ಕೋಲಾರ: ಜೆಡಿಎಸ್ ಪಕ್ಷದ ವರಿಷ್ಠರ ವಿರುದ್ಧವೇ ಸ್ವಪಕ್ಷದ ಶಾಸಕ ಶ್ರೀನಿವಾಸ್ ಗೌಡ ಕಿಡಿಕಾರಿದ್ದಾರೆ. ಜೆಡಿಎಸ್ ಪಕ್ಷ ಒಂದು ಕುಟುಂಬಕ್ಕೆ ಮಾತ್ರ ಸೀಮಿತ. ಎಲ್ಲಾ ಅಧಿಕಾರ ಹೆಚ್.ಡಿ ದೇವೇಗೌಡರ ಕುಟುಂಬಕ್ಕೆ ಬೇಕು ಎಂದು ಶಾಸಕ ಶ್ರೀನಿವಾಸ್ ಗೌಡ ವಾಗ್ದಾಳಿ ನಡೆಸಿದರು.
ಮಾಧ್ಯಮಗಳ ಜತೆ ಇಂದು ಮಾತನಾಡಿದ ಜೆಡಿಎಸ್ ಶಾಸಕ ಶ್ರೀನಿವಾಸ್ ಗೌಡ, ನಾನು ಹಿರಿಯ ಶಾಸಕನಾಗಿದ್ದರೂ ಎಚ್.ಡಿ.ಕುಮಾರಸ್ವಾಮಿ ನನಗೆ ಸಚಿವ ಸ್ಥಾನ ನೀಡಲಿಲ್ಲ ಎಂದು ಖೇದ ವ್ಯಕ್ತಪಡಿಸಿದರು. ತಮ್ಮ ಪಕ್ಷದಲ್ಲೇ ತಾವು ನಾಲ್ಕು ಬಾರಿ ಶಾಸಕನಾಗಿದ್ದರೂ, ನನ್ನ ಆಸೆ ಆಕಾಂಕ್ಷೆಗಳಿಗೆ ಪಕ್ಷ ಮನ್ನಣೆ ನೀಡದೆ ಆಶಾಭಂಗ ಮಾಡಿದೆ ಎಂದು ಅವರು ವಾಗ್ದಾಳಿ ನಡೆಸಿದರು.
ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಅವರು ತಮಗೆ ಮಂತ್ರಿ ಪದವಿ ಕೊಡಲಿಲ್ಲ ಎಂದು ದೂರಿದ್ದಾರೆ. ಡಿಸಿಸಿ ಬ್ಯಾಂಕ್ ವಿಚಾರದಲ್ಲಿ ನಡೆಯುತ್ತಿರುವ ಬೆಳವಣಿಗೆ ರಾಜಕೀಯ ಪ್ರೇರಿತವಾದದ್ದು ಎಂದಿರುವ ಅವರು ಸಮಯ ಬಂದರೆ ವಿಧಾನಸಭಾ ಅಧಿವೇಶನದಲ್ಲಿ ಡಿಸಿಸಿ ಬ್ಯಾಂಕ್ ಬಗ್ಗೆ ಧ್ವನಿ ಎತ್ತುತ್ತೇನೆ ಎಂದು ಶ್ರೀನಿವಾಸ್ ಗೌಡ ತಿಳಿಸಿದರು.

























Discussion about this post