮ ಕಛೇರಿಯಲ್ಲಿ ಬಿಡುಗಡೆಗೊಳಿಸಿದರು.
ಬಳಿಕ ಮಾತನಾಡಿದ ಅವರು ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ಮತ್ತು ಸಮಾಜಕ್ಕೆ ಅನುಕೂಲಕರವಾಗುವಂತಹ ವಿಶೇಷ ಚಟುವಟಿಕೆಗಳನ್ನು ನಡೆಸಿಕೊಂಡು ಬರುತ್ತಿರುವುದು ಖುಷಿಯ ಸಂಗತಿ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಈ ರೀತಿಯ ವಿಶೇಷ ಚಟುವಟಿಕೆ, ಸಪ್ತಾಹದಿಂದಾಗಿ ಮಕ್ಕಳ ಮನದಲ್ಲಿ ಹೊಸ ಹುರುಪು, ಚೈತನ್ಯ ತುಂಬಲಿ ಎಂದು ಆಶಿಸಿದರು.
ಜಿಲ್ಲಾ ಮುಖ್ಯ ಆಯುಕ್ತ ಎಂ.ಎನ್.ಷಡಕ್ಷರಿ ಮಾತನಾಡಿ ಕಳೆದ ಒಂದು ವಾರಗಳ ಕಾಲ ಮಕ್ಕಳಿಗಾಗಿ ಶಾಲಾ ಹಂತದಲ್ಲಿ ಸಪ್ತಾಹ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರಲಾಗಿದೆ. ಸಾಮಾಜಿಕವಾಗಿ ಜಾಗೃತಿ ಮೂಡಿಸಲು ಸೈಕಲ್ ಜಾಥಾ ಜತೆಗೆ ವಿವಿಧ ಸ್ಪರ್ಧೆಗಳನ್ನು ನಡೆಸಲಾಗುವುದು ಎಂದು ತಿಳಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಹೆಚ್. ಅಕ್ಷಯ್, ಜಿಲ್ಲಾ ಪಂಚಾಯಿತಿ ಸಿಇಒ ಧ್ವಜ ಚೀಟಿ ಬಿಡುಗಡೆ ಮೂಲಕ ಶುಭಕೋರಿದರು.
ಈ ಸಂದರ್ಭದಲ್ಲಿ ಸ್ಕೌಟ್ ಜಿಲ್ಲಾ ಆಯುಕ್ತ ಎ.ಎನ್.ಮಹೇಶ್, ಮಮತಾ, ಜಿಲ್ಲಾ ತರಬೇತಿ ಆಯುಕ್ತರಾದ ಸಂಧ್ಯಾರಾಣಿ, ಸ್ಥಳೀಯ ಸಂಸ್ಥೆ ಕಾರ್ಯದರ್ಶಿ ರಾಘವೇಂದ್ರ, ಜಿಲ್ಲಾ ಸಂಘಟಕರಾದ ಕಿರಣ್ಕುಮಾರ್, ನವೀನ್ಕುಮಾರ್ ಉಪಸ್ಥಿತರಿದ್ದರು.

























Discussion about this post