ಚಿಕ್ಕಮಗಳೂರು: ನಗರದ ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ ನಗರ ಕಾಂಗ್ರೇಸ್ ಸಮಿತಿ, ಬ್ಲಾಕ್ ಕಾಂಗ್ರೇಸ್ ಸಮಿತಿ ವತಿಯಿಂದ ನಗರದ ಆಜಾದ್ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ನಗರದ ಎಂ.ಜಿ ರಸ್ತೆಯ ವಾಹನ ನಿಲುಗಡೆ ಶುಲ್ಕ ವಸೂಲಿ ಮಾಡಲು ನಗರಸಭೆ ಟೆಂಡರ್ ಆಹ್ವಾನ ನೀಡಿದ್ದು ಇದರಿಂದ ಜನ ಸಾಮಾನ್ಯರಿಗೆ ತೊಂದರೆಯಾಗಲಿದ್ದು, ಈ ನಿರ್ಧಾರವನ್ನು ಹಿಂಪಡೆಯುವಂತೆ ಮನವಿಯಲ್ಲಿ ಒತ್ತಾಯಿಸಿದ್ದಾರೆ. ಅದರೊಂದಿಗೆ ನಗರದಲ್ಲಿ ರಸ್ತೆಗಳು ಸಂಪೂರ್ಣ ಹಾನಿಗೊಂಡಿದ್ದು ಕೂಡಲೇ ದುರಸ್ತಿಗೆ ಕ್ರಮಕೈಗೊಳ್ಳಬೇಕೆಂದು ಮನವಿಯಲ್ಲಿ ಆಗ್ರಹಿಸಿದ್ದಾರೆ.
ನಗರಸಭೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆಯನ್ನು ಅವೈಜ್ಞಾನಿಕವಾಗಿ ಏರಿಕೆ ಮಾಡಿದ್ದು ಇದನ್ನು ಪುನರ್ ಪರಿಶೀಲಿಸಿ ವೈಜ್ಞಾನಿಕವಾಗಿ ತೆರಿಗೆ ನಿಗಧಿಪಡಿಸುವಂತೆ ಒತ್ತಾಯಿಸಿದ್ದಾರೆ.
ನಗರದ ಐ.ಜಿ ರಸ್ತೆ, ಕೆ.ಎಂ. ರಸ್ತೆಯಲ್ಲಿ ಅಳವಡಿಸಿರುವ ಅವೈಜ್ಞಾನಿಕ ರಸ್ತೆಯ ವಿಭಜಕದಿಂದ ಸಂಚಾರ ವ್ಯವಸ್ಥೆ ಸಂಪೂರ್ಣ ಅಸ್ತವ್ಯಸ್ತವಾಗಿದೆ ಜೊತೆಗೆ ವ್ಯಾಪಾರ ವಹಿವಾಟುಗಳ ಮೇಲೆ ತೀವ್ರ ಪರಿಣಾಮ ಬೀರುತ್ತಿದೆ ಆದ್ದರಿಂದ ಸಾರ್ವಜನಿಕರ ಹಿತಾದೃಷ್ಟಿಯಿಂದ ವಿಭಜಕವನ್ನು ತೆರವುಗೊಳಿಸಿ ಸಾರ್ವಜನಿಕರು ಮತ್ತು ವರ್ತಕರಿಗೆ, ಪ್ರವಾಸಿಗಳಿಗೆ ಅನುಕೂಲ ಕಲ್ಪಿಸಬೇಕೆಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.
ಈ ಸಂದರ್ಭದಲ್ಲಿ ನಗರ ಕಾಂಗ್ರೇಸ್ ಅಧ್ಯಕ್ಷ ತನೋಜ್ಕುಮಾರ್, ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಮಂಜೇಗೌಡ, ವಕ್ತಾರ ಹಿರೇಮಗಳೂರು ಪುಟ್ಟಸ್ವಾಮಿ, ಶಿವು ಸೇರಿದಂತೆ ಹಲವರಿ ದ್ದರು.

























Discussion about this post