ಜಯಪುರ: ಚಿಕ್ಕಮಗಳೂರು-ಶೃಂಗೇರಿ ಸಂಪರ್ಕ ರಾಜ್ಯ ಹೆದ್ದಾರಿಯಲ್ಲಿರುವ ಜಯಪುರದ ಸುರುಗುಂದ ಸೇತುವೆಯಿಂದ ಕಾರೊಂದು ಕೆಳಗೆ ಬಿದ್ದಿದ್ದು ಕಾರಿನ ಚಾಲಕ ನಿವೃತ್ತ ಶಿಕ್ಷಕ ಮೃತ್ಯುಂಜಯ(೭೧) ಸಾವನ್ನಪ್ಪಿದ್ದಾರೆ.
ಚಾಲಕನ ನಿಯಂತ್ರಣ ತಪ್ಪಿದ ಕಾರು ಸೇತುವೆಯ ತಡೆಗೋಡೆಗೆ ಗುದ್ದಿದ್ದು, ಅಪಘಾತದ ರಭಸಕ್ಕೆ ಚಾಲಕ ರಸ್ತೆಗೆ ಬಿದ್ದ ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದರು. ಗಾಯಾಳುವನ್ನು ಕೊಪ್ಪ ಆಸ್ಪತ್ರೆಗೆ ಕರೆದೊಯ್ಯುವ ವೇಳೆಯಲ್ಲಿ ಮೃತಪಟ್ಟರು ಎನ್ನಲಾಗಿದೆ. ನಿವೃತ್ತ ಶಿಕ್ಷಕ ಮೃತ್ಯುಂಜಯ ಜಯಪುರದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳ ಅಚ್ಚುಮೆಚ್ಚಿನ ದೈಹಿಕ ಶಿಕ್ಷಕರಾಗಿ ಕಾರ್ಯ ನಿರ್ವಹಿಸಿದ್ದರು.
ಅಪಘಾತದಲ್ಲಿ ಸುಮಾರು ಮೂವತ್ತಕ್ಕೂ ಹೆಚ್ಚು ಅಡಿ ಆಳಕ್ಕೆ ಕಾರು ಬಿದ್ದು ಪರಿಣಾಮ ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ. ಗಾಯಾಳುವನ್ನು ಹೆಚ್ಚಿನ ಚಿಕಿತ್ಸೆಗೆ ಜಯಪುರದ ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಬೇರೆ ಆಸ್ಪತ್ರೆಗೆ ಕರೆದೊಯ್ಯಲು ೧೦೮ ಆಂಬುಲೆನ್ಸ್ಗೆ ಕರೆ ಮಾಡಲಾಗಿತ್ತಾದರೂ, ಒಂದು ಘಂಟೆ ತಡವಾಗಿ ಆಂಬುಲೆನ್ಸ್ ಬಂದಿದ್ದರಿಂದ ಗಾಯಾಳುವಿಗೆ ಸಕಾಲದಲ್ಲಿ ಚಿಕಿತ್ಸೆ ದೊರೆಯದೆ ಸಾವನ್ನಪ್ಪಿದ್ದಾರೆ ಎಂದು ನಾಗರಿಕರು ದೂರಿದ್ದು, ಜಯಪುರಕ್ಕೆ ಒಂದು ೧೦೮ ಅಂಬ್ಯುಲೆನ್ಸ್ ವಾಹನ ನೀಡಬೇಕು ಎಂದು ಆಗ್ರಹಿಸಿದ್ದಾರೆ.

























Discussion about this post