ಚಿಕ್ಕಮಗಳೂರು: ನಗರವನ್ನು ಸಮಗ್ರವಾಗಿ ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ಮತದಾರರು ಬಿಜೆಪಿಯ ಕಮಲದ ಗುರುತಿಗೆ ಮತ ನೀಡಿ ನಗರದಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರದ ಚುಕ್ಕಾಣಿ ಹಿಡಿಯಲು ಸಹಕರಿಸುವಂತೆ ಹಾಸನ ಬಿಜೆಪಿ ಶಾಸಕ ಪ್ರೀತಂಗೌಡ ಮನವಿ ಮಾಡಿದರು.
ನಗರಸಭೆ ಚುನಾವಣೆ ಹಿನ್ನೆಲೆ ನಗರದ ವಾರ್ಡ್‌ನಂಬರ್ ೨೭ ರ ಅಭ್ಯರ್ಥಿ ಟಿ ರಾಜಶೇಖರ ಪರವಾಗಿ ಮತಯಾಚನೆ ವೇಳೆ ಮಾತನಾಡಿದರು. ಕಳೆದ ೧೫ ವರ್ಷದಿಂದ ನಗರಸಭೆಯಲ್ಲಿ ಬಿಜೆಪಿ ಅಧಿಕಾರ ನಡೆಸಿಕೊಂಡು ಬಂದಿದ್ದು ಶಾಸಕ ಸಿ.ಟಿ.ರವಿ ಅವರ ನೇತೃತ್ವದಲ್ಲಿ ಹಲವಾರು ಅಭಿವೃದ್ಧಿ ಕಾರ್ಯಗಳಾಗಿವೆ. ಅದೇ ಮಾದರಿಯಲ್ಲಿ ೨೭ನೇ ವಾರ್ಡ್‌ನ ಅಭ್ಯರ್ಥಿ ಟಿ ರಾಜಶೇಖರ್ ಹಲವು ನಗರದ ಜನರ ಕಷ್ಟಗಳಿಗೆ ಸ್ಪಂದಿಸಿ ಸಮಾಜಮುಖಿ ಕಾರ್ಯಗಳನ್ನು ನಡೆಸಿಕೊಂಡು ಬರುತ್ತಿದ್ದು ನಗರದ ಎಲ್ಲಾ ವಾರ್ಡ್‌ಗಳ ಮತದಾರರು ಬಿಜೆಪಿಯ ಕಮಲದ ಗುರುತಿಗೆ ಮತ ನೀಡಿ ಗೆಲ್ಲಿಸುವಂತೆ ವಿನಂತಿಸಿಕೊಂಡರು.
ಟಿ ರಾಜಶೇಖರ್ ಯಾವುದೇ ಫಲಾಪೇಕ್ಷೆ ಇಲ್ಲದೇ ಜನರ ಕಷ್ಟಗಳಿಗೆ ಸ್ಪಂದಿಸಿ ಕೆಲಸ ಮಾಡುತ್ತಿದ್ದಾರೆ. ನಗರದ ಸಮಗ್ರ ಅಭಿವೃದ್ಧಿ ನಿಟ್ಟಿನಲ್ಲಿ ಬಿಜೆಪಿಯ ಅಭ್ಯರ್ಥಿಗಳನ್ನು ಅತಿ ಹೆಚ್ಚು ಮತಗಳ ಅಂತರದಿಂದ ವಿಜಯಶಾಲಿಗಳಾಗಿ ಮಾಡುವಂತೆ ಕೇಳಿಕೊಂಡರು .
ಅಭ್ಯರ್ಥಿ ಟಿ ರಾಜಶೇಖರ ಮಾತನಾಡಿ ಶಾಸಕ ಸಿ.ಟಿ. ರವಿ ಅವರು ಕ್ಷೇತ್ರದ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಅಭಿವೃಧ್ದಿಗೆ ನಿರಂತರವಾಗಿ ಶ್ರಮಿಸುತ್ತಾ ಬಂದಿದ್ದಾರೆ. ಈ ಬಾರಿಯ ನಗರಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಬೆಂಬಲಿಸುವ ಮೂಲಕ ಹೆಚ್ಚು ಮತಗಳ ಅಂತರದಿಂದ ಗೆಲ್ಲಿಸುವಂತೆ ಕೇಳಿಕೊಂಡರು.
ಈ ಸಂದರ್ಭದಲ್ಲಿ ಪೂರ್ಣೇಶ್, ಮಧು, ಶಿಲ್ಪಾರಾಜಶೇಖರ್, ಜಸಂತಾಅನಿಲ್, ರೇಖಾ ಅನಿಲ್, ಶುಭಸತ್ಯಮೂರ್ತಿ, ರಾಧಾರಾಜ್‌ಕುಮಾರ್, ಕೃಷ್ಣಮೂರ್ತಿ ಮತ್ತಿತರರು ಇದ್ದರು.
Vote
Discussion about this post