ಮೈಸೂರು:-ಅರಮನೆ ನಗರಿ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದ ಸಮೀಪ ಇರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯಕ್ಕೆ ಸೇರಿದ ಕಟ್ಟಡದಲ್ಲಿ ಟೆಕ್ ಪಾರ್ಕ್ ಸ್ಥಾಪನೆ ಮಾಡಲಾಗುವುದು. ಹಾಗೆಯೇ ಮಂಡಕಳ್ಳಿ ವಿಮಾನ ನಿಲ್ದಾಣ ರನ್ ವೇ ವಿಸ್ತರಣೆಗೆ ತಕ್ಷಣವೇ ಅಗತ್ಯವಿರುವ ಭೂಮಿಯನ್ನು ಒದಗಿಸಲಾಗುತ್ತದೆ ಎಂದು ಐಟಿ, ಬಿಟಿ ಮತ್ತು ವಿಜ್ಞಾನ ಹಾಗೂ ತಂತ್ರಜ್ಞಾನ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದರು.
ಸೋಮವಾರ ಮೈಸೂರಿನ ಖಾಸಗಿ ಪಂಚತಾರಾ ಹೋಟೆಲ್ನಲ್ಲಿ ಐಟಿಬಿಟಿ ಇಲಾಖೆ ಆಯೋಜಿಸಿದ್ದ `ದಿ ಬಿಗ್ ಟೆಕ್ ಷೋ@ಮೈಸೂರು’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಟೆಕ್ ಪಾರ್ಕ್ಗೆ ಅಗತ್ಯವಿರುವ 1 ಲಕ್ಷ ಚದರಡಿ ಜಾಗವನ್ನು ಪೂರೈಸಲು ಕರ್ನಾಟಕ ರಾಜ್ಯ ಮುಕ್ತ ವಿವಿಯೊಂದಿಗೆ ಮಾತನಾಡಲಾಗಿದೆ. ವಿಮಾನ ನಿಲ್ದಾಣ ವಿಸ್ತರಣೆ ಸಂಬoಧ ಮುಖ್ಯಮಂತ್ರಿಯೊAದಿಗೆ ಚರ್ಚಿಸಿದ್ದು, ಸಕಾರಾತ್ಮಕ ಸ್ಪಂದನ ಸಿಕ್ಕಿದೆ. ಜತೆಗೆ ಇಲ್ಲಿರುವ ವಸ್ತು ಪ್ರದರ್ಶನ ಕೇಂದ್ರದಲ್ಲಿ ಸುಸಜ್ಜಿತ `ಮೈಸೂರು ಅನುಭವ ಕೇಂದ್ರ’ವನ್ನು (ಮೈಸೂರು ಎಕ್ಸಿ÷್ಫರಿಯನ್ಸ್ ಸೆಂಟರ್) ತೆರೆಯಲಾಗುವುದು’ ಎಂದರು.
ಈ `ಅನುಭವ ಕೇಂದ್ರ’ವು ಜನರಿಗೆ ಮೈಸೂರಿನ ಸಾಮಾನ್ಯ ಪರಿಚಯ ಮಾಡಿಕೊಡುವುದಷ್ಟೇ ಅಲ್ಲದೆ, ತಂತ್ರಜ್ಞಾನ, ಆವಿಷ್ಕಾರ ಹಾಗೂ ಇಲ್ಲಿನ ಉದ್ಯಮ ವಾತಾವರಣದ ಬಗ್ಗೆ ಸ್ಪಷ್ಟ ಚಿತ್ರಣ ನೀಡಲಿದೆ ಎಂದು ತಿಳಿಸಿದರು.
ಈ ನಗರದಲ್ಲಿ ಸದ್ಯಕ್ಕೆ 100 ನವೋದ್ಯಮಗಳಿವೆ. ಇದರ ಜೊತೆಗೆ ಜಾಗತಿಕ ಮಟ್ಟದ 15 ಕಂಪನಿಗಳಾದರೂ ಇಲ್ಲಿ ತಮ್ಮ ಜಿಸಿಸಿ (ಗ್ಲೋಬಲ್ ಕೆಪ್ಯಾಸಿಟಿ ಸೆಂಟರ್) ಕೇಂದ್ರಗಳನ್ನು ತೆಗೆಯುವಂತಾಗಬೇಕು ಎಂಬ ಗುರಿ ಇದೆ ಎಂದರು. ಇತ್ತೀಚೆಗೆ ದುಬೈ ಎಕ್ಸ್ ಪೋಗೆ ಹೋಗಿದ್ದಾಗ ಅಲ್ಲಿ ತಮಗಾದ ಅನುಭವವನ್ನು ಹಂಚಿಕೊAಡ ಅವರು, “ರಾಜ್ಯದಲ್ಲಿ ಲಕ್ಷಾಂತರ ಕೋಟಿ ರೂಪಾಯಿಗಳ ಮೊತ್ತದಲ್ಲಿ ಹೂಡಿಕೆ ಮಾಡಲು ಉದ್ಯಮಿಗಳು ಸಿದ್ಧವಿದ್ದಾರೆ. ಅದಕ್ಕೆ ತಕ್ಕಂತೆ ನಾವು ಇಲ್ಲಿನ ವ್ಯವಸ್ಥೆಯನ್ನು ಸದೃಢಗೊಳಿಸಲು ಬೆಂಗಳೂರು ಹೊರತುಪಡಿಸಿ ಬೇರೆಡೆಗಳಲ್ಲೂ ವ್ಯವಸ್ಥಿತವಾಗಿ ಅಭಿವೃದ್ಧಿಗೊಳ್ಳಬೇಕಿದೆ’ ಎಂದರು.
ಬೆಂಗಳೂರಿನ ಆಚೆಗೂ ಉದ್ದಿಮೆಗಳು ಬೇರೂರಬೇಕೆನ್ನುವುದು ಸರಕಾರದ ಸಂಕಲ್ಪವಾಗಿದೆ.ಇದಕ್ಕೆ ಅನುಗುಣವಾಗಿ `ಬಿಯಾಂಡ್ ಬೆಂಗಳೂರು’ ಕಾರ್ಯಕ್ರಮ, 600 ಕೋಟಿ ವೆಚ್ಚದೊಂದಿಗೆ ಎಂಜಿನಿಯರಿ೦ಗ್ ಸಂಶೋಧನೆ ಮತ್ತು ಅಭಿವೃದ್ಧಿ ನೀತಿ, ಹೊಸ ಕೈಗಾರಿಕಾ ನೀತಿ ಮತ್ತು ಫ್ಯಾಬ್ ನೀತಿಗಳನ್ನು ಜಾರಿಗೆ ತರಲಾಗಿದೆ ಎಂದು ವಿವರಿಸಿದರು.
ಈಗ ನಮ್ಮ ನವೋದ್ಯಮಗಳಿಗೆ ವಿದೇಶೀ ಬಂಡವಾಳ ಯಥೇಚ್ಛವಾಗಿ ಬರುತ್ತಿದ್ದು, ಇದು ಶೇ 90ರಷ್ಟಿದೆ. ಸ್ಥಳೀಯರ ಹೂಡಿಕೆ ಶೇ.10ರಷ್ಟು ಮಾತ್ರವಿದೆ. ಒಳಗಿನವರು ಕೂಡ ಬಂಡವಾಳ ಹೂಡಿ, ಉದ್ಯಮಶೀಲತೆ ಬೆಳೆಸಿ ಅವಕಾಶಗಳ ಲಾಭ ಪಡೆಯಬೇಕು. ಉದ್ದಿಮೆಗಳ ಅಗತ್ಯಕ್ಕೆ ತಕ್ಕಂತೆ ನಮ್ಮ ಎಂಜಿನಿಯರಿAಗ್, ಪದವಿ, ಐಟಿಐ ಮತ್ತು ಪಾಲಿಟೆಕ್ನಿಕ್ ಶಿಕ್ಷಣಗಳನ್ನು ಸಮಗ್ರವಾಗಿ ಸುಧಾರಿಸಲಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ಮೇಯರ್ ಸುನಂದಾ ಫಾಲಾಕ್ಷ, ಕೆಡಿಇಎಂ ಮುಖ್ಯಸ್ಥ ಬಿ.ವಿ.ನಾಯ್ಡ ಎಲೆಕ್ಟಾçನಿಕ್ಸ್, ಐಟಿ/ಬಿಟಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಇ.ವಿ.ರಮಣ ರೆಡ್ಡಿ, ಇಲಾಖೆ ನಿರ್ದೇಶಕಿ ಡಾ.ಮೀನಾ ನಾಗರಾಜ್ ಮುಂತಾದವರು ಉಪಸ್ಥಿತರಿದ್ದರು. ನ್ಯಾಸ್ ಕಾಂ ಅಧ್ಯಕ್ಷೆ ದೇಬ್ ಜಾನಿ ಘೋಷ್ ವರ್ಚುವಲ್ ನಲ್ಲಿ ಭಾಗವಹಿಸಿದ್ದರು.
ಇದನ್ನೂ ಓದಿ: e Paper – October 26, 2021
ಇದನ್ನೂ ಓದಿ: Corona: ರಾಜ್ಯಾದ್ಯಂತ 290 ಕೊರೋನ ಪ್ರಕರಣ ದೃಢ, 10 ಮಂದಿ ಸಾವು

























Discussion about this post