ನವದೆಹಲಿ: ಟ್ವೆಂಟಿ-20 ಕ್ರಿಕೆಟ್ ವಿಶ್ವಕಪ್ ಬಳಿಕ ಟೀಂ ಇಂಡಿಯಾ ನಾಯಕತ್ವಕ್ಕೆ ವಿದಾಯ ಹೇಳಿರುವ ವಿರಾಟ್ ಕೊಹ್ಲಿ ಸದ್ಯ ವಿಶ್ರಾಂತಿಯಲ್ಲಿದ್ದು, ಕುಟುಂಬದವರ ಜತೆ ಕಾಲ ಕಳೆಯುತ್ತಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ ಸರಣಿಯಿಂದ ವಿರಾಮ ಪಡೆದಿರುವ ಅವರು ಸದ್ಯ ಪತ್ನಿ ಅನುಷ್ಕಾ ಶರ್ಮಾ ಜತೆಗಿನ ಸೆಲ್ಫಿಯೊಂದನ್ನು ಸಮಾಜಿಕ ಜಾಲತಾಣಗಳಾದ ಟ್ವಿಟರ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಕಟಿಸಿದ್ದಾರೆ.
‘ಮೈ ರಾಕ್’ ಎಂಬ ಶೀರ್ಷಿಕೆಯೊಂದಿಗೆ ಕೊಹ್ಲಿ ಪ್ರಕಟಿಸಿರುವ ಚಿತ್ರಕ್ಕೆ ಅಭಿಮಾನಿಗಳು, ಫಾಲೋವರ್ಸ್‌ಗಳಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.
My rock ❤️ pic.twitter.com/NaUWrG8US7
— Virat Kohli (@imVkohli) November 21, 2021
ಕೊಹ್ಲಿ ಪೋಸ್ಟ್ ಅನ್ನು ಭಾನುವಾರ ಸಂಜೆ ವೇಳೆಗೆ ಇನ್‌ಸ್ಟಾಗ್ರಾಂನಲ್ಲಿ 56 ಲಕ್ಷಕ್ಕೂ ಹೆಚ್ಚು ಮಂದಿ ಲೈಕ್ ಮಾಡಿದ್ದಾರೆ. ಟ್ವಿಟರ್‌ನಲ್ಲಿ ಸುಮಾರು 2 ಲಕ್ಷ ಮಂದಿ ಲೈಕ್ ಮಾಡಿದ್ದಾರೆ.
ಇದನ್ನೂ ಓದಿ: ನಾಯಕ ರೋಹಿತ್, ರಾಹುಲ್ ಅಬ್ಬರದ ಬ್ಯಾಟಿಂಗ್: ನ್ಯೂಜಿಲೆಂಡ್ ವಿರುದ್ಧ ಟ್ವೆಂಟಿ-20 ಸರಣಿ ಗೆದ್ದ ಭಾರತ
ದುಬೈಯಲ್ಲಿ ದೀಪಾವಳಿ ಆಚರಿಸಿಕೊಂಡಿದ್ದ ಕೊಹ್ಲಿ–ಅನುಷ್ಕಾ ಜೋಡಿ ಬಳಿಕ ತವರಿಗೆ ಮರಳಿತ್ತು. ಟ್ವೆಂಟಿ–20 ವಿಶ್ವಕಪ್ ಸಂದರ್ಭದಲ್ಲಿ ಅನುಷ್ಕಾ ಅವರು ಕೊಹ್ಲಿ ಜತೆಗಿದ್ದರು.
ದುಬೈಯ ಈಜುಕೊಳವೊಂದರಲ್ಲಿ ಪೋಸ್ ನೀಡುತ್ತಿರುವ ಚಿತ್ರವೊಂದನ್ನು ಅನುಷ್ಕಾ ಶರ್ಮಾ ಇತ್ತೀಚೆಗೆ ಇನ್‌ಸ್ಟಾಗ್ರಾಂನಲ್ಲಿ ಪ್ರಕಟಿಸಿದ್ದರು. ಅದೂ ಸಹ ಅಭಿಮಾನಿಗಳ ಗಮನ ಸೆಳೆದಿತ್ತು.
View this post on Instagram
View this post on Instagram
Discussion about this post