ಕಳಸ : ನದಿಗೆ ಈಜಲು ತೆರಳಿದ ಇಬ್ಬರು ಯುವಕರು ನೀರುಪಾಲಾದ ಘಟನೆ ಕಳಸದಲ್ಲಿ ನಡೆದಿದೆ. ಜಿಲ್ಲೆಯ ಕಳಸ ತಾಲೂಕಿನ ಭದ್ರಾ ನದಿಗೆ ಸ್ನಾನಕ್ಕೆಂದು ತೆರಳಿದ್ದ ಇಬ್ಬರು ಯುವಕರು ನೀರುಪಾಲಾಗಿದ್ದು, ಮನೆಯಿಂದ ಕಾಲೇಜಿಗೆಂದು ತೆರಳಿದ್ದ ಇಬ್ಬರು ವಿದ್ಯಾರ್ಥಿಗಳು ಮೊದಲು ಕಳಸದ ಕೆಪಿಎಸ್ ಕಾಲೇಜಿಗೆ ತೆರಳಿದ್ದರು ನಂತರದಲ್ಲಿ ಭದ್ರಾ ನದಿಗೆ ಈಜಲು ತೆರಳಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.
ಹಿರೇಬೈಲ್ ಗ್ರಾಮದ ಜೀವನ್ ದಾಸ್ (17) ಹಾಗೂ ಹೆಮ್ಮಕ್ಕಿ ಗ್ರಾಮದ ನಿಕ್ಷೇಪ್ (17) ಇಬ್ಬರು ಮೃತ ವಿದ್ಯಾರ್ಥಿಗಳು ಎಂದು ಗುರುತಿಸಲಾಗಿದೆ. ನದಿಯಲ್ಲಿ ಜೀವನ್ ದಾಸ್ ನ ಮೃತದೇಹ ದೊರೆತಿದ್ದು, ನಿಕ್ಷೇಪ್ ನ ಮೃತದೇಹಕ್ಕಾಗಿ ಶೋಧ ಕಾರ್ಯ ಮುಂದುವರೆದಿದೆ.
ಘಟನಾ ಸ್ಥಳದಲ್ಲಿ ಪೊಲೀಸರು ಹಾಗೂ ಅಗ್ನಿಶಾಮಕದಳದ ಸಿಬ್ಬಂದಿಗಳು ಶೋಧ ಕಾರ್ಯ ನಡೆಸುತ್ತಿದ್ದಾರೆ ಹೆಚ್ಚಿನ ಸಂಖ್ಯೆಯಲ್ಲಿ ಸ್ಥಳೀಯರು ಸ್ಥಳಕ್ಕಾಗಮಿಸುತ್ತಿದ್ದಾರೆ.
Two waterlogged youths

























Discussion about this post