ಚನ್ನೈ: ಚನ್ನೈನ ಜೆಮ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಆಸ್ಪತ್ರೆಯಿಂದ ಮನೆಗೆ ಬರಬೇಕಾಗಿತ್ತು, ಆದರೆ ಮುಂಜಾನೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆಂದು ಮೂಲಗಳು ತಿಳಿಸಿದೆ.
ಕಳೆದ ೧೦ ದಿನಗಳಿಂದ ಅನಾರೋಗ್ಯದಿಂದಾಗಿ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಮುಂಜಾನೆ ಹೃದಯಾಘಾತವಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರೆಸಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ ಎಂದು ಜೆಮ್ ಆಸ್ಪತ್ರೆಯ ಸಿಇಒ ಎಸ್. ಅಶೋಕನ್ ಹೆಲ್ತ್ ಬುಲೆಟಿನ್ ನಲ್ಲಿ ತಿಳಿಸಿದ್ದಾರೆ.
ವಿಜಯಲಕ್ಷ್ಮೀ ಅವರ ಅಂತ್ಯಕ್ರಿಯೆಯು ಪನ್ನೀರಸೆಲ್ವಂ ಅವರ ಊರಾದ ಪೆರಿಯಾಕುಲಂನಲ್ಲಿ ಗುರುವಾರ ನಡೆಯಲಿದೆ ಎಂದು ತಿಳಿದುಬಂದಿದೆ. ತಮಿಳುನಾಡಿನ ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್, ವಿರೋಧ ಪಕ್ಷದ ನಾಯಕ ಮತ್ತು ಎಐಎಡಿಎಂಕೆ ಸಹಕಾರ್ಯದರ್ಶಿ ಎಡಪ್ಪಾಡಿ ಕೆ ಪಳನಿಸ್ವಾಮಿ, ಜಲ ಸಂಪನ್ಮೂಲ ಸಚಿವ ದುರೈ ಮುರುಗನ್ ಮತ್ತು ಎಐಎಡಿಎಂಕೆ ನಾಯಕರು ಸೇರಿದಂತೆ ಹಲವರು ಪನ್ನೀರಸೆಲ್ವಂ ಅವರನ್ನು ಭೇಟಿ ಮಾಡಿ ಸಾಂತ್ವನ ಹೇಳಿದ್ದಾರೆ.
ಅಲ್ಲದೇ ವಿಸಿಕೆ ಮುಖ್ಯಸ್ಥ ಸೇರಿದಂತೆ ಅನೇಕ ರಾಜಕೀಯ ಪಕ್ಷದ ನಾಯಕರು. ಎಂಡಿಎಂಕೆ ನಾಯಕರು ಸಹ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

























Discussion about this post