ಚೆನ್ನೈ: ಲೈಂಗಿಕ ದೌರ್ಜನ್ಯದಿಂದ ತಪ್ಪಿಸಿಕೊಳ್ಳಲು ಅಪ್ರಾಪ್ತ ಬಾಲಕಿಯೇ ತನ್ನ ತಂದೆಯನ್ನು ಕೊಲೆ ಮಾಡಿರುವ ಘಟನೆ ತಮಿಳುನಾಡಿನ ವಿಲ್ಲುಪುರಂ ಜಿಲ್ಲೆಯಲ್ಲಿ ಘಟನೆ ನಡೆದಿದೆ.
ಕಡುಕ ತಂದೆ ನೇಡುತ್ತಿದ್ದ ಲೈಂಗಿಕ ದೌರ್ಜನ್ಯದಿಂದ ತಪ್ಪಿಸಿಕೊಳ್ಳಲು ಬಾಲಕಿ ಆತ್ಮರಕ್ಷಣೆಗಾಗಿ ತನ್ನ ತಂದೆಯನ್ನೇ ಕೊಲೆ ಮಾಡಿದ್ದಾಳೆ. ಕೆಲವು ದಿನಗಳ ಹಿಂದೆ ಬಾಲಕಿ ಬಟ್ಟೆ ಒಗೆಯುವ ಕೆಲಸದಿಂದ ಮನೆಗೆ ಹಿಂದಿರುಗಿದ ಬಳಿಕ ತನ್ನ ತಂದೆಯನ್ನು ಕೊಲೆ ಮಾಡಿರುವುದಾಗಿ ನೆರೆಹೊರೆಯವರ ಬಳಿ ಹೇಳಿಕೊಂಡಿದ್ದಾಳೆ.
ಈ ಹಿಂದೆ ಈ ಪ್ರಕರಣ ಕುರಿತಂತೆ ಅನುಮಾನಾಸ್ಪದ ಸಾವು ಪ್ರಕರಣ ದಾಖಲಿಸಿದ್ದರು. ಆದರೆ ಇದೀಗ ತನಿಖೆ ಬಳಿಕ 40 ವರ್ಷದ ತನ್ನ ತಂದೆಯನ್ನು ಕೊಂದಿದ್ದು, ಮಗಳೇ ಎಂಬ ವಿಚಾರ ಬೆಳಕಿಗೆ ಬಂದಿದೆ ಎಂದು ಪೊಲೀಸರು ಹೇಳಿದ್ದಾರೆ.
ಮದ್ಯವ್ಯಸನರಾಗಿದ್ದ ತಂದೆ ನೀಡುತ್ತಿದ್ದ ಹಿಂಸೆಯನ್ನು ಸಹಿಸಲಾಗದೇ ಬಾಲಕಿಯೆ ತಂದೆಯನ್ನು ಕೊಲೆಮಾಡಿರುವುದಾಗಿ ಒಪ್ಪಿಕೊಂಡಿದ್ದಾಳೆ. ಇನ್ನೂ ಈ ವಿಚಾರವಾಗಿ ಕಾನೂನು ತಜ್ಞರನ್ನು ಸಂಪರ್ಕಿಸಿದಾಗ ಭಾರತೀಯ ದಂಡ ಸಂಹಿತೆ ಸೆಕ್ಷನ್ 100ರ ಅಡಿ ಖಾಸಗಿ ರಕ್ಷಣೆಯ ಹಕ್ಕನ್ನು ಜಾರಿಗೊಳಿಸಿದೆ ಎಂದು ತಿಳಿಸಿದ್ದಾರೆ. ಹೀಗಾಗಿ ನಾವು ಆಕೆಯನ್ನು ಮುಕ್ತಗೊಳಿಸಿದ್ದೇವೆ ಎಂದು ವಿಲ್ಲುಪುರಂ ಪೊಲೀಸ್ ಅಧಿಕಾರಿ ಎನ್. ಶ್ರೀನಾಥ್ ತಿಳಿಸಿದ್ದಾರೆ.
ವಿಚಾರಣೆ ವೇಳೆ ಬಾಲಕಿ ತನ್ನ ತಾಯಿ ಕೆಲವು ವರ್ಷಗಳ ಹಿಂದೆ ಸಾವನ್ನಪ್ಪಿದ್ದರು. ಅಕ್ಕ 160 ಕಿ.ಮೀ ದೂರದಲ್ಲಿರುವ ಚೆನ್ನೈನ ಜವಳಿ ಅಂಗಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವುದಾಗಿ ತಿಳಿಸಿದ್ದಾಳೆ ಮತ್ತು ಆಕೆ ತನ್ನ ತಂದೆಯೊಟ್ಟಿಗೆ ವಾಸಿಸುವಾಗ ಈ ಘಟನೆ ನಡೆದಿದೆ.

























Discussion about this post