ಚಿಕ್ಕಮಗಳೂರು: ಆರೋಗ್ಯವೇ ಭಾಗ್ಯ ಎನ್ನುವ ಮಾತಿನಂತೆ ಮನು?ನಿಗೆ ಹಣಕ್ಕಿಂತ ಆರೋಗ್ಯ ಸಂಪತ್ತು ಅತಿ ಮುಖ್ಯವಾದುದು, ಆರೋಗ್ಯಯುತ ಭಾರತ ನಿರ್ಮಾಣಕ್ಕೆ ಫಿಟ್ಇಂಡಿಯಾ ಅಭಿಯಾನ ಕೈಗೊಳ್ಳಲಾಗಿದೆ ಎಂದು ಶಾಸಕ ಸಿ.ಟಿ.ರವಿ ಹೇಳಿದರು.
ಅವರು ಜಿಲ್ಲಾ ಆಟದ ಮೈದಾನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಆಯು?ನ್ ಭಾರತ್ ಅಂಗವಾಗಿ ಆಯೋಜಿಸಿದ್ದ ಫಿಟ್ ಇಂಡಿಯಾ ಜಾಥಾ ಕಾರ್ಯಕ್ರಮಕ್ಕೆ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿ ಮಾತನಾಡಿದರು.
ದೇಶದ ಸ್ವಚ್ಚತೆಗೆ ಸ್ವಚ್ಚ ಭಾರತ ಅಭಿಯಾನ, ಆರೋಗ್ಯಯುತ ಭಾರತ ನಿರ್ಮಾಣಕ್ಕೆ ಫಿಟ್ಇಂಡಿಯಾ ಅಭಿಯಾನ ಕೈಗೊಳ್ಳಲಾಗಿದೆ ಎಂದ ಅವರು ಆರೋಗ್ಯವೇ ಭಾಗ್ಯ ಎನ್ನುವ ಮಾತಿನಂತೆ ಮನು?ನಿಗೆ ಹಣಕ್ಕಿಂತ ಆರೋಗ್ಯ ಸಂಪತ್ತು ಅತಿ ಮುಖ್ಯವಾದುದು. ಸದೃಢ, ಸಮತೋಲನ ಆರೋಗ್ಯ ಕಾಪಾಡಿಕೊಳ್ಳುವಲ್ಲಿ ಜಾಗೃತಿ ಅಗತ್ಯವಿದೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಶೇ ೩೦ ರಷ್ಟು ಅಂದೆ ೪.೪ ಲಕ್ಷ ಮಂದಿ ಅಸಾಂಕ್ರಾಮಿಕ ರೋಗಗಳಿಗೆ ತುತ್ತಾಗಿದ್ದಾರೆ. ಡಯಾಬಿಟಿಸ್, ಬಿ.ಪಿ. ಹೃದಯಸಂಬಂಧಿ ಕಾಯಿಲೆ, ಕ್ಯಾನ್ಸ್ರ್ ಮತ್ತಿತರ ಕಾಯಿಲೆಗಳು ಇರುವುದು ಗಂಭೀರತೆಯನ್ನು ಉಂಟು ಮಾಡುತ್ತದೆ. ಈಗಾಗಲೇ ೭೫ ಸಾವಿರ ಜನರನ್ನು ಪರೀಕ್ಷೆಗೆ ಒಳಪಡಿಸಿದ್ದು ಮುಂದಿನ ದಿನಗಳಲ್ಲಿ ಬಾಕಿ ಇರುವ ಜನರನ್ನು ಪರೀಕ್ಷೆಗೆ ಒಳಪಡಿಸಿ ಪ್ರತಿಯೊಬ್ಬರಿಗೂ ಮೂಲಕ ಚಿಕಿತ್ಸೆ ನೀಡಲಾಗುವುದು ಎಂದು ಭರವಸೆ ನೀಡಿದರು.
ವಿಧಾನಪರಿ?ತ್ ಉಪಸಭಾಪತಿ ಎಂ.ಕೆ.ಪ್ರಾಣೇಶ್ ಮಾತನಾಡಿ ಮಹಾತ್ಮ ಗಾಂಧೀಜಿಯವರು ಕಂಡ ಕನಸನ್ನು ನನಸಾಗಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರು ಶ್ರಮಿಸಬೇಕಿದೆ. ಸ್ವಚ್ಚಭಾರತ, ಆರೋಗ್ಯಯುತ ಭಾರತ ನಿರ್ಮಾಣ ಅವರ ಧ್ಯೇಯವಾಗಿತ್ತು. ಅವರ ಆಶಯಗಳನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಯೋಜನೆ ರೂಪಿಸಿದ್ದಾರೆ ಎಂದು ಹೇಳಿದರು.
ವಿಧಾನಪರಿಷತ್ ಸದಸ್ಯ ಎಸ್.ಎಲ್.ಬೋಜೇಗೌಡ ಮಾತನಾಡಿ ದೇಶ ಫಿಟ್ ಇಂಡಿಯಾವಾದಾಗ ಮಾತ್ರ ಜನತೆ ಎಲ್ಲವನ್ನು ಸಾಧಿಸಲು ಸಾಧ್ಯವಾಗಲಿದೆ. ಆರೋಗ್ಯವೇ ಭಾಗ್ಯ ಎನ್ನುವಂತೆ ಅದನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ದಿನನಿತ್ಯದಲ್ಲಿ ವ್ಯಾಯಾಮ, ಸಮತೋಲನ ಆಹಾರ ಸೇವನೆ ಮಾಡಬೇಕು ಎಂದು ಸಲಹೆ ನೀಡಿದರು.
ಇತ್ತೀಚಿನ ದಿನಗಳಲ್ಲಿ ಯುವಜನತೆ ಮಾದಕ ವ್ಯಸನಕ್ಕೆ ಬಲಿಯಾಗುತ್ತಿರುವುದು ವಿ?ಧನೀಯ ಈ ಬಗ್ಗೆ ಹೆಚ್ಚು ಜನಜಾಗೃತಿ ಅಗತ್ಯವಿದೆ. ಕುವೆಂಪು ಹೇಳಿದಂತೆ ಸರ್ವಜನಾಂಗದ ಶಾಂತಿಯ ತೋಟವನ್ನಾಗಿ ದೇಶವನ್ನು ಬದಲಾಯಿಸಬೇಕಿದೆ ಎಂದು ತಿಳಿಸಿದರು.
ಜಾಥವು ಜಿಲ್ಲಾ ಆಟದ ಮೈದಾನದಿಂದ ಪ್ರಾರಂಭವಾಗಿ ಬೋಳರಾಮೇಶ್ವರ ದೇವಸ್ಥಾನ, ಐ.ಜಿ ರಸ್ತೆ, ಎನ್.ಎಂ.ಸಿ ಸರ್ಕಲ್, ಹನುಮಂತಪ್ಪ ಸರ್ಕಲ್, ಎಂ.ಜಿ.ರೋಡ್ ಮೂಲಕ ಜಿಲ್ಲಾ ಆಟದ ಮೈದಾನದಲ್ಲಿ ಕೊನೆಗೊಂಡಿತು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕೆ.ಎನ್.ರಮೇಶ್, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಎಂ.ಹೆಚ್.ಅಕ್ಷಯ್. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು. ಅಪರ ಜಿಲ್ಲಾಧಿಕಾರಿ ರೂಪಾ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಉಮೇಶ್. ಜಿಲ್ಲಾ ಸರ್ವೇಕ್ಷಣಾಧಿಕಾರಿ ಮಂಜುನಾಥ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

























Discussion about this post