ಚಿಕ್ಕಮಗಳೂರು: ನಗರದಲ್ಲಿ ನಿರ್ಮಾಣವಾಗುವ ವಸತಿ ಯೋಜನೆ ನೂತನ ಬಡಾವಣೆಗೆ ಸರ್.ಎಂ.ವಿಶ್ವೇಶ್ವರಯ್ಯ ಅವರ ಹೆಸರಿಡಲು ಚಿಂತನೆ ಮಾಡಲಾಗಿದೆ ಈ ಬಗ್ಗೆ ಜಿಲ್ಲೆಯ ಜನಪ್ರತಿನಿಧಿಗಳು ಮನವೊಲಿಸುವ ಕಾರ್ಯ ಮಾಡಲಾಗುವುದು ಎಂದು ನಗರಾಭಿದ್ಧಿ ಪ್ರಾಧಿಕಾರದ ನಗರ ಯೋಜನಾ ಸದಸ್ಯ ಶಿವಕುಮಾರ್ ತಿಳಿಸಿದರು.
ಅವರು ನಗರಸಭೆಯ ಕಛೇರಿ ಆವರಣದಲ್ಲಿ ಭಾರತ ರತ್ನ ಸರ್.ಎಂ.ವಿಶ್ವೇಶ್ವರಯ್ಯ ಅವರ ೧೬೧ ವರ್ಷದ ಜನ್ಮದಿನೋತ್ಸವದ ಸ್ಮರಣಾರ್ಥ ಅಭಿಯಂತರರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ನಗರದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ನಿರ್ಮಾಣವಾಗುವ ನೂತನ ವಸತಿ ಯೋಜನೆ ಬಡಾವಣೆಗೆ ಸರ್.ಎಂ.ವಿ ಅವರ ಹೆಸರಿಡಲು ಉದ್ದೇಶಿಸಲಾಗಿದೆ. ಈ ಬಗ್ಗೆ ಜನಪ್ರತಿನಿಧಿಗಳು ಅಭಿಪ್ರಾಯ ಸಂಗ್ರಹಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಈ ನಿಟ್ಟಿನಲ್ಲಿ ಪ್ರಾಧಿಕಾರದ ಆಯುಕ್ತರು ಹೆಸರಿಡಲು ಕ್ರಮವಹಿಸುವಂತೆ ಮನವಿ ಮಾಡಿದರು.
ಭಾರತ ದೇಶದ ಪವಿತ್ರ ಭೂಮಿಯಲ್ಲಿ ಜನಿಸಿದ ಪುಣ್ಯ ಪುರು?ರಲ್ಲಿ ಕನ್ನಡ ನಾಡಿನ ಕೀರ್ತಿ ಪತಾಕೆಯನ್ನು ವಿಶ್ವದ ಮಟ್ಟದಲ್ಲಿ ಎತ್ತಿ ಹಿಡಿದ ಮಹಾನ್ ಮೇಧಾವಿ, ತಂತ್ರಜ್ಞ, ಸರ್ ಮೋಕ್ಷಗುಂಡಂ ವಿಶ್ವೇಶ್ವರಯ್ಯ ನವರ ಜನ್ಮ ದಿನ ಸೆಪ್ಟೆಂಬರ್ ೧೫. ಈ ದಿನವನ್ನು ದೇಶಾದ್ಯಂತ ಇಂಜಿನಿಯರುಗಳ ದಿನ ವನ್ನಾಗಿ ಆಚರಿಸುತ್ತಿದೆ.
ಇಂದು ನಮ್ಮ ಕನ್ನಡದ ನೆಲ, ವಿಜ್ಞಾನ, ತಂತ್ರಜ್ಞಾನಗಳ ತವರೂರಾಗಿದೆ. ಇದರ ಬುನಾದಿಯಲ್ಲಿ ವಿಶ್ವೇಶ್ವರಯ್ಯನವರ ಅಗಾಧ ಪರಿಶ್ರಮ ದೂರದೃಷ್ಟಿ, ಸಮಾಜಮುಖಿ ಯೋಜನೆಗಳಿವೆ. ಅವರ ಪ್ರತಿಭೆಯನ್ನು ಮನಗಂಡು ಅವರೊಡನೆ ಸಹಕರಿಸಿದ, ಅವರ ಯೋಜನೆಗಳನ್ನು ಬೆಂಬಲಿಸಿದ ಮೈಸೂರು ಮಹಾರಾಜರು, ದಿವಾನರುಗಳ ಸಹಯೋಗವೂ ಇದೆ. ನಿಜವಾದ ಅರ್ಥದಲ್ಲಿ ವಿಶ್ವೇಶ್ವರಯ್ಯ ಮೈಸೂರು ಸಂಸ್ಥಾನದ ಭಾಗ್ಯವಿಧಾತ, ಆಧುನಿಕ ಮೈಸೂರಿನ ನಿರ್ಮಾಣಕ್ಕೆ ಕಾರಣರಾದವರು ಎಂದು ಸ್ಮರಿಸಿದರು.
ನಗರಸಭೆ ಪೌರಾಯುಕ್ತ ಬಿ.ಸಿ ಬಸವರಾಜ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಮೈಸೂರು ಸಂಸ್ಥಾನದಲ್ಲಿ ಹತ್ತು ಹಲವು ಯೋಜನೆಗಳನ್ನು ಯಶಸ್ವಿಯಾಗಿ ಪೂರೈಸಿದ ಮಹಾನ್ ಮೇಧಾವಿ ಸರ್.ಎಂ.ವಿ. ನಗರದ ಒಳಚರಂಡಿ, ನೀರ್ಗಾಲುವೆಗಳ ವ್ಯವಸ್ಥೆಯನ್ನೂ ನಿರೂಪಿಸಿದರು.
ಕನ್ನಂಬಾಡಿ ಆಣೆಕಟ್ಟು ಮತ್ತು ವಿದ್ಯುಚ್ಚಕ್ತಿ ಯೋಜನೆಗಳನ್ನು ಪೂರೈಸಿದಂತಹ ಮಹತ್ವದ ಸಾಧನೆಗಳಿಗಾಗಿ ಬ್ರಿಟಿ? ಸರ್ಕಾರ ಅವರನ್ನು ನೈಟ್ ಕಮಾಂಡರ್ ಆಗಿ ಅಲಂಕರಿಸಿ ಸರ್ ಪದವಿಯನ್ನು ನೀಡಿತು. ಆಡಳಿತದಲ್ಲಿ ದಕ್ಷರಾದ ವಿಶ್ವೇಶ್ವರಯ್ಯನವರು ೧೯೧೨ರಲ್ಲಿ ಮೈಸೂರು ಸಂಸ್ಥಾನದ ಏಳನೆ ದಿವಾನರಾದರು. ಹೆಣ್ಣುಮಕ್ಕಳ ವಿದ್ಯಾಭ್ಯಾಸಕ್ಕಾಗಿ ಮಹಾರಾಣಿ ಕಾಲೇಜು, ಹಲವಾರು ಶಿಕ್ಷಣ ಸಂಸ್ಥೆಗಳು, ಹಾಸ್ಟೆಲ್ ಸೌಲಭ್ಯಗಳು, ಮೈಸೂರು ವಿಶ್ವವಿದ್ಯಾಲಯ, ವಿವಿಧರೀತಿಯ ಕೈಗಾರಿಕೆಗಳು, ಸಾರ್ವಜನಿಕ ಗ್ರಂಥಾಲಯಗಳು ಇವೆಲ್ಲಾ ವಿಶ್ವೇಶ್ವರಯ್ಯನವರ ಸಮಗ್ರ ಕೊಡುಗೆಗಳು ಎಂದು ಸ್ಮರಿಸಿದರು.
ನಗರ ಆಶ್ರಯ ಸಮಿತಿ ಅಧ್ಯಕ್ಷ ನಾರಾಯಣಸ್ವಾಮಿ ಮಾತನಾಡಿ ನಮ್ಮ ಎಲ್ಲ ಆರ್ಥಿಕ ರೋಗಗಳಿಗೂ ವಿದ್ಯಾಭ್ಯಾಸವೇ ಮದ್ದು ಎಂದು ವಿಶ್ವೇಶ್ವರಯ್ಯ ಬಲವಾಗಿ ನಂಬಿದ್ದರು. ವಿಶ್ವೇಶ್ವರಯ್ಯನವರು ಶಿಕ್ಷಣ, ತಾಂತ್ರಿಕ ವಿದ್ಯಾಭ್ಯಾಸ, ಕೈಗಾರಿಕಾ ವಿಕಾಸಕ್ಕೆ ಭದ್ರ ಬುನಾದಿ ಹಾಕಿದರು. ಭಾರತದ ಆರ್ಥಿಕ ಅಭಿವೃದ್ಧಿಗೆ ವಿಶ್ವೇಶ್ವರಯ್ಯನವರ ಕೊಡುಗೆ ಅಗಾಧವಾದದ್ದು ಭಾರತದ ಇತಿಹಾಸದಲ್ಲಿಯೇ ವಿಶ್ವೇಶ್ವರಯ್ಯ ಅವರಿಗೆ ಹೋಲಿಸುವ ಮತ್ತೊಬ್ಬ ವ್ಯಕ್ತಿ ಸಿಗಲಾರರು ಎಂದರು.
ಕೆಎಸ್ಡಬ್ಲೂ ಸಹಾಯಕ ಕಾರ್ಯಪಾಲಕ ಅಭಿಯಂತರ ಮಲ್ಲೇಶ್ನಾಯ್ಕ್ ಮಾತನಾಡಿ ದೇಶದ ಸರ್ವತೋಮುಖ ಅಭಿವೃದ್ಧಿ ಭದ್ರಾಬುನಾದಿ ಹಾಕಿದವರು ವಿಶ್ವೇಶ್ವರಯ್ಯನವರು. ದೇಶದಲ್ಲಿ ಕೈಗಾರಿಕಾ ಕ್ರಾಂತಿಗೆ ಮುನ್ನುಡಿ ಬರೆದವರು. ಬದುಕಿನಲ್ಲಿ ಅಭಿಯಂತರರ ಕೆಲಸ ಕೇವಲ ಹಣ ಸಂಪಾದನೆ ಮುಖ್ಯ ಗುರಿಯಾಗಬಾರದು ಬದಲಾಗಿ ನಾವು ಮಾಡುವ ಕೆಲಸ ಶಾಶ್ವತವಾಗಿ ಸಮಾಜಕ್ಕೆ ಮಾದರಿಯಾಗಿರಬೇಕು ಎಂದು ಕಿವಿಮಾತು ಹೇಳಿದರು.
ನಗರಸಭೆ ಇಂಜಿನಿಯರ್ ಚಂದನ್ ಮಾತನಾಡಿ ಸರ್.ಎಂ.ವಿ. ಅವರ ಕಾರ್ಯ ದಕ್ಷತೆ ಅವರ ಅಭಿವೃದ್ಧಿ ಯೋಜನೆಗಳು ತೋರ್ಪಡಿಸುತ್ತವೆ. ಪುಣೆಯ ಖಡಕ್ವಾಸ್ಲಾ ಜಲಾಶಯ ಹಾಗೂ ಒರಿಸ್ಸಾದ ಮಹಾನದಿ ಪ್ರವಾಹ ನಿಯಂತ್ರಣ ಯೋಜನೆ ಸೇರಿದಂತೆ ಹತ್ತು ಹಲವು ಯೋಜನೆಗಳನ್ನು ಯಶಸ್ವಿಯಾಗಿ ಪೂರೈಸಿದ ಮಹಾನ್ ಮೇಧಾವಿ. ತಮ್ಮ ತಂತ್ರಜ್ಞಾನ, ಚಮತ್ಕಾರಿಕೆಯ ಕಾರ್ಯವೈಖರಿ ಆಡಳಿತದಿಂದಾಗಿ ಇಂದಿಗೂ ಜನಮಾನಸದಲ್ಲಿ ನೆಲೆಯಾಗಿದ್ದಾರೆ ಎಂದರು.
ಓಂಕಾರಮೂರ್ತಿ ಮಾತನಾಡಿ ಕನ್ನಂಬಾಡಿ ಆಣೆಕಟ್ಟು ಮತ್ತು ವಿದ್ಯುಚ್ಚಕ್ತಿ ಯೋಜನೆಗಳನ್ನು ಪೂರೈಸಿದಂತಹ ಮಹತ್ವದ ಸಾಧನೆಗಳಿಗಾಗಿ ಬ್ರಿಟಿ? ಸರ್ಕಾರ ಅವರನ್ನು ನೈಟ್ ಕಮಾಂಡರ್ ಆಗಿ ಅಲಂಕರಿಸಿ ಸರ್ ಪದವಿಯನ್ನು ನೀಡಿತು. . ಕನ್ನಡ ಸಾಹಿತ್ಯ ಪರಿ?ತ್ತಿನ ನಿರ್ಮಾಣ ಹಾಗೂ ಆ ಮೂಲಕ ಕನ್ನಡಿಗರ ಒಕ್ಕೂಟ, ಶಿಕ್ಷಣ ಮತ್ತು ಬೆಳವಣಿಗೆಯಲ್ಲಿ ಕೂಡಾ ವಿಶ್ವೇಶ್ವರಯ್ಯನವರ ಬೆಂಬಲ ಪ್ರಮುಖವಾದದ್ದು. ಲಂಚಕೋರತನ, ಲಾಭಕೋರತನದ ಸವಾಲುಗಳನ್ನು ಎದುರಿಸುತ್ತಿರುವ ಇಂದಿನ ಸಮಾಜದಲ್ಲಿ ವಿಶ್ವೇಶ್ವರಯ್ಯ ಅವರ ಪ್ರಾಮಾಣಿಕ ನಿಸ್ವಾರ್ಥ ದುಡಿಮೆ ನಮಗೆ ದಾರಿದೀಪವಾಗಬಲ್ಲದು ಎಂದರು.
ಈ ಸಂದರ್ಭದಲ್ಲಿ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಸ್ಯಾನಿಟೈಸರಿ ಸೂಪರ್ವೈಸರ್ ಅಣ್ಣಯ್ಯ, ಅಭಿಯಂತರರಾದ ಮಲ್ಲಿಕಾರ್ಜುನ್ ನಟರಾಜ್, ಸಂತೋಷ್ ಇದ್ದರು. ಕಾರ್ಯಕ್ರಮದಲ್ಲಿ ರಾಜೇಶ್ವರಿ ಪ್ರಾರ್ಥಿಸಿದರು ಆರೋಗ್ಯ ಪರಿವೀಕ್ಷಕ ವೆಂಕಟೇಶ್ ಸ್ವಾಗತಿಸಿ ನಿರೂಪಿಸಿದರು,

























Discussion about this post