- ಪಂಚಮಸಾಲಿ ಸಮಾಜಕ್ಕೆ ೨ಎ ಮೀಸಲಾತಿಗೆ ಆಗ್ರಹ
ಕೊಪ್ಪಳ: ಪಂಚಮಸಾಲಿ ಸಮಾಜಕ್ಕೆ ೨ಎ ಮೀಸಲಾತಿ ಕೊಡಲೇಬೇಕು ಎಂದು ಒತ್ತಾಯಿಸಿ ಪಾದಯಾತ್ರೆ ನಡೆಸಿ ಸರ್ಕಾರದ ಗಮನ ಸೆಳೆಯುತ್ತಿರುವ ಉದ್ದೇಶದಿಂದ ಅ.೧ ರಿಂದ ಅಕ್ಟೋಬರ್ ೧ ರಿಂದ ಸತ್ಯಾಗ್ರಹ ಆರಂಭಿಸಲು ಸಮುದಾಯ ನಿರ್ಧರಿಸಿದೆ ಎಂದು ಪಂಚಮಸಾಲಿಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.
ಕೊಪ್ಪಳದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಅ. ೦೧ ರೊಳಗೆ ಸಿಎಂ ಬೊಮ್ಮಾಯಿ ಅವರು ಮೀಸಲಾತಿ ಘೋಷಿಸಬೇಕು ಎಂದು ಇದೇ ವೇಳೆ ಆಗ್ರಹಿಸಿದರು.
ಸರ್ಕಾರ ಈ ವಿಷಯದಲ್ಲಿ ನಿದಾನ ಮಾಡಿದಲ್ಲಿ, ಬೆಂಗಳೂರಿನಲ್ಲಿ ತೀವ್ರ ಹೋರಾಟ ನಡೆಸುವುದಾಗಿ ಅವರು ಎಚ್ಚರಿಕೆ ನೀಡಿದ್ದಾರೆ.
ರಾಜ್ಯದ ಪಂಚಮಸಾಲಿ ಸಮುದಾಯಕ್ಕೆ ೨ಎ ಮೀಸಲಾತಿ ಆಗ್ರಹಿಸಿ ಪ್ರತಿಭಟನೆ ನಡೆಸಿದ ವೇಳೆ ರಾಜ್ಯ ಸರ್ಕಾರವು ೬ ತಿಂಗಳ ಕಾಲಾವಕಾಶ ಕೇಳಿತ್ತು. ಆ ಸಮಯ ಮೀರಿದ್ದು, ಈಗಲೂ ಬೇಡಿಕೆ ಈಡೇರಿಲ್ಲ ಎಂದು ಸ್ವಾಮೀಜಿ ಹೇಳಿದರು.
ಸರ್ಕಾರಕ್ಕೆ ತಮ್ಮ ಬೇಡಿಕೆಯ ಬಗ್ಗೆ ನೆನಪು ಮಾಡಿಕೊಡಲು ಮತ್ತೆ ಅಭಿಯಾನ ಆರಂಭಿಸಿರುವುದಾಗಿ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

























Discussion about this post