ಬೆಂಗಳೂರು : ರಾಜ್ಯದ ಗ್ರಾಮೀಣ ಜನತೆಗೆ ಕೇಂದ್ರ ಪಂಚಾಯತ್ ರಾಜ್ ಖಾತೆ ಸಚಿವ ಕಪಿಲ್ ಮೋರೇಶ್ವರ್ ಭರ್ಜರಿ ಸಿಹಿಸುದ್ದಿ ನೀಡಿದ್ದು, ಗ್ರಾಮಾಂತರ ಪ್ರದೇಶದ ಮನೆಗಳಿಗೆ ಸೌರ ವಿದ್ಯುತ್ ಸೌಲಭ್ಯ ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಗ್ರಾಮೀಣ ಪ್ರದೇಶಗಳಲ್ಲಿನ ಮನೆಗಳಿಗೆ ಸೌರ ವಿದ್ಯುತ್ ಸೌಲಭ್ಯ ನೀಡಲು ನೆರವು ಕಲ್ಪಿಸುವಂತೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಮನವಿಗೆ ಸ್ಪಂದಿಸಿದ ಕೇಂದ್ರ ಸಚಿವ ಕಪಿಲ್ ಮೋರೇಶ್ವರ್ ಅವರು, ಗ್ರಾಮಾಂತರ ಪ್ರದೇಶಗಳ ಮನೆಗಳಿಗೆ ಸೌರ ವಿದ್ಯುತ್ ಸೌಲಭ್ಯ ಕಲ್ಪಿಸಲು ಆರ್ಥಿಕ ನೆರವು ಕೋರಿ ರಾಜ್ಯ ಸರ್ಕಾರ ಪ್ರಸ್ತಾವನೆ ಸಲ್ಲಿಸಿದರೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಇನ್ನು ಜಲಜೀವನ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಸಂಬಂಧ, ಸಿಇಓ ಗಳು ಕಡ್ಡಾಯವಾಗಿ ಗ್ರಾಮಪಂಚಾಯತ್ ಗಳಿಗೆ ಭೇಟಿ ನೀಡಿ. ಈ ಮೂಲಕ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಂತೆ ಕೆ.ಎಸ್. ಈಶ್ವರಪ್ಪ ತಿಳಿಸಿದ್ದಾರೆ.
Door-to-door solar power facility
ಇದನ್ನೂ ಓದಿ:‘ನೆನಪಿನಲ್ಲಿ ನೀವೀಗ ಎಂದಿಗಿಂತ ಸನಿಹ’: ಪುನೀತ್ ರಾಜ್ಕುಮಾರ್ ಬಗ್ಗೆ ರಾಧಿಕಾ ಪಂಡಿತ್ ಭಾವುಕ ಸಂದೇಶ
ಇದನ್ನೂ ಓದಿ:ICC T20 WC | ಡೇರಿಲ್ ಮಿಷೆಲ್ ಅಬ್ಬರಕ್ಕೆ ಮಂಕಾದ ಇಂಗ್ಲೆಂಡ್: ಫೈನಲ್ಗೆ ಲಗ್ಗೆ ಇರಿಸಿದ ನ್ಯೂಜಿಲೆಂಡ್
Discussion about this post