ಚಿಕ್ಕಮಗಳೂರು: ರಾಷ್ಟ್ರಪಿತ ಮಹತ್ಮಾ ಗಾಂಧೀಜಿ ಅವರ ಸತ್ಯ ಮತ್ತು ಅಹಿಂಸಾ ಮಾರ್ಗದಲ್ಲಿ ನಡೆದ ಸಮಾಜದಲ್ಲಿ ಸಆಮರಸ್ಯ ಸ್ಥಾಪನೆಯಾಗುತ್ತದೆ ಎಂದು ಮಾಜಿ ಸಂಸದ ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ದೃವನಾರಾಯಣ್ ಅಭಿಪ್ರಾಯಪಟ್ಟಿದ್ದಾರೆ.
ಜಿಲ್ಲಾ ಕಾಂಗ್ರೆಸ್ ಕಚೇರಿಯ್ಲಿ ಬ್ಲಾಕ್ ಕಾಂಗ್ರೆಸ್ ಆಯೋಜಿಸಿದ್ದ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತಾಡಿ, ದೇಶದ ಎಲ್ಲಾ ಸಮಸ್ಯೆಗಳ ಪರಿಹಾರಕ್ಕೆ ಗಾಂಧೀಜಿ ಅವರ ಸರಳತೆ, ಸತ್ಯ ಮತ್ತು ಅಹಿಂಸಾ ಮಾರ್ಗ ಸಹಕಾರಿಯಾಗುತ್ತದೆ. ಆದರೆ, ರಾಜಕಾರಣಕ್ಕಾಗಿ ಗಾಂಧೀಜಿ ಅವರ ಸಿದ್ಧಾಂತ ಮತ್ತು ಸತ್ಯದ ಪಥವನ್ನು ಮರೆಯುತ್ತಿದ್ದೇವೆ ಎಂದು ವಿಷಾದಿಸಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್ ಮಾತನಾಡಿ, ಸ್ವಾತಂತ್ರ್ಯ ಚಳವಳಿಗೆ ಈ ದೇಶದ ಜನರನ್ನು ಕೇವಲ ಅಹಿಂಸಾ ಮಾರ್ಗದಲ್ಲೇ ಜಾಗೃತಗೊಳಿಸಿದ ಕೀರ್ತಿ ಗಾಂಧೀಜಿಯವರದ್ದಾಗಿದೆ. ಅವರ ಮಾರ್ಗದರ್ಶನದಲ್ಲಿ ದೇಶ ಸ್ವಾತಂತ್ರ್ಯ ಗಳಿಸಲು ಸಹಕಾರಿಯಾಯಿತು. ಅವರ ಸಿದ್ಧಾಂತವನ್ನು ಮೈಗೂಡಿಸಿಕೊಂಡು ಸಾಗುವ ಮೂಲಕ ಸರ್ಮದ್ಧ ಭಾರತ ನಿರ್ಮಾಣ ಮಾಡೋಣ ಎಂದು ಹೇಳಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಪಿ.ಮಂಜೇಗೌಡ ಅಧ್ಯಕ್ಷತೆ ವಹಿಸಿದ್ದರು. ವಿಧಾನ ಪರಿಷತ್ ಮಾಜಿ ಶಾಸಕಿ ಎ.ವಿ.ಗಾಯತ್ರಿ ಶಾಂತೇಗೌಡ, ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷರಾದ ಡಾ.ಡಿ.ಎಲ್.ವಿಜಯಕುಮಾರ್, ಎಂ.ಎಲ್.ಮೂರ್ತಿ, ಕೆಪಿಸಿಸಿ ಮಹಿಳಾ ಕಾಂಗ್ರೆಸ್ ಉಪಾಧ್ಯಕ್ಷೆ ರೇಖಾ ಹುಲಿಯಪ್ಪಗೌಡ, ಜಿಪಂ ಮಾಜಿ ಅಧ್ಯಕ್ಷರಾದ ಕೆ.ಮಹಮದ್, ಎ.ಎನ್.ಮಹೇಶ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ.ಸಿ.ಶಿವಾನಂದಸ್ವಾಮಿ, ಜಿಲ್ಲಾ ಕಾಂಗ್ರೆಸ್ ವಕ್ತಾರ ಹಿರೇಮಗಳೂರು ಪುಟ್ಟಸ್ವಾಮಿ, ರೂಬೆನ್ ಮೊಸೆಸ್, ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕ ಅಧ್ಯಕ್ಷ ಮಹಮದ್ ನಯಾಜ್, ಕಾರ್ಯದರ್ಶಿ ಶಾದಬ್, ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕ ಅಧ್ಯಕ್ಷ ಜಾವಿದ್, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಹಿರೇಮಗಳೂರು ರಾಮಚಂದ್ರ, ಸೇವಾದಳ ಅಧ್ಯಕ್ಷ ಸಿಲ್ವರ್ ಸ್ಟಾರ್, ಬ್ಲಾಕ್ ಕಾಂಗ್ರೆಸ್ ಮುಖಂಡರಾದ ನಾಗೇಶ್, ಪ್ರಕಾಶ್, ನಾಗಭೂಷಣ್ ಮತ್ತಿತರರು ಹಾಜರಿದ್ದರು.

























Discussion about this post