ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 317 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 30,01251ಕ್ಕೆ ಏರಿಕೆಯಾಗಿದೆ.
ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ಇಬ್ಬರು ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 38277ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಬೆಂಗಳೂರಿನಲ್ಲಿ ಇಂದು 205 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,59,388ಕ್ಕೆ ಏರಿಕೆಯಾಗಿದೆ. ಇಂದು ನಗರದಲ್ಲಿ ಕೊರೋನಾದಿಂದ ಇಬ್ಬರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.
ರಾಜ್ಯದಲ್ಲಿ ಇಂದು 301 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 29,55,766ಕ್ಕೆ ಏರಿಕೆಯಾಗಿದೆ. ಇನ್ನು 7179 ಸಕ್ರಿಯ ಪ್ರಕರಣಗಳಿವೆ.
Two killed by corona in state,

























Discussion about this post