ಚಿಕ್ಕಮಗಳೂರು : ಜಿಲ್ಲೆಯಲ್ಲಿ ಭೀಕರ ಅಪಘಾತವಾಗಿದ್ದು, ಮಹಿಳೆಯ ತಲೆ ಮೇಲೆ ವಾಹನದ ಚಕ್ರ ಹರಿದಿದ್ದು ಸ್ಥಳದಲ್ಲೇ ಮಹಿಳೆ ಸಾವನ್ನಪ್ಪಿರುವ ಘಟನೆ ಜಿಲ್ಲೆಯ, ಕೊಪ್ಪ ಪಟ್ಟಣದಲ್ಲಿ ನಡೆದಿದೆ
ಮುಖ್ಯರಸ್ತೆಯಲ್ಲಿ ಆಗ್ನಿ ಶಾಮಕದ ದಳದ ವಾಹನ ಹಾಗೂ ಸ್ಕೂಟಿ ನಡುವೆ ಭೀಕರ ಅಪಘಾತ ನಡೆದಿದೆ. ಈ ವೇಳೆ ಮಹಿಳೆಯೊಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಪಟ್ಟಣದ ದ್ಯಾವೇಗೌಡ ವೃತ್ತದಿಂದ ವಾಟರ್ ಟ್ಯಾಂಕ್ ವೃತ್ತದ ಕಡೆ ಸಾಗುತ್ತಿದ್ದ ಶಾಮಕದ ದಳದ ವಾಹನದ ಹಿಂಬದಿ ಚಕ್ರಕ್ಕೆ ಸ್ಕೂಟಿಯ ಹಿಂಬದಿ ಸಾವರರು ಸಿಲುಕಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.
ಮೃತರನ್ನು ಮುಮ್ತಾಜ್ (46) ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಕೊಪ್ಪ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿ ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
Woman dies after vehicle wheel rips off in road accident
Discussion about this post