ಜಮ್ಮು ಕಾಶ್ಮೀರ: ಇತ್ತೀಚೆಗೆ ಜಮ್ಮು ಕಾಶ್ಮೀರರದಲ್ಲಿ ಹೆಚ್ಚಾಗುತ್ತಿರುವ ಜನಸಾಮಾನ್ಯರ ಹತ್ಯೆ ಹಿನ್ನೆಲೆಯಲ್ಲಿ ಕಳೆದ 30 ವರ್ಷಗಳಲ್ಲಿ ಮೊದಲ ಬಾರಿಗೆ ಜಮ್ಮು ಕಾಶ್ಮೀರದಲ್ಲಿ ಮಹಿಳಾ ಸಿಆರ್ ಪಿಎಫ್ ತಂಡದಿಂದ ಮಹಿಳೆಯರ ತಪಾಸಣೆ ನಡೆಸಲಾಗುತ್ತಿದೆ.
ಸಿಆರ್ ಪಿಎಫ್ ಈ ಕ್ರಮಕ್ಕೆ ಮುಂದಾಗಿದ್ದು, ಜಮ್ಮುವಿನ ಲಾಲ್ ಚೌಕ್ ಪ್ರದೇಶದಲ್ಲಿ ಮಹಿಳೆಯರ ಬ್ಯಾಗ್ ಗಳನ್ನು ತಪಾಸಣೆ ನಡೆಸಲಾಗುತ್ತಿದೆ. ಕಳೆದ ಎರಡು ದಿನಗಳಲ್ಲಿ ಉಗ್ರರು ಮೂರು ಕಡೆ ವಲಸೆ ಕಾರ್ಮಿಕರ ಮೇಲೆ ದಾಳಿ ನಡೆಸಿದ್ದಾರೆ.
ಜಮ್ಮುವಿನ ಐಜಿಪಿ ವಿಜಯ್ ಕುಮಾರ್ ಈ ಬಗ್ಗೆ ಹೇಳಿಕೆ ನೀಡಿ, ಈ ನಿಟ್ಟಿನಲ್ಲಿ ಕಣಿವೆ ರಾಜ್ಯದಲ್ಲಿರುವ ಎಲ್ಲಾ ವಲಸೆ ಕಾರ್ಮಿಕರ ಸುರಕ್ಷತೆ ಖಚಿತಪಡಿಸಿಕೊಳ್ಳಲು ಕ್ರಮ ಕೈಗೊಳ್ಳಲಾಗಿದೆ. ಈ ಕೂಡಲೇ ಎಲ್ಲಾ ವಲಸಿಗರನ್ನು ಹತ್ತಿರದ ಪೊಲೀಸರ ಅಥವಾ ಅರೆಸೇನಾ, ಸೇನಾಕೇಂದ್ರಗಳಿಗೆ ಸ್ಥಳಾಂತರ ಮಾಡಬೇಕಿದೆ ಎಂದರು.
ಜಮ್ಮುವಿನಲ್ಲಿ ವಲಸೆ ಕಾರ್ಮಿಕರ ಮೇಲೆ ಸರಣಿ ದಾಳಿ ನಡೆಯುತ್ತಿದ್ದು, ಬಿಹಾರ, ಉತ್ತರ ಪ್ರದೇಶ ಮೂಲದ ಸುಮಾರು 11 ಜನರನ್ನು ಉಗ್ರರು ಹತ್ಯೆ ಮಾಡಿದ್ದಾರೆ. ಈ ನಾಗರಿಕರ ಹತ್ಯೆ ಬಳಿಕ ಭದ್ರತಾ ಪಡೆಗಳಿಂದ ನಡೆದ ಎನ್ ಕೌಂಟರ್ ಗಳಲ್ಲಿ 13 ಉಗ್ರರನ್ನು ಸದೆಬಡೆಯಲಾಗಿದೆ ಎಂದರು.
Discussion about this post