ಚಿಕ್ಕಮಗಳೂರು : ಜಿಲ್ಲೆಯ ನರಸಿಂಹರಾಜಪುರ ತಾಲೂಕಿನ ಬೈರಾಪುರ ಎಂಬ ಗ್ರಾಮದಲ್ಲಿ ಆನೆಗಳನ್ನು ಓಡಿಸಲು ಹೋದ ವ್ಯಕ್ತಿಯೋರ್ವ ನಾಪತ್ತೆಯಾಗಿರುವ ಘಟನೆ ತಡರಾತ್ರಿ ಬೆಳಕಿಗೆ ಬಂದಿದೆ. ಯಶವಂತ್ (50) ಜಮೀನಿಗೆ ಬಂದಿದ್ದ ಆನೆಗಳನ್ನು ಓಡಿಸಲು ತಡ ರಾತ್ರಿ ಮನೆಯಿಂದ ಹೊರಗೆ ಹೋಗಿದ್ದರು ಎಂದು ಮನೆಯವರು ತಿಳಿಸಿದ್ದಾರೆ.
ರಾತ್ರಿ ಆನೆಗಳನ್ನು ಓಡಿಸಲು ಹೋದ ಯಶವಂತ್ ಎಷ್ಟು ಹೊತ್ತಾದರೂ ಮನೆಗೆ ಬಾರದ್ದನ್ನು ಕಂಡ ಮನೆಯವರು ಕಂಗಾಲಾಗಿ ವಿಷಯವನ್ನು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದ್ದಾರೆ. ಅಧಿಕಾರಿಗಳಿಗೆ ವಿಷಯ ತಿಳಿಸಿದರೂ ಕೂಡ ಅವರು ಸಕಾರಾತ್ಮಕವಾಗಿ ಸ್ಪಂದಿಸದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಇಲಾಖೆಯ ಅಧಿಕಾರಿಗಳ ಮೇಲೆ ಸಹ ಬೇಸರ ವ್ಯಕ್ತಪಡಿಸಿದ್ದಾರೆ.
ಇನ್ನು ನಾಪತ್ತೆಯಾದ ಯಶವಂತ್ ಅವರನ್ನು ಆದಷ್ಟು ಬೇಗ ಹುಡುಕಿ ಕೊಡುವಂತೆ ಕುಟುಂಬಸ್ಥರು ಮನವಿ ಮಾಡಿದ್ದಾರೆ.

























Discussion about this post