ಬೆಂಗಳೂರು: ರಾಜ್ಯದಲ್ಲಿ ಆಗಸ್ಟ್ 28ರಿಂದ 30 ರವರೆಗೆ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ನಡೆಯಲಿದೆ. ಪರೀಕ್ಷೆಗಾಗಿ ೨,೦೧,೮೧೬ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ. ಬೆಂಗಳೂರಿನಲ್ಲಿ ೮೬ ಕೇಂದ್ರ, ಉಳಿದಂತೆ ಇತರೆ ಜಿಲ್ಲೆಗಳಲ್ಲಿ ಸೇರಿ ೫೩೦ ಕೇಂದ್ರಗಳು ಸಿಇಟಿ ಪರೀಕ್ಷಾ ಕೇಂದ್ರಗಳಾಗಿ ಸಜ್ಜುಗೊಂಡಿವೆ.
ಕೋವಿಡ್ ನಿಯಮಾವಳಿಗಳ ಅನುಸಾರ ಸ್ಯಾನಿಟೈಜ್ ಮಾಡಲಾಗಿದ್ದು, ವಿದ್ಯಾರ್ಥಿಗಳು ಮಾಸ್ಕ್ ಕಡ್ಡಾಯವಾಗಿ ಧರಿಸಬೇಕಿದೆ. ಆ.೨೮: ಜೀವಶಾಸ್ತ್ರ ಮತ್ತು ಗಣಿತ ಆ.೨೯: ಭೌತಶಾಸ್ತ್ರ ಮತ್ತು ರಸಾಯನಶಾಸ್ತ್ರ ಆ.೩೦: ಹೊರನಾಡು ಮತ್ತು ಗಡಿಭಾಗದ ವಿದ್ಯಾರ್ಥಿಗಳಿಗೆ ಕನ್ನಡ ಭಾಷಾ ಪರೀಕ್ಷೆ ನಿಗಧಿಯಾದಂತೆ ಪರೀಕ್ಷಾ ಕೇಂದ್ರಗಳಲ್ಲಿ ಸಿಇಟಿ ಪರೀಕ್ಷೆ ನಡೆಯುವುದು.

























Discussion about this post