ರಾಯಚೂರು: ಶಾಲೆ ಇಲ್ಲದ ಈ ಸಮಯದಲ್ಲಿ ಕೂಲಿ ಕೆಲಸಕ್ಕೆ ಕರೆದೊಯ್ಯುತ್ತಿದ್ದ ಸುಮಾರು ೫೯ ಮಕ್ಕಳನ್ನು ರಾಯಚೂರು ಜಿಲ್ಲೆ ದೇವದುರ್ಗ ತಾಲ್ಲೂಕಿನ ಗಬ್ಬೂರು ಮತು ಸಿರವಾರ ಕ್ರಾಸ್ ಬಳಿ ರಕ್ಷಣೆ ಮಾಡಲಾಗಿದೆ.
ಮಕ್ಕಳನ್ನು ೫ ವಾಹನಗಳಲ್ಲಿ ಕರೆದೊಯ್ಯಲಾಗುತ್ತಿತ್ತು. ಪೊಲೀಸರು ಈ ಐದು ವಾಹನಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಮಕ್ಕಳ ರಕ್ಷಣಾ ಇಲಾಖೆ ಅಧಿಕಾರಿಗಳ ತಂಡ ದಾಳಿ ನಡೆಸಿ, ಮಕ್ಕಳನ್ನು ರಕ್ಷಣೆ ಮಾಡಿದೆ.
ಮಾಹಿತಿ ಪಡೆದಿದ್ದ ಮಕ್ಕಳ ರಕ್ಷಣಾ ಇಲಾಖೆಯ ಜಿಲ್ಲಾಧಿಕಾರಿ ಮಂಜುನಾಥ್ ಮತ್ತು ತಂಡ ಬೆಳ್ಳಂಬೆಳಿಗ್ಗೆ ದಾಳಿ ನಡೆಸಿ ಮಕ್ಕಳನ್ನು ವಶಕ್ಕೆ ತೆಗೆದುಕೊಂಡಿದೆ. ಸಿರವಾಸೆ ಠಾಣೆಯಲ್ಲಿ ಮಕ್ಕಳ ಕಳ್ಳಸಾಗಾಣಿಕೆ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಪಾಲಕರಿಗೆ ಅವರವರ ಮಕ್ಕಳನ್ನು ಹಸ್ತಾಂತರ ಮಾಡಲಾಗಿದ್ದು, ಯಾವುದೇ ಮಕ್ಕಳನ್ನು ಕೂಲಿಗೆ ಕಳಿಸದಂತೆ ಪಾಲಕರಿಗೆ ಎಚ್ಚರಿಕೆ ನೀಡಲಾಗಿದೆ

























Discussion about this post