ನವದೆಹಲಿ: ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯನ್ನು 1–0 ಅಂತರದಿಂದ ಗೆಲ್ಲುವ ಮೂಲಕ ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಟೆಸ್ಟ್ ರ್ಯಾಂಕಿಂಗ್ನಲ್ಲಿ ಟೀಂ ಇಂಡಿಯಾ ಮತ್ತೆ ಅಗ್ರ ಸ್ಥಾನಕ್ಕೇರಿದೆ. ಈ ಮೂಲಕ ವಿಶ್ವ ಚಾಂಪಿಯನ್ ನ್ಯೂಜಿಲೆಂಡ್ 2ನೇ ಸ್ಥಾನಕ್ಕೆ ಕುಸಿಯುವಂತೆ ಮಾಡಿದೆ.
ಮುಂಬೈ ವಾಂಖೆಡೆಯಲ್ಲಿ ನಡೆದ ಎರಡನೇ ಟೆಸ್ಟ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಭಾರತ 372 ರನ್ ಅಂತರ ಭರ್ಜರಿ ಗೆಲುವು ದಾಖಲಿಸಿದೆ. ಅದಕ್ಕೂ ಮೊದಲು ಕಾನ್ಪುರದಲ್ಲಿ ನಡೆದಿದ್ದ ಟೆಸ್ಟ್ ಗೆಲುವಿನ ಸನಿಹದಲ್ಲಿ ಡ್ರಾದಲ್ಲಿ ಕೊನೆಗೊಂಡಿತ್ತು.
ಇದನ್ನೂ ಓದಿ: ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿ ಗೆದ್ದ ಟೀಮ್ ಇಂಡಿಯಾ: ತವರಿನಲ್ಲಿ ಸತತ 14 ಸರಣಿ ಗೆಲುವಿನ ಸಾಧನೆ
ಜೂನ್ನಲ್ಲಿ ನಡೆದಿದ್ದ ವಿಶ್ವ ಟೆಸ್ಟ್ ಚಾಂಪಿಯನ್ಷಿಪ್ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧವೇ ಭಾರತ ಸೋಲನುಭವಿಸಿತ್ತು. ಫೈನಲ್ ಗೆದ್ದ ನ್ಯೂಜಿಲೆಂಡ್ ಟೆಸ್ಟ್ ರ್ಯಾಂಕಿಂಗ್ನಲ್ಲಿ ಅಗ್ರ ಸ್ಥಾನಕ್ಕೇರಿತ್ತು. ಇದೀಗ ಮತ್ತೆ ಭಾರತ ಮೊದಲ ಸ್ಥಾನ ಖಾತರಿಪಡಿಸಿಕೊಂಡಿದೆ.
ಸದ್ಯ ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ 124 ರೇಟಿಂಗ್ ಪಾಯಿಂಟ್ಗಳೊಂದಿಗೆ ಮೊದಲ ಸ್ಥಾನದಲ್ಲಿದ್ದು, ಕೇನ್ ವಿಲಿಯಮ್ಸನ್ ನೇತೃತ್ವದ ನ್ಯೂಜಿಲೆಂಡ್ 121 ಪಾಯಿಂಟ್ಗಳೊಂದಿಗೆ ಎರಡನೇ ಸ್ಥಾನದಲ್ಲಿದೆ.
ಉಳಿದಂತೆ ಆಸ್ಟ್ರೇಲಿಯಾ, ಇಂಗ್ಲೆಂಡ್ ಹಾಗೂ ಪಾಕಿಸ್ತಾನ ಕ್ರಮವಾಗಿ 3, 4 ಹಾಗೂ ಐದನೇ ಸ್ಥಾನಗಳಲ್ಲಿವೆ.
ಇನ್ನಷ್ಟು ಓದು…
10 wickets: 10 ವಿಕೆಟ್ ಪಡೆದ ಕಿವೀಸ್ ಸ್ಪಿನ್ನರ್ ಎಜಾಜ್ ಪಟೇಲ್
ಒಮಿಕ್ರಾನ್ ಭೀತಿ ಮಧ್ಯೆ ದಕ್ಷಿಣ ಆಫ್ರಿಕಾ ಪ್ರವಾಸ ಮಾಡಲಿದೆ ಟೀಂ ಇಂಡಿಯಾ: ಸಿಎಸ್ಎ
Discussion about this post